ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

November 03rd, 05:15 pm

ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ರಾಜಸ್ಥಾನದ ಜೈಪುರದ ಆಸ್ಪತ್ರೆಯ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ

October 06th, 09:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಪ್ರಾಣ ಹಾನಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ

September 24th, 06:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 9:30ರ ಸುಮಾರಿಗೆ ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

August 25th, 12:30 pm

ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್‌ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್‌ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶೋಕ, ಪರಿಹಾರ ಘೋಷಣೆ

December 20th, 12:49 pm

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

December 17th, 12:05 pm

ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!

ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 17th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.

ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

December 16th, 03:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್‌’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಪ್ರಧಾನಮಂತ್ರಿ ಭೇಟಿ

December 08th, 09:46 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೈಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ 10:30 ರ ಸುಮಾರಿಗೆ ಜೈಪುರ ಪ್ರದರ್ಶನ ಮತ್ತು ಕನ್ವೆನ್ಷನ್ ಸೆಂಟರ್ (ಜೆಇಸಿಸಿ) ನಲ್ಲಿ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆ 2024 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ಪಾಣಿಪತ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆಗೆ ಅವರು ಎಲ್‌ಐಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಮತ್ತು ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.

ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

November 29th, 09:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ವಿಕಸಿತ್ ಭಾರತ್ ರಾಯಭಾರಿ ಕ್ಯಾಂಪಸ್ ಸಂವಾದ, ವಿಇಎಲ್ಎಸ್ ವಿಶ್ವವಿದ್ಯಾಲಯದಲ್ಲಿ ಚೆನ್ನೈ

April 02nd, 05:30 pm

ವಿಕಸಿತ್ ಭಾರತ್ ರಾಯಭಾರಿ ಕ್ಯಾಂಪಸ್ ಸಂವಾದವು ಚೆನ್ನೈನ ವಿಇಎಲ್ಎಸ್ ವಿಶ್ವವಿದ್ಯಾಲಯದಲ್ಲಿ ನಡೆಯಿತು. ವಿವಿಧ ಹಿನ್ನೆಲೆಯಿಂದ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ನಗರದ 20 ಕ್ಕೂ ಹೆಚ್ಚು ಉದ್ಯಮಿಗಳು, ವೃತ್ತಿಪರರು ಮತ್ತು ನಟರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗಮನಾರ್ಹ ಪಾಲ್ಗೊಳ್ಳುವವರು ಎಫ್ಐಸಿಸಿಐ, ಎಫ್ಎಲ್ಓ ,ಇಒ ಮತ್ತು ವೈಪಿಒ ಪ್ರತಿನಿಧಿಗಳನ್ನು ಒಳಗೊಂಡಿದ್ದರು.

ಕಾಂಗ್ರೆಸ್ ತಮ್ಮ ಕುಟುಂಬವನ್ನು ರಾಷ್ಟ್ರಕ್ಕಿಂತ ದೊಡ್ಡದು ಎಂದು ಪರಿಗಣಿಸುತ್ತದೆ: ಕೊಟ್‌ಪುಟ್ಲಿಯಲ್ಲಿ ಪ್ರಧಾನಿ ಮೋದಿ

April 02nd, 03:33 pm

ಲೋಕಸಭೆ ಚುನಾವಣೆಗೆ ರಾಜಸ್ಥಾನದ ಕೋಟ್‌ಪುಟ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರಚಾರವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ದಿನಗಳ ಹಿಂದೆ ಫ್ರಾನ್ಸ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಜೈಪುರದ ವೈಭವವನ್ನು ಹೇಗೆ ಎತ್ತಿ ತೋರಿಸಿದರು ಎಂಬುದನ್ನು ನೆನಪಿಸಿಕೊಂಡರು. ಪ್ರಧಾನಿ ಹೇಳಿದರು, “ನನ್ನ ರಾಜಸ್ಥಾನ ಪ್ರಚಾರದ ಮೊದಲ ಚುನಾವಣಾ ರ್‍ಯಾಲಿಯು 2019 ರಲ್ಲಿ ಧುಂಧರ್‌ನಲ್ಲಿ ಪ್ರಾರಂಭವಾಯಿತು. ಈಗ, 2024 ರಲ್ಲಿ, ಅದೇ ಪ್ರದೇಶದಿಂದ ಚುನಾವಣಾ ಪ್ರಚಾರ ಮತ್ತೆ ಪ್ರಾರಂಭವಾಗುತ್ತದೆ. ‘ಫಿರ್ ಏಕ್ ಬಾರ್, ಮೋದಿ ಸರ್ಕಾರ್’ ಎಂಬ ನಿರ್ಧಾರವನ್ನೂ ಮಾಡಿದ್ದೀರಿ.

ರಾಜಸ್ಥಾನದ ಕೊಟ್‌ಪುಟ್ಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಭಾವಿ ಭಾಷಣ ಮಾಡಿದ್ದಾರೆ

