India-Netherlands Joint Statement on the visit of Prime Minister of India to Netherlands
May 17th, 03:45 am
At the invitation of Netherlands PM Rob Jetten, PM Modi paid an official visit to the Netherlands. They held discussions and expressed their desire to further expand and deepen the multifaceted relationship between the two countries. Noting with satisfaction the progress achieved in recent years, they elevated bilateral ties to a 'Strategic Partnership' and welcomed the adoption of a Strategic Partnership Roadmap.Just as the Netherlands is known for tulips, India is known for the lotus: PM Modi in The Hague
May 16th, 01:30 pm
Addressing a massive community programme in The Hague, Netherlands, PM Modi praised the Indian diaspora for its contributions to Dutch society and for serving as a living bridge between India and the Netherlands. He highlighted the sporting linkages that contribute to close people-to-people ties between the two countries. He also called upon the diaspora to actively contribute to India's journey towards Viksit Bharat.Prime Minister addresses the Indian Diaspora in the Netherlands
May 16th, 01:20 pm
Addressing a massive community programme in The Hague, Netherlands, PM Modi praised the Indian diaspora for its contributions to Dutch society and for serving as a living bridge between India and the Netherlands. He highlighted the sporting linkages that contribute to close people-to-people ties between the two countries. He also called upon the diaspora to actively contribute to India's journey towards Viksit Bharat.ನಿರಂತರ ಕಡಲ ವಿಮಾ ವ್ಯಾಪ್ತಿಯನ್ನು ಸುಗಮಗೊಳಿಸಲು 12,980 ಕೋಟಿ ರೂ.ಗಳ ಸಾರ್ವಭೌಮ ಖಾತರಿಯೊಂದಿಗೆ 'ಭಾರತದ ಸಮುದ್ರ ವಿಮಾ ಸಂಗ್ರಹಣೆ' (ಬಿಎಂಐ ಪೂಲ್) ಅನ್ನು ರಚಿಸುವ ಪ್ರಸ್ತಾಪವನ್ನು ಸಂಪುಟ ಅನುಮೋದಿಸಿದೆ
