ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ
March 02nd, 07:20 am
ಸದ್ಯದ ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 28th, 12:00 pm
ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ
February 28th, 11:30 am
ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ವಿಶ್ವ ಹತ್ಯಾಕಾಂಡದ ಸ್ಮಾರಕ ಕೇಂದ್ರ - ಯಾದ್ ವಶೆಮ್ ಗೆ ಪ್ರಧಾನಮಂತ್ರಿ ಭೇಟಿ
February 26th, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಮಾನ್ಯ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಇಂದು ಜೆರುಸಲೇಮ್ ನಲ್ಲಿರುವ ವಿಶ್ವ ಹತ್ಯಾಕಾಂಡದ ಸ್ಮಾರಕ ಕೇಂದ್ರವಾದ ಯಾದ್ ವಾಶೆಮ್ ಗೆ ಭೇಟಿ ನೀಡಿ, ಹತ್ಯಾಕಾಂಡದಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿಯವರು ಸ್ಮಾರಕ ಭವನದಲ್ಲಿ ನಡೆದ ಔಪಚಾರಿಕ ದುಃಖಕರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಧಿಕೃತ ಧಾರ್ಮಿಕ ಕಾರ್ಯಕ್ರಮ ಕ್ಯಾಂಟರ್ ನಲ್ಲಿ ಎಲ್ ಮಾಲೆಹ್ ರಹಮೀಮ್ ನ ಹೃದಯಸ್ಪರ್ಶಿ ಪಠಣ ನಡೆಯಿತು. ಹತ್ಯಾಕಾಂಡದಲ್ಲಿ ಪ್ರಾಣತೆತ್ತವರ ವೈಯಕ್ತಿಕ ಜೀವನಗಾಥೆಗಳನ್ನು ಪ್ರದರ್ಶಿಸುವ ಹೆಸರುಗಳ ಪುಸ್ತಕ ಸಭಾಂಗಣಕ್ಕೂ ಪ್ರಧಾನಮಂತ್ರಿ ಭೇಟಿ ನೀಡಿದರು.ಪ್ರಧಾನಮಂತ್ರಿ ಮೋದಿ ಅವರಿಂದ ಇಸ್ರೇಲ್ ಅಧ್ಯಕ್ಷರ ಭೇಟಿ
February 26th, 09:00 pm
ಪ್ರಧಾನಮಂತ್ರಿಗಳು 2017 ರಲ್ಲಿನ ತಮ್ಮ ಇಸ್ರೇಲ್ ಭೇಟಿಯ ಸಮಯದಲ್ಲಿ ಮತ್ತು 2023ರಲ್ಲಿ ದುಬೈನಲ್ಲಿ ಅಧ್ಯಕ್ಷ ಹರ್ಜೋಗ್ ಅವರೊಂದಿಗಿನ ತಮ್ಮ ಹಿಂದಿನ ಭೇಟಿಯನ್ನು ಆತ್ಮೀಯವಾಗಿ ನೆನಪು ಮಾಡಿಕೊಂಡರು. ಭಾರತ-ಇಸ್ರೇಲ್ ಬಾಂಧವ್ಯವನ್ನು ಶಾಂತಿ, ನಾವೀನ್ಯತೆ ಮತ್ತು ಸಮೃದ್ಧಿಗಾಗಿ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಯ ಮಟ್ಟಕ್ಕೆ ಹೆಚ್ಚಿಸಿರುವುದು ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಆರಂಭವನ್ನು ಸೂಚಿಸುತ್ತದೆ ಮತ್ತು ಇದು ಎರಡೂ ದೇಶಗಳ ನಡುವಿನ ಆಳವಾದ ನಂಬಿಕೆ, ಹಂಚಿತ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ವಿಶೇಷ ಮೈತ್ರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಇಬ್ಬರೂ ನಾಯಕರು ಹೇಳಿದ್ದಾರೆ. ಭಯೋತ್ಪಾದನೆ ನಿಗ್ರಹ ಸೇರಿದಂತೆ ವ್ಯಾಪಾರ ಮತ್ತು ತಂತ್ರಜ್ಞಾನ, ನಾವೀನ್ಯತೆ ಮತ್ತು ಉದ್ಯಮ, ರಕ್ಷಣೆ ಮತ್ತು ಭದ್ರತೆ ವಲಯಗಳಲ್ಲಿನ ಪ್ರಸ್ತುತದ ಸಹಕಾರದ ಬಗ್ಗೆ ಇಬ್ಬರೂ ನಾಯಕರು ತೃಪ್ತಿ ವ್ಯಕ್ತಪಡಿಸಿದರು.ಇಸ್ರೇಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
February 26th, 08:56 pm
ಭಾರತ ಮತ್ತು ಇಸ್ರೇಲ್ ಪಾಲುದಾರಿಕೆಯ ಎಲ್ಲಾ ಅಂಶಗಳ ಕುರಿತು ಎರಡೂ ದೇಶದ ಪ್ರಧಾನಮಂತ್ರಿಗಳು ವಿಸ್ತೃತ ಚರ್ಚೆಗಳನ್ನು ನಡೆಸಿದರು. ಎರಡೂ ದೇಶಗಳ ನಡುವಿನ ಬಲವಾದ ನಂಬಿಕೆ ಮತ್ತು ಸ್ನೇಹವನ್ನು ಪ್ರತಿಬಿಂಬಿಸುತ್ತಾ, ಇಬ್ಬರೂ ನಾಯಕರು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಶಾಂತಿ, ನಾವೀನ್ಯತೆ ಮತ್ತು ಸಮೃದ್ಧಿಗಾಗಿ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು. ಇದು ಪರಸ್ಪರ ಹಿತಾಸಕ್ತಿಗಳು ಹೆಚ್ಚುತ್ತಿರುವ ಒಮ್ಮುಖ ಮತ್ತು ಸುರಕ್ಷಿತ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಎರಡೂ ದೇಶಗಳ ಹಂಚಿಕೆಯ ದೃಷ್ಟಿಕೋನದ ಸಂಕೇತವಾಗಿದೆ.ಭಾರತ - ಇಸ್ರೇಲ್ ಜಂಟಿ ಹೇಳಿಕೆ
February 26th, 07:44 pm
ಭಾರತ ಮತ್ತು ಇಸ್ರೇಲ್ ನಡುವಿನ ಆತ್ಮೀಯತೆ, ಸದ್ಭಾವನೆ ಮತ್ತು ಆಳವಾದ ಕಾರ್ಯತಂತ್ರದ ಬಾಂಧವ್ಯವನ್ನು ಗೌರವಿಸಿ, ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25 ರಿಂದ 26 ರವರೆಗೆ ಇಸ್ರೇಲ್ ಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯವರೊಂದಿಗೆ ಹಿರಿಯ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ
