ಕೋಲ್ಕತ್ತಾದಲ್ಲಿ ನಡೆದ ಐ.ಎನ್.ಎಸ್. ಅಗ್ರೇ, ಐ.ಎನ್.ಎಸ್. ದುನಾಗಿರಿ ಮತ್ತು ಐ.ಎನ್.ಎಸ್. ಸಂಶೋಧಕ್ ತ್ರಿವಳಿ ನೌಕಾದಳ ಹಡಗು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 21st, 12:51 pm
ಪಶ್ಚಿಮ ಬಂಗಾಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್.ರವಿ ಜೀ, ಉತ್ಸಾಹಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ನೌಕಾಪಡೆಯ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಜೀ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಮಹಿಳೆಯರೇ ಮತ್ತು ಮಹನೀಯರೇ!ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಮೂರು ನೌಕಾ ಹಡಗುಗಳಾದ ಐಎನ್ಎಸ್ ದುನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರೇ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಯಾರಂಭಗೊಳಿಸಿದರು
June 21st, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸ ಮಾಡಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐ.ಎನ್.ಎಸ್. ದುನಾಗಿರಿ, ಸುಧಾರಿತ ರಹಸ್ಯ ಯುದ್ಧ ನೌಕೆ ಅಂದರೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾದ ಹಾಗು ವೈರಿಯ ರಾಡಾರ್, ಸೋನಾರ್, ದೃಶ್ಯ ಮತ್ತು ಇನ್ಫ್ರಾರೆಡ್ ಚಕ್ಷುಗಳಿಗೆ ಸುಲಭದಲ್ಲಿ ಗೋಚರಿಸದ ಮಧ್ಯಮ ಗಾತ್ರದ ನೌಕಾ ಯುದ್ದನೌಕೆ ಐ.ಎನ್.ಎಸ್. ಸಂಶೋಧಕ್ ಮತ್ತು ಜಲಾಂತರ್ಗಾಮಿ ನಿರೋಧಕ ಯುದ್ಧ ನೌಕೆ ಐ.ಎನ್.ಎಸ್. ಅಗ್ರೇ ಇವುಗಳನ್ನು ಕಾರ್ಯಾರಂಭಗೊಳಿಸಿದರು. ಈ ಸೇರ್ಪಡೆಗಳು ರಾಷ್ಟ್ರದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸುತ್ತವೆ ಮತ್ತು ಭೌಗೋಳಿಕ ರಾಜಕೀಯ ಬೆದರಿಕೆಗಳ ವಿರುದ್ಧ ನಮ್ಮ ಕರಾವಳಿ ನೀರಿನ ಭದ್ರತೆಯನ್ನು ಬಲಪಡಿಸುತ್ತವೆ. ಎಲ್ಲಾ ಮೂರು ಹಡಗುಗಳನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದೆ ಮತ್ತು 200ಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿದಂತೆ ಭಾರತೀಯ ಉದ್ಯಮದ ವ್ಯಾಪಕ ಭಾಗವಹಿಸುವಿಕೆಯೊಂದಿಗೆ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್‌ಎಸ್‌ಇ) ಕೋಲ್ಕತ್ತಾದಲ್ಲಿ ನಿರ್ಮಿಸಿದೆ. ಶೇಕಡಾ 75 ಕ್ಕಿಂತ ಹೆಚ್ಚು ಸ್ಥಳೀಯ ಸಾಮಗ್ರಿಗಳೊಂದಿಗೆ, ಈ ಹಡಗುಗಳು ಆತ್ಮನಿರ್ಭರತೆಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ.ನೌಕಾಪಡೆ ದಿನದ ಅಂಗವಾಗಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಪ್ರಧಾನಮಂತ್ರಿ ಅವರು ಶುಭಾಶಯ ತಿಳಿಸಿದ್ದಾರೆ
December 04th, 08:41 am
ಇಂದು ನೌಕಾಪಡೆ ದಿನದ ಅಂಗವಾಗಿ ಭಾರತೀಯ ನೌಕಾಪಡೆಯ ಎಲ್ಲಾ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ನಮ್ಮ ನೌಕಾಪಡೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪಕ್ಕೆ ಸಮಾನಾರ್ಥಕವಾಗಿದೆ ಎಂದು ಹೇಳಿದ್ದಾರೆ. ನೌಕಾಪಡೆ ಸಿಬ್ಬಂದಿ ನಮ್ಮ ತೀರಗಳನ್ನು ರಕ್ಷಿಸುತ್ತಾರೆ ಮತ್ತು ನಮ್ಮ ಕಡಲ ಹಿತಾಸಕ್ತಿಗಳನ್ನು ಹೆಚ್ಚಿಸುತ್ತಾರೆ. ''ಈ ವರ್ಷದ ದೀಪಾವಳಿಯನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಅಂದು ನಾನು ಐಎನ್‌ಎಸ್ ವಿಕ್ರಾಂತ್‌ನಲ್ಲಿರುವ ನೌಕಾಪಡೆ ಸಿಬ್ಬಂದಿಯೊಂದಿಗೆ ಕಳೆದೆ. ಭಾರತೀಯ ನೌಕಾಪಡೆಯ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ.ಐ.ಎನ್.ಎಸ್. ವಿಕ್ರಾಂತ್ ನಲ್ಲಿ ದೀಪಾವಳಿ ಆಚರಣೆಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
October 21st, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐ.ಎನ್.ಎಸ್. ವಿಕ್ರಾಂತ್ ನಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಆಚರಿಸಿದ ದೀಪಾವಳಿ ಆಚರಣೆಯ ಕ್ಷಣಗಳನ್ನು ಹಂಚಿಕೊಂಡರು. ಈ ದಿನವು ಒಂದು ಗಮನಾರ್ಹ ದಿನ, ಒಂದು ಗಮನಾರ್ಹ ಕ್ಷಣ ಮತ್ತು ಒಂದು ಗಮನಾರ್ಹ ದೃಶ್ಯವಾಗಿತ್ತು ಎಂದು ಉಲ್ಲೇಖಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಂದು ಕಡೆ ವಿಶಾಲ ಸಾಗರ ಮತ್ತು ಇನ್ನೊಂದು ಕಡೆ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಗಾಧ ಶಕ್ತಿಯನ್ನು ಪ್ರದರ್ಶಿಸುತ್ತದೆ. ಒಂದು ಕಡೆ ಅನಂತ ದಿಗಂತ ಮತ್ತು ಮಿತಿಯಿಲ್ಲದ ಆಕಾಶವನ್ನು ಪ್ರಸ್ತುತಪಡಿಸಿದರೆ, ಇನ್ನೊಂದು ಕಡೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಐ.ಎನ್.ಎಸ್. ವಿಕ್ರಾಂತ್ ನ ಬೃಹತ್ ಶಕ್ತಿಯನ್ನು ಪ್ರದರ್ಶಿಸುತ್ತದೆ. ಸಮುದ್ರದ ಮೇಲಿನ ಸೂರ್ಯನ ಬೆಳಕಿನ ಹೊಳಪು ದೀಪಾವಳಿಯ ಸಮಯದಲ್ಲಿ ವೀರ ಸೈನಿಕರು ಬೆಳಗಿದ ದೀಪಗಳನ್ನು ಹೋಲುತ್ತದೆ, ಇದು ದೀಪಗಳ ದೈವಿಕ ಹಾರವನ್ನು ಸ್ಪಷ್ಟವಾಗಿ ರೂಪಿಸುತ್ತದೆ ಎಂದು ಹೇಳಿದರು. ಭಾರತೀಯ ನೌಕಾಪಡೆಯ ಧೈರ್ಯಶಾಲಿ ಸಿಬ್ಬಂದಿಯ ಜೊತೆಗೆ ಈ ದೀಪಾವಳಿ ಹಬ್ಬವನ್ನು ಆಚರಿಸಲು ದೊರಕಿದ ಅವಕಾಶವನ್ನು ಬಹುದೊಡ್ಡ ಸೌಭಾಗ್ಯವೆಂದು ಅವರು ತಮ್ಮ ಆಶಯವನ್ನು ವ್ಯಕ್ತಪಡಿಸಿದರು.ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.ಗುಜರಾತ್‌ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
September 20th, 11:00 am
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್‌ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು
September 20th, 10:30 am
ಗುಜರಾತ್‌ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಐಎನ್‌ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ
January 15th, 11:08 am
ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 17th, 07:20 pm
ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ
November 17th, 07:15 pm
ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 22nd, 05:12 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂತರು ಮತ್ತು ಸಾಧುಗಳಿಗೆ, ಇಲ್ಲಿ ಉಪಸ್ಥಿತರಿರುವ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಂಪರ್ಕ ಹೊಂದಿರುವ ಎಲ್ಲಾ ರಾಮ ಭಕ್ತರಿಗೆ ನನ್ನ ಶುಭಾಶಯಗಳು. ಎಲ್ಲರಿಗೂ ರಾಮ್ ರಾಮ್!ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
January 22nd, 01:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಶ್ರಮಜೀವಿಗಳೊಂದಿಗೆ ಶ್ರೀ ಮೋದಿ ಸಂವಾದ ನಡೆಸಿದರು.ಕೇರಳದ ಕೊಚ್ಚಿಯಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 17th, 12:12 pm
ಶ್ರೀ ಸರ್ಬಾನಂದ ಸೋನೋವಾಲ್ ಜಿ ಅವರ ತಂಡ, ಶ್ರೀ ಶ್ರೀಪಾದ್ ಯೆಸ್ಸೋ ನಾಯಕ್ ಜಿ ಮತ್ತು ನಮ್ಮ ಸಹೋದ್ಯೋಗಿಗಳಾದ ಶ್ರೀ ವಿ. ಮುರಳೀಧರನ್ ಜಿ ಮತ್ತು ಶ್ರೀ ಶಾಂತನು ಠಾಕೂರ್ ಜಿ ಅವರಿಗೆ ನಾನು ನನ್ನ ಕೃತಜ್ಞತೆವ್ಯಕ್ತಪಡಿಸುತ್ತೇನೆ.ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
