ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ/ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
April 14th, 12:00 pm
ಹರಿಯಾಣದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜೀ, ರಾವ್ ಇಂದರ್ಜಿತ್ ಸಿಂಗ್ ಜೀ ಮತ್ತು ಕ್ರಿಶನ್ ಪಾಲ್ ಜೀ, ಹರಿಯಾಣ ಸರ್ಕಾರದ ಸಚಿವರು, ಸಂಸತ್ತು ಮತ್ತು ವಿಧಾನಸಭೆಯ ಸದಸ್ಯರು, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ. ಹರಿಯಾಣದ ನನ್ನ ಸಹೋದರ ಸಹೋದರಿಯರಿಗೆ ಮೋದಿಯ ನಮಸ್ಕಾರಗಳು.ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು ಹಾಗು ಶಂಕುಸ್ಥಾಪನೆ ನೆರವೇರಿಸಿದರು
April 14th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಯಮುನಾ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹರಿಯಾಣದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಅವರು, ಹರಿಯಾಣದ ಪವಿತ್ರ ಭೂಮಿಗೆ ಗೌರವ ನಮನ ಸಲ್ಲಿಸಿದರು, ಇದು ತಾಯಿ ಸರಸ್ವತಿಯ ಮೂಲ, ಮಂತ್ರ ದೇವಿಯ ವಾಸಸ್ಥಾನ, ಪಂಚಮುಖಿ ಹನುಮಾನ್ ಅವರ ನೆಲೆ ಮತ್ತು ಪವಿತ್ರ ಕಪಾಲ್ಮೋಚನ್ ಸಾಹಿಬ್ ಆಶೀರ್ವಾದ ಇರುವ ಭೂಮಿ ಎಂದು ಅವರು ಬಣ್ಣಿಸಿದರು. ಹರಿಯಾಣವು ಸಂಸ್ಕೃತಿ, ಭಕ್ತಿ ಮತ್ತು ಸಮರ್ಪಣೆಯ ಸಂಗಮವಾಗಿದೆ ಎಂದು ಅವರು ವಿವರಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯಂದು ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು, ಬಾಬಾ ಸಾಹೇಬ್ ಅವರ ಚಿಂತನೆ ಮತ್ತು ಸ್ಫೂರ್ತಿಯನ್ನು ಎತ್ತಿ ತೋರಿಸಿದರು, ಇದು ಭಾರತದ ಅಭಿವೃದ್ಧಿಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದರು.ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
April 13th, 09:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. ಈ ಹುತಾತ್ಮರ ಅದಮ್ಯ ಮನೋಭಾವವನ್ನು ಮುಂದಿನ ಪೀಳಿಗೆಗಳು ಸದಾ ಸ್ಮರಿಸುತ್ತವೆ ಎಂದು ಪ್ರಧಾನಮಂತ್ರಿಯವರು ಹೇಳಿದರು.ಮನ್ ಕಿ ಬಾತ್‌ಗಾಗಿ ಜನರು ತೋರಿದ ಪ್ರೀತಿ ಅಭೂತಪೂರ್ವ: ಪ್ರಧಾನಿ ಮೋದಿ
May 28th, 11:30 am