February 26th, 07:41 pm
ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 26th, 03:30 pm
ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.ಜೆರುಸಲೇಂನಲ್ಲಿ ಟೆಕ್ ವಸ್ತು ಪ್ರದರ್ಶನಕ್ಕೆ ಪ್ರಧಾನಮಂತ್ರಿ ಭೇಟಿ
February 26th, 10:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25ರಂದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಹಲವಾರು ಕ್ಷೇತ್ರಗಳಲ್ಲಿ ಪ್ರವರ್ತಕ ಇಸ್ರೇಲಿ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನಕ್ಕೆ ಭೇಟಿ ನೀಡಿದರು. ಪ್ರದರ್ಶನದಲ್ಲಿ ಕೃಷಿ-ತಂತ್ರಜ್ಞಾನ, ಜಲ-ತಂತ್ರಜ್ಞಾನ, ಹವಾಮಾನ-ತಂತ್ರಜ್ಞಾನ, ಆರೋಗ್ಯ-ಜೈವಿಕ ತಂತ್ರಜ್ಞಾನ, ಸ್ಮಾರ್ಟ್ ಮೊಬಿಲಿಟಿ, ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯುರಿಟಿ ಮತ್ತು ಕ್ವಾಂಟಮ್ ತಂತ್ರಜ್ಞಾನಗಳಲ್ಲಿ ಪರಿಣತಿ ಹೊಂದಿರುವ ಪ್ರಮುಖ ಕಂಪನಿಗಳು ಮತ್ತು ಸಂಶೋಧನಾ ಘಟಕಗಳು ಭಾಗವಹಿಸಿದ್ದವು.ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 25th, 08:20 pm
ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್) ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 25th, 08:00 pm
ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.ಪ್ರಧಾನ ಮಂತ್ರಿ ಮೋದಿ ಇಸ್ರೇಲ್‌ನ ಟೆಲ್ ಅವೀವ್‌ಗೆ ಆಗಮಿಸಿದರು
February 25th, 04:43 pm
ಪ್ರಧಾನ ಮಂತ್ರಿ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಇಸ್ರೇಲ್‌ಗೆ ಆಗಮಿಸಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ, ಪ್ರಧಾನಿಯವರು ಫೆಬ್ರವರಿ 25-26, 2026 ರವರೆಗೆ ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಅವರನ್ನು ಪ್ರಧಾನಿ ನೆತನ್ಯಾಹು ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಮಾನ ನಿಲ್ದಾಣದಲ್ಲಿ ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು.ಇಸ್ರೇಲ್ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
February 25th, 08:28 am
ನನ್ನ ಆತ್ಮೀಯ ಸ್ನೇಹಿತ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ನಾನು 2026ರ ಫೆಬ್ರವರಿ 25ರಿಂದ 26ರವರೆಗೆ ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡಲಿದ್ದೇನೆ.ಪ್ರಧಾನಮಂತ್ರಿ ಇದೇ 25-26ರಂದು ಇಸ್ರೇಲ್‌ಗೆ ಭೇಟಿ
February 24th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ 2026ರ ಫೆಬ್ರವರಿ 25-26ರಂದು ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಇಸ್ರೇಲ್ ಗೆ ಪ್ರಧಾನಮಂತ್ರಿ ಅವರ ಎರಡನೇ ಭೇಟಿಯಾಗಲಿದೆ.ಇಸ್ರೇಲ್ ಪ್ರಧಾನಮಂತ್ರಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
January 07th, 03:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಇಸ್ರೇಲ್ ಪ್ರಧಾನಮಂತ್ರಿಯವರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
December 10th, 07:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ತಿಳಿಸಿ, ಜನ್ಮದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
October 21st, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಕೂಡಾ ಅರ್ಪಿಸಿದರು. ಇದು ಎರಡೂ ರಾಷ್ಟ್ರಗಳ ನಡುವಿನ ಶಾಶ್ವತ ಸ್ನೇಹವನ್ನು ಪುನರುಚ್ಚರಿಸಿತ್ತದೆ ಎಂದು ಅವರು ತಿಳಿಸಿದರು.