ಫಿನ್ಲೆಂಡ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
March 05th, 11:55 am
ಫಿನ್ಲೆಂಡ್ ಅಧ್ಯಕ್ಷರಾಗಿ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವ ಅಧ್ಯಕ್ಷ ಸ್ಟಬ್ ಅವರಿಗೆ ನಾನು ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಅಧ್ಯಕ್ಷ ಸ್ಟಬ್ ಅವರು ಪ್ರಸಿದ್ಧ ಜಾಗತಿಕ ನಾಯಕ ಮಾತ್ರವಲ್ಲ, ಗೌರವಾನ್ವಿತ ಚಿಂತಕ ಮತ್ತು ಲೇಖಕರೂ ಆಗಿದ್ದಾರೆ.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಪ್ರಧಾನಮಂತ್ರಿ ಅವರು ಗೋವಾದಲ್ಲಿನ ಐರನ್ ಮ್ಯಾನ್ 70.3 ರೀತಿಯ ಕಾರ್ಯಕ್ರಮದಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದನ್ನು ಸ್ವಾಗತಿಸಿದ್ದಾರೆ
November 09th, 10:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ರೀತಿಯ ಕಾರ್ಯಕ್ರಮದಲ್ಲಿ ಯುವಜನರು ಹೆಚ್ಚಾಗಿ ಪಾಲ್ಗೊಳ್ಳುತ್ತಿರುವುದನ್ನು ಸ್ವಾಗತಿಸಿದ್ದಾರೆ. ಈ ರೀತಿಯ ಕಾರ್ಯಕ್ರಮಗಳು ಫಿಟ್ ಇಂಡಿಯಾ ಅಭಿಯಾನಕ್ಕೆ ಕೊಡುಗೆ ನೀಡಲಿದೆ ಎಂದು ಶ್ರೀ ಮೋದಿ ಅವರು ಉಲ್ಲೇಖಿಸಿದ್ದಾರೆ. “ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಐರನ್ ಮ್ಯಾನ್ ಟ್ರಯಥ್ಲಾನ್ ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಇಬ್ಬರು ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿರುವ ವಿಷಯ ತಿಳಿದು ಸಂತೋಷವಾಯಿತು” ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.