ಫ್ರಾನ್ಸ್ ಮತ್ತು ಅಮೆರಿಕಾ ಪ್ರವಾಸಕ್ಕೂ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
February 10th, 12:00 pm
ಅಧ್ಯಕ್ಷರಾದ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ನಾನು ಫೆಬ್ರವರಿ 10 ರಿಂದ 12 ರವರೆಗೆ ಫ್ರಾನ್ಸ್‌ಗೆ ಭೇಟಿ ನೀಡುತ್ತಿದ್ದೇನೆ. ಪ್ಯಾರಿಸ್‌ನಲ್ಲಿ ವಿಶ್ವ ನಾಯಕರು ಮತ್ತು ಜಾಗತಿಕ ತಂತ್ರಜ್ಞಾನ ಸಿಇಒಗಳ ಸಭೆಯಾದ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಕ್ರಿಯಾ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು ವಹಿಸಲು ನಾನು ಎದುರು ನೋಡುತ್ತಿದ್ದೇನೆ. ಅಲ್ಲಿ ನಾವು ನಾವೀನ್ಯತೆ ಮತ್ತು ಸಾರ್ವಜನಿಕ ಒಳಿತಿಗಾಗಿ ದೊಡ್ಡ ಮಟ್ಟದಲ್ಲಿ ಎಐ ತಂತ್ರಜ್ಞಾನಕ್ಕೆ ಸಹಯೋಗದ ವಿಧಾನದ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದೇವೆ.