ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
September 24th, 06:33 pm
'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.ಇರಾನ್ ಅಧ್ಯಕ್ಷರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
June 22nd, 05:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇರಾನ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಮಸೂದ್ ಪೆಜೆಷ್ಕಿಯಾನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ
April 24th, 03:29 pm
ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.ಸೂಫಿ ಸಂಪ್ರದಾಯವು ಭಾರತದಲ್ಲಿ ತನಗಾಗಿ ಒಂದು ವಿಶಿಷ್ಟ ಗುರುತನ್ನು ಸೃಷ್ಟಿಸಿಕೊಂಡಿದೆ: ಜಹಾನ್-ಎ-ಖುಸ್ರೌನಲ್ಲಿ ಪ್ರಧಾನಿ
February 28th, 07:31 pm
ಪ್ರಧಾನಿ ಮೋದಿ ಅವರು ಜಹಾನ್-ಎ-ಖುಸ್ರೌ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತದಲ್ಲಿ ಸೂಫಿ ಸಂಪ್ರದಾಯದ ವಿಶಿಷ್ಟ ಗುರುತನ್ನು ಒತ್ತಿ ಹೇಳಿದರು. ಹಜರತ್ ಖುಸ್ರೌ ಭಾರತವನ್ನು ಎಲ್ಲಾ ಪ್ರಮುಖ ರಾಷ್ಟ್ರಗಳಿಗಿಂತ ಶ್ರೇಷ್ಠವೆಂದು ಬಣ್ಣಿಸಿದರು ಮತ್ತು ಸಂಸ್ಕೃತವನ್ನು ವಿಶ್ವದ ಅತ್ಯುತ್ತಮ ಭಾಷೆ ಎಂದು ಪರಿಗಣಿಸಿದರು ಎಂದು ಪ್ರಧಾನಿ ಹೇಳಿದರು.ಜಹಾನ್-ಎ-ಖುಸ್ರೌ 2025 ರ ಸೂಫಿ ಸಂಗೀತ ಉತ್ಸವದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು
February 28th, 07:30 pm
ಪ್ರಧಾನಿ ಮೋದಿ ಜಹಾನ್-ಎ-ಖುಸ್ರೌ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತದಲ್ಲಿ ಸೂಫಿ ಸಂಪ್ರದಾಯದ ವಿಶಿಷ್ಟ ಗುರುತನ್ನು ಒತ್ತಿ ಹೇಳಿದರು. ಹಜರತ್ ಖುಸ್ರೌ ಭಾರತವನ್ನು ಎಲ್ಲಾ ಪ್ರಮುಖ ರಾಷ್ಟ್ರಗಳಿಗಿಂತ ಶ್ರೇಷ್ಠವೆಂದು ಬಣ್ಣಿಸಿದರು ಮತ್ತು ಸಂಸ್ಕೃತವನ್ನು ವಿಶ್ವದ ಅತ್ಯುತ್ತಮ ಭಾಷೆ ಎಂದು ಪರಿಗಣಿಸಿದರು ಎಂದು ಪ್ರಧಾನಿ ಹೇಳಿದರು.Prime Minister meets with the President of the Islamic Republic of Iran
October 22nd, 09:24 pm
PM Modi met Iran's President Dr. Masoud Pezeshkian on the sidelines of the 16th BRICS Summit in Kazan. PM Modi congratulated Pezeshkian on his election and welcomed Iran to BRICS. They discussed strengthening bilateral ties, emphasizing the Chabahar Port's importance for trade and regional stability. The leaders also addressed the situation in West Asia, with PM Modi urging de-escalation and protection of civilians through diplomacy.ಇರಾನ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
November 06th, 06:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.ಬ್ರಿಕ್ಸ್ ವಿಸ್ತರಣೆ ಕುರಿತು ಪ್ರಧಾನ ಮಂತ್ರಿ ಹೇಳಿಕೆ
August 24th, 01:32 pm
ಮೊದಲನೆಯದಾಗಿ ಮತ್ತು ಪ್ರಮುಖವಾಗಿ, ಈ ಬ್ರಿಕ್ಸ್ ಶೃಂಗಸಭೆಯ ಯಶಸ್ವಿ ಸಂಘಟನೆಗಾಗಿ ನನ್ನ ಆಪ್ತ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಇಸ್ಲಾಮಿಕ್ ಇರಾನ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಸಯ್ಯದ್ ಇಬ್ರಾಹಿಂ ರೈಸಿ ಮಾತುಕತೆ
August 18th, 06:07 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ಲಾಮಿಕ್ ಇರಾನ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಸಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ದ್ವಿಪಕ್ಷೀಯ ಹಾಗೂ ಪ್ರಾದೇಶಿಕ ಮಹತ್ವದ ವಿಚಾರಗಳ ಬಗ್ಗೆ ಉಭಯ ನಾಯಕರ ಚರ್ಚೆ ನಡೆಸಿದರು.23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 12:30 pm
23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆಗೆ ನಿಮ್ಮೆಲ್ಲರನ್ನು ಇಂದು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕಳೆದ 2 ದಶಕಗಳಲ್ಲಿ ಎಸ್‌ಸಿಒ ಸಂಘಟನೆಯು ಇಡೀ ಏಷ್ಯಾ ವಲಯದಲ್ಲಿ ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಿ ಹೊರಹೊಮ್ಮಿದೆ. ಭಾರತ ಮತ್ತು ಏಷ್ಯಾ ಭಾಗದ ನಡುವೆ ಇರುವ ಸಾವಿರಾರು ವರ್ಷಗಳ ಸಾಂಸ್ಕೃತಿಕ ಮತ್ತು ಜನರಿಂದ ಜನರ ಸಂಬಂಧಗಳು ನಮ್ಮ ಹಂಚಿಕೆಯ ಪರಂಪರೆಗೆ ಜೀವಂತ ಸಾಕ್ಷಿಯಾಗಿವೆ. ನಾವು ಈ ಪ್ರದೇಶವನ್ನು ವಿಸ್ತೃತ ನೆರೆಹೊರೆ ಎಂದು ನೋಡುವುದಿಲ್ಲ, ಆದರೆ ವಿಶಾಲ ಕುಟುಂಬ ಎಂದು ನೋಡುತ್ತೇವೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 22nd, 03:34 pm
ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ
March 22nd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್‌ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.ಮಾರ್ಚ್ 22 ರಂದು ಐಟಿಯು ಪ್ರದೇಶ ಕಚೇರಿ ಮತ್ತು ನಾವೀನ್ಯತೆಯ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಮಂತ್ರಿ
March 21st, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ 2023 ರ ಮಾರ್ಚ್ 22 ರ ಅಪರಾಹ್ನ 12.30 ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ದೂರ ಸಂಪರ್ಕ ಸಂಘದ [ಐಟಿಯು] ಪ್ರದೇಶ ಕಚೇರಿ ಮತ್ತು ಭಾರತದ ನಾವೀನ್ಯತೆಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು “ಕಾಲ್ ಫಾರ್ ಯು ಡಿಗ್” ಆಪ್ ಲೋಕಾರ್ಪಣೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಚೀತಾ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಪಠ್ಯ
September 17th, 11:51 am
ಕಾಲ ಚಕ್ರವು ನಮಗೆ ಗತಕಾಲದ ತಪ್ಪುಗಳನ್ನು ಸರಿಪಡಿಸಲು ಮತ್ತು ಹೊಸ ಭವಿಷ್ಯವನ್ನು ರೂಪಿಸಲು ಮಾನವತೆಯ ಮುಂದೆ ಇಂತಹ ಕೆಲವೇ ಅವಕಾಶಗಳನ್ನು ನೀಡುತ್ತದೆ. ಇಂದು ಅದೃಷ್ಟವಶಾತ್ ಅಂತಹ ಒಂದು ಕ್ಷಣವು ನಮ್ಮ ಮುಂದಿದೆ. ದಶಕಗಳ ಹಿಂದೆ, ಜೀವವೈವಿಧ್ಯತೆಯ ಹಳೆಯ ಕೊಂಡಿಯು ಕಡಿದುಹೋಗಿತ್ತು, ಅಳಿದುಹೋಗಿತ್ತು, ಇಂದು ನಾವು ಅದನ್ನು ಮರುಸಂಪರ್ಕಿಸುವ ಅವಕಾಶವನ್ನು ಪಡೆದಿದ್ದೇವೆ. ಇಂದು, ಚೀತಾಗಳು ಭಾರತೀಯ ಮಣ್ಣಿಗೆ ಮರಳಿವೆ. ಮತ್ತು ಈ ಚೀತಾಗಳ ಜೊತೆಗೆ, ಭಾರತದ ಪ್ರಕೃತಿ-ಪ್ರೀತಿಯ ಪ್ರಜ್ಞೆಯೂ ಸಹ ಪೂರ್ಣ ಬಲದಿಂದ ಜಾಗೃತವಾಗಿದೆ ಎಂದು ನಾನು ಹೇಳುತ್ತೇನೆ. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ.PM addresses the nation on release of wild Cheetahs in Kuno National Park in Madhya Pradesh
September 17th, 11:50 am