April 02nd, 03:30 pm

ಲೋಕಸಭೆ ಚುನಾವಣೆಗೆ ರಾಜಸ್ಥಾನದ ಕೋಟ್‌ಪುಟ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರಚಾರವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ದಿನಗಳ ಹಿಂದೆ ಫ್ರಾನ್ಸ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಜೈಪುರದ ವೈಭವವನ್ನು ಹೇಗೆ ಎತ್ತಿ ತೋರಿಸಿದರು ಎಂಬುದನ್ನು ನೆನಪಿಸಿಕೊಂಡರು. ಪ್ರಧಾನಿ ಹೇಳಿದರು, “ನನ್ನ ರಾಜಸ್ಥಾನ ಪ್ರಚಾರದ ಮೊದಲ ಚುನಾವಣಾ ರ್‍ಯಾಲಿಯು 2019 ರಲ್ಲಿ ಧುಂಧರ್‌ನಲ್ಲಿ ಪ್ರಾರಂಭವಾಯಿತು. ಈಗ, 2024 ರಲ್ಲಿ, ಅದೇ ಪ್ರದೇಶದಿಂದ ಚುನಾವಣಾ ಪ್ರಚಾರ ಮತ್ತೆ ಪ್ರಾರಂಭವಾಗುತ್ತದೆ. ‘ಫಿರ್ ಏಕ್ ಬಾರ್, ಮೋದಿ ಸರ್ಕಾರ್’ ಎಂಬ ನಿರ್ಧಾರವನ್ನೂ ಮಾಡಿದ್ದೀರಿ.

ಜೈಪುರದಲ್ಲಿ ವಿಕಸಿತ ಭಾರತ್ ರಾಯಭಾರಿಗಳ ಸಭೆಯು 'ಘಾನೋ ಫ್ಯೂಟ್ರೋ' ಆಗಿ ಹೊರಹೊಮ್ಮುತ್ತದೆ

April 01st, 12:40 pm

ವಿಕಸಿತ ಭಾರತ್ ರಾಯಭಾರಿ ಮೀಟ್-ಅಪ್ ಇತ್ತೀಚೆಗೆ ಜೈಪುರದ ರಾಜಸ್ಥಾನ ಇಂಟರ್ನ್ಯಾಷನಲ್ ಸೆಂಟರ್‌ನಲ್ಲಿ ಸಮಾವೇಶಗೊಂಡಿತು, ವಿವಿಧ ಹಿನ್ನೆಲೆಯಿಂದ 800 ಕ್ಕೂ ಹೆಚ್ಚು ಭಾಗವಹಿಸುವವರು ಭಾಗವಹಿಸಿದರು. ಅವರಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳನ್ನು ಪ್ರತಿನಿಧಿಸುವ ವಿದ್ಯಾರ್ಥಿಗಳು ಮತ್ತು ಸಿಎ, ವೈದ್ಯಕೀಯ ಮತ್ತು ಕಾನೂನು ಕ್ಷೇತ್ರಗಳಂತಹ ಸಂಘಗಳ ವೃತ್ತಿಪರರು ಇದ್ದರು. ಸಭೆಯಲ್ಲಿ, ಗೌರವಾನ್ವಿತ ಮುಖ್ಯ ಅತಿಥಿ, ಕೇಂದ್ರ ಸಚಿವ ಅನುರಾಗ್ ಠಾಕೂರ್, ಕಳೆದ ದಶಕದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದ ಪರಿವರ್ತನಾ ಪಯಣವನ್ನು ಎತ್ತಿ ತೋರಿಸಿದರು.

ಫೆಬ್ರವರಿ 16 ರಂದು ವಿಕಸಿತ ‘ಭಾರತ – ವಿಕಸಿತ ರಾಜಸ್ಥಾನ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ

February 15th, 03:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಫೆಬ್ರವರಿ 16 ರಂದು ಬೆಳಿಗ್ಗೆ 11 ಗಂಟೆಗೆ ‘ವಿಕಸಿತ ಭಾರತ – ವಿಕಸಿತ ರಾಜಸ್ಥಾನ’ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜಸ್ಥಾನದಲ್ಲಿ 17,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಸ್ತೆ, ರೈಲ್ವೆ, ಸೌರ ವಿದ್ಯುತ್, ವಿದ್ಯುತ್ ಪ್ರಸರಣ, ಕುಡಿಯುವ ನೀರು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳ ಯೋಜನೆಗಳನ್ನು ಇವು ಒಳಗೊಂಡಿವೆ.

​​​​​​​ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಜೈಪುರದ ಜಂತರ್ ಮಂತರ್ ಗೆ ಭೇಟಿ ನೀಡಿದ ಪ್ರಧಾನಿ

January 25th, 10:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಜೈಪುರದ ಜಂತರ್ ಮಂತರ್ ಗೆ ಭೇಟಿ ನೀಡಿದರು.

ಜನವರಿ 25 ರಂದು ಬುಲಂದ್‌ಶಹರ್ ಮತ್ತು ಜೈಪುರಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ

January 24th, 05:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 25 ರಂದು ಉತ್ತರ ಪ್ರದೇಶದ ಬುಲಂದ್‌ಶಹರ್ ಮತ್ತು ರಾಜಸ್ಥಾನದ ಜೈಪುರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿ ಅವರು ಬುಲಂದ್‌ಶಹರ್‌ನಲ್ಲಿ 19,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ದೇಶಕ್ಕೆ ಸಮರ್ಪಿಸಲಿದ್ದಾರೆ. ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ನಗರಾಭಿವೃದ್ಧಿ ಮತ್ತು ವಸತಿ ಮುಂತಾದ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿವೆ.

​​​​​​​ಅಖಿಲ ಭಾರತ ಮಹಾನಿರ್ದೇಶಕರು/ ಪೊಲೀಸ್ ಮಹಾನಿರೀಕ್ಷಕರ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗಿ

January 07th, 08:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 6 ಮತ್ತು 7 ರಂದು ಜೈಪುರದ ರಾಜಸ್ಥಾನ ಇಂಟರ್‌ ನ್ಯಾಷನಲ್‌ ಸೆಂಟರ್‌ನಲ್ಲಿ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 58 ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದರು.