2025ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 21st, 10:30 am
ಮುಂಗಾರು ಎಂದರೆ ಹೊಸತನ ಮತ್ತು ಸೃಷ್ಟಿಯ ಸಂಕೇತ. ಇಲ್ಲಿಯವರೆಗೆ ಬಂದಿರುವ ವರದಿಗಳ ಪ್ರಕಾರ, ಇಡೀ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ವಲಯಕ್ಕೆ ಲಾಭವಾಗುವ ವಾತಾವರಣ ನಿರ್ಮಾಣವಾಗಿದೆ. ಮಳೆಯು ನಮ್ಮ ರೈತರ ಆರ್ಥಿಕತೆಗೆ ಮಾತ್ರವಲ್ಲದೆ, ದೇಶದ ಆರ್ಥಿಕತೆಗೂ, ಗ್ರಾಮೀಣ ಆರ್ಥಿಕತೆಗೂ ಮತ್ತು ಪ್ರತಿಯೊಂದು ಮನೆಯ ಆರ್ಥಿಕತೆಗೂ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಪಡೆದಿರುವ ಮಾಹಿತಿಯ ಪ್ರಕಾರ, ಈ ವರ್ಷ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವು ಕಳೆದ ಹತ್ತು ವರ್ಷಗಳ ದಾಖಲೆಗಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ. ಇದು ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 21st, 09:54 am
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ಹೇಳಿಕೆಗಳಲ್ಲಿ, ಅವರು ಭಯಾನಕ ಪಹಲ್ಗಾಮ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದರು ಮತ್ತು ಪಾಕಿಸ್ತಾನದ ಪಾತ್ರವನ್ನು ಬಹಿರಂಗಪಡಿಸುವಲ್ಲಿ ಭಾರತದ ರಾಜಕೀಯ ನಾಯಕತ್ವದ ಒಗ್ಗಟ್ಟಿನ ಧ್ವನಿಯನ್ನು ಶ್ಲಾಘಿಸಿದರು. ಡಿಜಿಟಲ್ ಇಂಡಿಯಾದ, ವಿಶೇಷವಾಗಿ ಯುಪಿಐನ ಜಾಗತಿಕ ಮನ್ನಣೆಯನ್ನು ಪ್ರಧಾನಿ ಗಮನಿಸಿದರು. ನಕ್ಸಲಿಸಂ ಮತ್ತು ಮಾವೋವಾದ ಕ್ಷೀಣಿಸುತ್ತಿದೆ ಎಂದು ಅವರು ದೃಢಪಡಿಸಿದರು ಮತ್ತು ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಸಹ ಶ್ಲಾಘಿಸಿದರು.ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.