PM Modi released wild Cheetahs brought from Namibia at Kuno National Park under Project Cheetah, the world's first inter-continental large wild carnivore translocation project. PM Modi said that the cheetahs will help restore the grassland eco-system as well as improve the biopersity. The PM also made special mention of Namibia and its government with whose cooperation, the cheetahs have returned to Indian soil after decades.ಎಸ್.ಸಿ.ಒ ಶೃಂಗಸಭೆ ಅಂಗವಾಗಿ ಇರಾನ್ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ
September 16th, 11:06 pm
ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ಕೌನ್ಸಿಲ್ ಆಫ್ ಸ್ಟೇಟ್ ಮುಖ್ಯಸ್ಥರ – ಎಸ್.ಸಿ.ಒ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಇಸ್ಲಾಮಿಕ್ ಗಣರಾಜ್ಯ ಇರಾನ್ ನ ಗೌರವಾನ್ವಿತ ಅಧ್ಯಕ್ಷ ಶ್ರೀ ಇಬ್ರಾಹಿಂ ರೈಸಿ ಅವರನ್ನು ಭೇಟಿ ಮಾಡಿದರು. ಅಧ್ಯಕ್ಷರಾದ ರೈಸಿ ಅವರು 2021 ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪ್ರಧಾನಮಂತ್ರಿ ಹಾಗೂ ಇರಾನ್ ಅಧ್ಯಕ್ಷ ರೈಸಿ ಅವರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಇರಾನ್ ನ ಇಸ್ಲಾಮಿಕ್ ಗಣರಾಜ್ಯದ ವಿದೇಶಾಂಗ ಸಚಿವರು
June 08th, 07:53 pm
ಇರಾನ್ ನ ಇಸ್ಲಾಮಿಕ್ ಗಣರಾಜ್ಯದ ವಿದೇಶಾಂಗ ಸಚಿವರಾದ ಗೌರವಾನ್ವಿತ ಅಮಿರ್ ಅಬ್ದೊಲ್ಲಾಹಿಯಾನ್ ಅವರು ಅಧಿಕೃತವಾಗಿ ಭಾರತ ಪ್ರವಾಸ ಕೈಗೊಂಡಿದ್ದು, ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿದರು.“ಅಫ್ಘಾನಿಸ್ತಾನ ಕುರಿತ ದೆಹಲಿ ಪ್ರಾದೇಶಿಕ ಭದ್ರತಾ ಸಂವಾದ”ದ ಭಾಗಿಯಾಗಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರು/ಭದ್ರತಾ ಮಂಡಳಿಗಳ ಕಾರ್ಯದರ್ಶಿಗಳಿಂದ ಪ್ರಧಾನಮಂತ್ರಿ ಭೇಟಿ
November 10th, 07:53 pm
ರಾಷ್ಟ್ರೀಯ ಭದ್ರತಾ ಸಲಹೆಗಾರ ಶ್ರೀ ಅಜಿತ್ ದೋವಲ್ ಅವರು ಇಂದು ಆಯೋಜಿಸಿದ್ದ ಅಫ್ಘಾನಿಸ್ತಾನದ ಕುರಿತಾದ ಪ್ರಾದೇಶಿಕ ಭದ್ರತಾ ಸಂವಾದದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದ ಏಳು ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಮಂಡಳಿಗಳ ಮುಖ್ಯಸ್ಥರು ಸಂವಾದದ ಬಳಿಕ ಒಟ್ಟಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.ಎಸ್‌ಸಿಒ ಮಂಡಳಿಯ ಮುಖ್ಯಸ್ಥರ 21ನೇ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 17th, 12:22 pm
ಎಲ್ಲಕ್ಕಿಂತ ಮೊದಲು ನಾನು ಅಧ್ಯಕ್ಷರಾದ ರೆಹಮಾನ್ ಅವರನ್ನು ಅಭಿನಂದಿಸಲು ಇಷ್ಟ ಪಡುತ್ತೇನೆ. ಎಸ್‌ಸಿಒ ಮಂಡಳಿಯ ಅಧ್ಯಕ್ಷೀಯ ಅವಧಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದಕ್ಕೆ ಅಭಿನಂದನಾರ್ಹರಾಗಿದ್ದಾರೆ. ತಾಜಿ಼ಕ್‌ನ ಅಧ್ಯಕ್ಷತೆಯೊಂದಿಗೆ ಜಾಗತಿಕವಾಗಿ ಸವಾಲುಗಳಿರುವ ಈ ಅವಧಿಯಲ್ಲಿ ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ತಜ಼ಕಿಸ್ತಾನದ ಸ್ವಾತಂತ್ರ್ಯದ ಮೂವತ್ತನೇ ಶುಭ ಸಂದರ್ಭದಲ್ಲಿ ಭಾರತದ ಪರವಾಗಿ ತಾಜಿಕ್ ಸಹೋದರ ಸಹೋದರಿಯರಿಗೆ ಹಾಗೂ ಸನ್ಮಾನ್ಯ ಅಧ್ಯಕ್ಷರಾದ ರೆಹಮಾನ್ ಅವರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಇರಾನ್ ನ ಅಧ್ಯಕ್ಷರಾಗಿ ಚುನಾಯಿತಗೊಂಡಿರುವ ಗೌರವಾನ್ವಿತ ಇಬ್ರಾಹಿಂ ರೈಸಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 20th, 02:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಗೌರವಾನ್ವಿತ ಇಬ್ರಾಹಿಂ ರೈಸಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.