April 18th, 03:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ನಿರಂತರ ಸಮುದ್ರ ವಿಮಾ ವ್ಯಾಪ್ತಿಯನ್ನು ಸುಗಮಗೊಳಿಸಲು 12,980 ಕೋಟಿ ರೂ. ಗಳ ಸಾರ್ವಭೌಮ ಖಾತರಿಯೊಂದಿಗೆ 'ಭಾರತದ ಸಮುದ್ರ ವಿಮಾ ಸಂಗ್ರಹಣೆ' (ಬಿಎಂಐ ಪೂಲ್) ಎಂಬ ದೇಶೀಯ ವಿಮಾ ಸಂಗ್ರಹಣೆಯನ್ನು ರಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ. ಯಾವುದೇ ಅಂತರರಾಷ್ಟ್ರೀಯ ಮೂಲದಿಂದ ಭಾರತೀಯ ಬಂದರುಗಳಿಗೆ ಸರಕು ಸಾಗಿಸುವ ಹಡಗುಗಳಿಗೆ ಮತ್ತು ಪ್ರತಿಯಾಗಿ, ಅಸ್ಥಿರ ಸಮುದ್ರ(ಸಾಗರ/ಕಡಲ) ಕಾರಿಡಾರ್ ಗಳನ್ನು ಸಾಗಿಸುವಾಗಲೂ ಸಹ ಭಾರತೀಯ ವ್ಯಾಪಾರವು ಕೈಗೆಟುಕುವ ವಿಮೆಯನ್ನು ಪ್ರವೇಶಿಸುವುದನ್ನು ಈ ವಿಮಾ ಸಂಗ್ರಹಣೆಯು ಖಚಿತಪಡಿಸುತ್ತದೆ.Congress has always compromised the interests of Assam: PM Modi in Biswanath
April 01st, 11:45 am
PM Modi addressed a massive public rally in Biswanath, Assam. In his speech, the PM launched a sharp attack on Congress, accusing it of being ‘anti-development’ and the ‘root of corruption in independent India.’ Highlighting the BJP-NDA government’s actions, PM Modi said thousands of bighas of land have been freed from illegal encroachment, restoring Assam’s heritage and ecology. Reaffirming BJP’s commitment to Sabka Saath, Sabka Vikas, he urged voters to ensure a record turnout.BJP-NDA blocked Congress’ ‘unfair’ communal violence bill in Parliament: PM Modi in Gogamukh, Assam
April 01st, 11:30 am
Campaigning for the upcoming Assembly elections, Prime Minister Narendra Modi addressed a massive public gathering in Gogamukh, marking his first rally in Assam after the announcement of polls. The event witnessed an overwhelming turnout, with enthusiastic participation from youth, women and local communities, signaling strong momentum for the BJP-led NDA.PM Modi sets the tone for Assam polls with high-energy rallies in Gogamukh and Biswanath
April 01st, 11:00 am
Campaigning for the upcoming Assembly elections, Prime Minister Narendra Modi addressed massive public gatherings in Gogamukh and Biswanath, marking his first rallies in Assam after the announcement of polls. The events witnessed an overwhelming turnout, with enthusiastic participation from youth, women and local communities, signaling strong momentum for the BJP-led NDA.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2
November 22nd, 09:57 pm
ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
November 22nd, 09:35 pm
ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 21st, 06:09 pm
ಶಕ್ತಿಯನ್ನು ಆರಾಧಿಸುವ ಹಬ್ಬವಾದ ನವರಾತ್ರಿ ಇಂದಿನಿಂದ ಪ್ರಾರಂಭವಾಗುತ್ತಿದೆ. ನಿಮ್ಮೆಲ್ಲರಿಗೂ ಶುಭಾಶಯಗಳು! ನವರಾತ್ರಿಯ ಮೊದಲ ದಿನದಿಂದ, ದೇಶವು ಸ್ವಾವಲಂಬಿ ಭಾರತ ಅಭಿಯಾನದತ್ತ ಮತ್ತೊಂದು ಪ್ರಮುಖ ಮತ್ತು ದಿಟ್ಟ ಹೆಜ್ಜೆ ಇಡುತ್ತಿದೆ. ಇಂದು, ಸೆಪ್ಟೆಂಬರ್ 22ರಂದು, ನವರಾತ್ರಿಯ ಮೊದಲ ದಿನ ಸೂರ್ಯೋದಯದೊಂದಿಗೆ, ಹೊಸ ಅಥವಾ ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳು ಜಾರಿಗೆ ಬರುತ್ತಿವೆ. ಒಂದು ರೀತಿಯಲ್ಲಿ, ಇಂದಿನಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಹಬ್ಬ ಆರಂಭವಾಗುತ್ತಿದೆ. ಈ ಜಿಎಸ್ಟಿ ಉಳಿತಾಯ ಹಬ್ಬವು ನಿಮ್ಮ ಉಳಿತಾಯವನ್ನು ಹೆಚ್ಚಿಸುತ್ತದೆ, ನೀವು ಬಯಸುವ ವಸ್ತುಗಳನ್ನು ಹೆಚ್ಚು ಸುಲಭವಾಗಿ ಖರೀದಿಸಲು ಸಾಧ್ಯವಾಗುತ್ತದೆ. ಬಡವರು, ಮಧ್ಯಮ ವರ್ಗದ ಜನರು, ನವ ಮಧ್ಯಮ ವರ್ಗ, ಯುವಕರು, ರೈತರು, ಮಹಿಳೆಯರು, ವರ್ತಕರು, ಉದ್ಯಮಶೀಲರು, ನಮ್ಮ ದೇಶದ ಉದ್ಯಮಿಗಳು, ಪ್ರತಿಯೊಬ್ಬರೂ ಈ ಉಳಿತಾಯ ಹಬ್ಬದಿಂದ ಸಾಕಷ್ಟು ಪ್ರಯೋಜನ ಪಡೆಯುತ್ತಾರೆ. ಇದರರ್ಥ ಈ ಹಬ್ಬದ ಸಮಯದಲ್ಲಿ ಎಲ್ಲರಿಗೂ ತಿನ್ನಲು ಸಿಹಿ ಇರುತ್ತದೆ, ದೇಶದ ಪ್ರತಿಯೊಂದು ಕುಟುಂಬವೂ ಆಶೀರ್ವದಿಸಲ್ಪಡುತ್ತದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳು ಮತ್ತು ಈ ಉಳಿತಾಯ ಹಬ್ಬಕ್ಕಾಗಿ ದೇಶದ ಕೋಟ್ಯಂತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ಈ ಸುಧಾರಣೆಗಳು ಭಾರತದ ಬೆಳವಣಿಗೆಯ ಯಶೋಗಾಥೆಯನ್ನು ವೇಗಗೊಳಿಸುತ್ತವೆ, ವ್ಯವಹಾರ ಮಾಡುವುದನ್ನು ಸುಲಭಗೊಳಿಸುತ್ತವೆ, ಹೂಡಿಕೆಯನ್ನು ಹೆಚ್ಚು ಆಕರ್ಷಕವಾಗಿಸುತ್ತವೆ ಮತ್ತು ಅಭಿವೃದ್ಧಿಯ ಓಟದಲ್ಲಿ ಪ್ರತಿಯೊಂದು ರಾಜ್ಯವನ್ನು ಸಮಾನ ಪಾಲುದಾರರನ್ನಾಗಿ ಮಾಡುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು
September 21st, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶಕ್ತಿ ಆರಾಧನೆಯ ಹಬ್ಬವಾದ ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ವ್ಯಕ್ತಪಡಿಸಿದ ಅವರು, ನವರಾತ್ರಿಯ ಮೊದಲ ದಿನದಿಂದಲೇ ರಾಷ್ಟ್ರವು ಆತ್ಮನಿರ್ಭರ ಭಾರತ ಅಭಿಯಾನದತ್ತ ಒಂದು ಪ್ರಮುಖ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಸೆಪ್ಟೆಂಬರ್ 22 ರ ಸೂರ್ಯೋದಯದಿಂದ ದೇಶವು ಮುಂದಿನ ಪೀಳಿಗೆಯ ಜಿ ಎಸ್ ಟಿ ಸುಧಾರಣೆಗಳನ್ನು ಜಾರಿಗೆ ತರಲಿದೆ. ಇದು ಭಾರತದಾದ್ಯಂತ ಜಿ ಎಸ್ ಟಿ ಉಳಿತಾಯ ಉತ್ಸವದ ಆರಂಭವನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಈ ಉತ್ಸವವು ಉಳಿತಾಯವನ್ನು ಹೆಚ್ಚಿಸುತ್ತದೆ ಮತ್ತು ಜನರು ತಮ್ಮ ನೆಚ್ಚಿನ ವಸ್ತುಗಳನ್ನು ಖರೀದಿಸುವುದನ್ನು ಸುಲಭಗೊಳಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಉಳಿತಾಯ ಉತ್ಸವವು ಬಡವರು, ಮಧ್ಯಮ ವರ್ಗ, ನವ-ಮಧ್ಯಮ ವರ್ಗ, ಯುವಜನರು, ರೈತರು, ಮಹಿಳೆಯರು, ಅಂಗಡಿಯವರು, ವ್ಯಾಪಾರಿಗಳು ಮತ್ತು ಉದ್ಯಮಿಗಳು ಸೇರಿದಂತೆ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ ಎಂದು ಶ್ರೀ ಮೋದಿ ಹೇಳಿದರು. ಈ ಹಬ್ಬವು ಪ್ರತಿ ಮನೆಗೆ ಸಂತೋಷ ಮತ್ತು ಸಿಹಿಯನ್ನು ತರುತ್ತದೆ ಎಂದು ಅವರು ಹೇಳಿದರು. ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಮುಂದಿನ ಪೀಳಿಗೆಯ ಜಿ ಎಸ್ ಟಿ ಸುಧಾರಣೆಗಳು ಮತ್ತು ಜಿ ಎಸ್ ಟಿ ಉಳಿತಾಯ ಉತ್ಸವದ ಶುಭಾಶಯಗಳನ್ನು ಕೋರಿದರು. ಈ ಸುಧಾರಣೆಗಳು ಭಾರತದ ಬೆಳವಣಿಗೆಯ ಕಥೆಯನ್ನು ವೇಗಗೊಳಿಸುತ್ತವೆ, ವ್ಯಾಪಾರ ಕಾರ್ಯಾಚರಣೆಗಳನ್ನು ಸರಳಗೊಳಿಸುತ್ತವೆ, ಹೂಡಿಕೆಗಳನ್ನು ಹೆಚ್ಚು ಆಕರ್ಷಕವಾಗಿಸುತ್ತವೆ ಮತ್ತು ಅಭಿವೃದ್ಧಿಯ ಓಟದಲ್ಲಿ ಪ್ರತಿಯೊಂದು ರಾಜ್ಯವೂ ಸಮಾನ ಪಾಲುದಾರರಾಗುವುದನ್ನು ಖಚಿತಪಡಿಸುತ್ತವೆ ಎಂದು ಅವರು ಒತ್ತಿ ಹೇಳಿದರು.ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 13th, 10:30 am
ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 13th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಪ್ರತಿಯೊಬ್ಬ ನಾಗರಿಕರಿಗೂ ಆರ್ಥಿಕ ಭದ್ರತೆ ಮತ್ತು ಆರೋಗ್ಯ ರಕ್ಷಣೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ ಅವರು, '2047 ರ ವೇಳೆಗೆ ಎಲ್ಲರಿಗೂ ವಿಮೆ'ಯ ಬಗ್ಗೆ ಒತ್ತು ನೀಡಿದ್ದಾರೆ.
September 04th, 08:55 pm
ಸಾರ್ವತ್ರಿಕ ಆರ್ಥಿಕ ರಕ್ಷಣೆ ಮತ್ತು ಆರೋಗ್ಯ ರಕ್ಷಣೆಗೆ ಸರ್ಕಾರದ ಪ್ರಮುಖ ಹೆಜ್ಜೆಯ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಗೆರೆಹಾಕಿದರು. #NextGenGST ಸುಧಾರಣೆಗಳ ಇತ್ತೀಚಿನ ಹಂತವು ಜೀವ ಮತ್ತು ಆರೋಗ್ಯ ವಿಮಾ ಉತ್ಪನ್ನಗಳ ಮೇಲೆ ಗಮನಾರ್ಹ ತೆರಿಗೆ ವಿನಾಯಿತಿಯನ್ನು ನೀಡಿ, ಅವುಗಳನ್ನು ಹೆಚ್ಚು ಕೈಗೆಟುಕುವ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಸುಲಭವಾಗಿ ದೊರಕುವಂತೆ ಮಾಡುತ್ತದೆ.ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
May 20th, 04:42 pm
ಗೌರವಾನ್ವಿತರೇ, ಮತ್ತು ಪ್ರತಿನಿಧಿಗಳೇ, ನಮಸ್ತೆ. ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನಕ್ಕೆ ಎಲ್ಲರಿಗೂ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು
May 20th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಧ್ಯೇಯವಾಕ್ಯವಾದ 'ಆರೋಗ್ಯಕ್ಕಾಗಿ ಒಂದು ಜಗತ್ತು' ಅನ್ನು ಬಿಂಬಿಸಿದರು ಮತ್ತು ಇದು ಜಾಗತಿಕ ಆರೋಗ್ಯಕ್ಕಾಗಿ ಭಾರತದ ದೃಷ್ಟಿಕೋನದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಒತ್ತಿ ಹೇಳಿದರು. 2023ರ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ತಾವು ಮಾಡಿದ ಭಾಷಣವನ್ನು ಅವರು ನೆನಪಿಸಿಕೊಂಡರು, ಅಲ್ಲಿ ಅವರು 'ಒಂದು ಭೂಮಿ, ಒಂದು ಆರೋಗ್ಯ' ಬಗ್ಗೆ ಮಾತನಾಡಿದ್ದರು. ಆರೋಗ್ಯಕರ ಪ್ರಪಂಚದ ಭವಿಷ್ಯವು ಒಳಗೊಳ್ಳುವಿಕೆ, ಸಮಗ್ರ ದೃಷ್ಟಿಕೋನ ಮತ್ತು ಸಹಯೋಗವನ್ನು ಅವಲಂಬಿಸಿದೆ ಎಂದು ಅವರು ಹೇಳಿದರು.