January 17th, 12:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಅಧಿಕ ಮೌಲ್ಯದ ಮೂರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ʻಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ʼನಲ್ಲಿ(ಸಿಎಸ್‌ಎಲ್) ʻನ್ಯೂ ಡ್ರೈ ಡಾಕ್ʼ(ಎನ್‌ಡಿಡಿ), ʻಸಿಎಸ್‌ಎಲ್ʼನ ಅಂತರರಾಷ್ಟ್ರೀಯ ಹಡಗು ದುರಸ್ತಿ ಘಟಕ (ಐಎಸ್ ಆರ್‌ಎಫ್) ಮತ್ತು ಕೊಚ್ಚಿಯ ಪುದುವೈಪೀನ್‌ನಲ್ಲಿರುವ ʻಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ʼ ಸಂಸ್ಥೆಯ ʻಎಲ್‌ಪಿಜಿʼ ಆಮದು ಟರ್ಮಿನಲ್ ಅನ್ನು ಇಂದು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಪ್ರಮುಖ ಮೂಲಸೌಕರ್ಯ ಯೋಜನೆಗಳು ಭಾರತದ ಬಂದರು, ಹಡಗು ಮತ್ತು ಜಲಮಾರ್ಗ ವಲಯವನ್ನು ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದಲ್ಲದೆ, ಆ ಕ್ಷೇತ್ರಗಳಲ್ಲಿ ಸಾಮರ್ಥ್ಯರ್ಧನೆ ಮತ್ತು ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ನೆರವಾಗಲಿವೆ. ಆ ಮೂಲಕ ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರ ಆಶಯಕ್ಕೆ ಇವು ಅನುಗುಣವಾಗಿವೆ.ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ 27ನೇ ರಾಷ್ಟ್ರೀಯ ಯುವ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಕನ್ನಡ ಭಾಷಣ
January 12th, 01:15 pm
ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಭಾರತಿ ಪವಾರ್, ನಿಶಿತ್ ಪ್ರಾಮಾಣಿಕ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್ ಜೀ, ಸರ್ಕಾರದ ಇತರ ಸಚಿವರು, ಗೌರವಾನ್ವಿತ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ಮಹಾರಾಷ್ಟ್ರದ ನಾಸಿಕ್ ನಲ್ಲಿ 27ನೇ ʻರಾಷ್ಟ್ರೀಯ ಯುವ ಉತ್ಸವʼ ಉದ್ಘಾಟಿಸಿದ ಪ್ರಧಾನಿ
January 12th, 12:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಸಿಕ್ ನಲ್ಲಿ 27ನೇ ʻರಾಷ್ಟ್ರೀಯ ಯುವ ಉತ್ಸವʼವನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸ್ವಾಮಿ ವಿವೇಕಾನಂದ ಮತ್ತು ರಾಜಮಾತಾ ಜಿಜಾವು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ರಾಜ್ಯ ತಂಡದಿಂದ ಪಥಸಂಚಲನ ಹಾಗೂ ಜಿಮ್ನಾಸ್ಟಿಕ್ಸ್, ಮಲ್ಲಕಂಬ, ಯೋಗಾಸನ ಮತ್ತು ರಾಷ್ಟ್ರೀಯ ಯುವ ಉತ್ಸವ ಗೀತೆಯನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರಧಾನಿಯವರು ಸಾಕ್ಷಿಯಾದರು. 'ವಿಕಸಿತ ಭಾರತ@2047- ಯುವಕರಿಗಾಗಿ, ಯುವಕರಿಂದʼ ಎಂಬ ವಿಷಯಾಧಾರಿತವಾಗಿ ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನಡೆದ ʻನೌಕಾಪಡೆ ದಿನಾಚರಣೆ-2023ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
December 04th, 04:35 pm
ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ರಮೇಶ್ ಅವರೇ, ಮುಖ್ಯಮಂತ್ರಿ ಶ್ರೀ ಏಕನಾಥ್ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ ಅವರೇ, ಶ್ರೀ ನಾರಾಯಣ್ ರಾಣೆ ಅವರೇ, ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರೇ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರೇ, ನನ್ನ ನೌಕಾ ಪಡೆ ಸ್ನೇಹಿತರೇ ಮತ್ತು ನನ್ನ ಎಲ್ಲಾ ಕುಟುಂಬ ಸದಸ್ಯರೇ!ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ 2023ರ ನೌಕಾಪಡೆ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 04th, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ‘ನೌಕಾಪಡೆಯ ದಿನಾಚರಣೆ 2023’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಿಂಧುದುರ್ಗದ ತರ್ಕರ್ಲಿ ಬೀಚ್‌ನಿಂದ ಭಾರತೀಯ ನೌಕಾಪಡೆಯ ಹಡಗುಗಳು, ಜಲಾಂತರ್ಗಾಮಿ ನೌಕೆಗಳು, ವಿಮಾನಗಳು ಮತ್ತು ವಿಶೇಷ ಪಡೆಗಳ 'ಕಾರ್ಯಾಚರಣೆ ಪ್ರದರ್ಶನಗಳನ್ನು' ಅವರು ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿದರು.