ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 01st, 03:30 pm
ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 01st, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.NDA freed Bihar from Naxalism and Maoist terror — now you can live and vote fearlessly: PM Modi in Begusarai
October 24th, 12:09 pm
Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.We’re connecting Bihar’s heritage with employment, creating new opportunities for youth: PM Modi in Samastipur
October 24th, 12:04 pm
Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”PM Modi addresses enthusiastic crowds in Bihar’s Samastipur and Begusarai
October 24th, 12:00 pm
Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 10:15 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 08th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ಸಮಾವೇಶವಾದ 'ಇಂಡಿಯಾ ಮೊಬೈಲ್ ಕಾಂಗ್ರೆಸ್' (IMC) 2025ರ 9ನೇ ಆವೃತ್ತಿಯನ್ನು ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ನ ಈ ವಿಶೇಷ ಆವೃತ್ತಿಗೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಹಣಕಾಸು ವಂಚನೆ ತಡೆಗಟ್ಟುವಿಕೆ, ಕ್ವಾಂಟಮ್ ಸಂವಹನ, 6G, ಆಪ್ಟಿಕಲ್ ಸಂವಹನ ಮತ್ತು ಸೆಮಿಕಂಡಕ್ಟರ್ಗಳಂತಹ ನಿರ್ಣಾಯಕ ವಿಷಯಗಳ ಕುರಿತು ಹಲವಾರು ಸ್ಟಾರ್ಟ್ಅಪ್ಗಳು ತಮ್ಮ ಯೋಜನೆಗಳನ್ನು ಪ್ರಸ್ತುತಪಡಿಸಿವೆ ಎಂದು ತಿಳಿಸಿದರು. ಇಂತಹ ಪ್ರಮುಖ ವಿಷಯಗಳ ಕುರಿತಾದ ಪ್ರಸ್ತುತಿಗಳನ್ನು ನೋಡುವುದು, ಭಾರತದ ತಾಂತ್ರಿಕ ಭವಿಷ್ಯವು ಸಮರ್ಥ ಕೈಗಳಲ್ಲಿದೆ ಎಂಬ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದರು. ಅವರು ಈ ಸಮಾವೇಶಕ್ಕೆ ಮತ್ತು ಎಲ್ಲಾ ಹೊಸ ಉಪಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 27th, 11:45 am
ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 27th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 11:36 am
ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ
September 22nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.ಅಸ್ಸಾಂನ ದರ್ರಾಂಗ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.ಅಸ್ಸಾಂನ ದರ್ರಾಂಗ್ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 14th, 11:00 am
ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 13th, 10:30 am
ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.ಮಿಜೋರಾಂನ ಐಜ್ವಾಲ್ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 13th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.