ನನ್ನ ಪ್ರೀತಿಯ ದೇಶಬಾಂಧವರೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಈ ಬಾರಿಯ 'ಮನದ ಮಾತಿನ' ಸಂಚಿಕೆ 2ನೇ ಶತಕದ ಆರಂಭವಾಗಿದೆ. ಕಳೆದ ತಿಂಗಳು ನಾವೆಲ್ಲರೂ ಶತಕದ ಸಂಭ್ರಮವನ್ನು ವಿಶೇಷವಾಗಿ ಆಚರಿಸಿದ್ದೇವೆ. ನಿಮ್ಮ ಭಾಗವಹಿಸುವಿಕೆ ಈ ಕಾರ್ಯಕ್ರಮದ ಬಹು ದೊಡ್ಡ ಶಕ್ತಿಯಾಗಿದೆ. 100ನೇ ಸಂಚಿಕೆ ಪ್ರಸಾರವಾಗುವ ಸಮಯದಲ್ಲಿ ಸಂಪೂರ್ಣ ದೇಶ ಒಂದು ಸೂತ್ರದಲ್ಲಿ ಬಂಧಿಸಿದಂತಾಗಿತ್ತು. ನಮ್ಮ ಸ್ವಚ್ಛತಾ ಕರ್ಮಚಾರಿ ಸಹೋದರ ಮತ್ತು ಸಹೋದರಿಯರು ಅಥವಾ ವಿವಿಧ ಕ್ಷೇತ್ರಗಳ ಅನುಭವಿಗಳಾಗಿರಲಿ, 'ಮನದ ಮಾತು' ಎಲ್ಲರನ್ನೂ ಒಟ್ಟಿಗೆ ಸೇರಿಸುವ ಕೆಲಸ ಮಾಡಿದೆ. 'ಮನದ ಮಾತಿಗೆ' ನೀವೆಲ್ಲರೂ ತೋರಿದ ಆತ್ಮೀಯತೆ ಮತ್ತು ಪ್ರೀತಿ ಅಭೂತಪೂರ್ವವಾಗಿದೆ, ಅದು ಭಾವುಕರನ್ನಾಗಿಸುವಂತಿದೆ. 'ಮನದ ಮಾತು' ಪ್ರಸಾರವಾದಾಗ, ಪ್ರಪಂಚದ ವಿವಿಧ ದೇಶಗಳಲ್ಲಿ, ಬೇರೆ ಬೇರೆ ಸಮಯಕ್ಕೆ ಅಂದರೆ, ಎಲ್ಲೋ ಸಂಜೆ ಮತ್ತು ಎಲ್ಲೋ ತಡರಾತ್ರಿಯಾಗಿತ್ತು, ಇದನ್ನು ಲೆಕ್ಕಿಸದೆ, 100 ನೇ ಸಂಚಿಕೆಯನ್ನು ಹೆಚ್ಚಿನ ಸಂಖ್ಯೆಯ ಜನರು ಆಲಿಸಲು ಸಮಯ ಮೀಸಲಿಟ್ಟರು. ನಾನು ಸಾವಿರಾರು ಮೈಲುಗಳಷ್ಟು ದೂರದಲ್ಲಿರುವ ನ್ಯೂಜಿಲೆಂಡ್‌ನ ಆ ವೀಡಿಯೊವನ್ನು ಕೂಡ ನೋಡಿದೆ, ಅದರಲ್ಲಿ 100 ವರ್ಷದ ತಾಯಿಯೊಬ್ಬರು ಆಶೀರ್ವಾದ ನೀಡುತ್ತಿದ್ದರು. ದೇಶ ವಿದೇಶದ ಜನರು 'ಮನದ ಮಾತಿನ' ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಜನರು ರಚನಾತ್ಮಕ ವಿಶ್ಲೇಷಣೆಯನ್ನು ಸಹ ಮಾಡಿದ್ದಾರೆ. ‘ಮನದ ಮಾತಿನಲ್ಲಿ’ ದೇಶ ಮತ್ತು ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತ್ರ ಚರ್ಚೆಯಾಗಿರುವುದನ್ನು ಜನ ಮೆಚ್ಚಿಕೊಂಡಿದ್ದಾರೆ. ಈ ಆಶೀರ್ವಾದಕ್ಕಾಗಿ ನಾನು ಮತ್ತೊಮ್ಮೆ ನಿಮ್ಮೆಲ್ಲರಿಗೂ ಗೌರವಪೂರ್ವಕವಾಗಿ ಧನ್ಯವಾದ ಸಲ್ಲಿಸುತ್ತೇನೆ.ಇಂಟರ್‌ನ್ಯಾಶನಲ್ ಮ್ಯೂಸಿಯಂ ಎಕ್ಸ್‌ಪೋ-2023 ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
May 18th, 11:00 am
ನನ್ನ ಸಂಪುಟ ಸಹೋದ್ಯೋಗಿಗಳಾದ ಜಿ. ಕಿಶನ್ ರೆಡ್ಡಿ ಜಿ, ಮೀನಾಕ್ಷಿ ಲೇಖಿ ಜಿ ಮತ್ತು ಅರ್ಜುನ್ ರಾಮ್ ಮೇಘವಾಲ್ ಜಿ, ಲೌವ್ರೆ ಮ್ಯೂಸಿಯಂ ನಿರ್ದೇಶಕ ಮ್ಯಾನುಯೆಲ್ ರಬಾಟೆ ಜಿ, ವಿಶ್ವದ ವಿವಿಧ ದೇಶಗಳ ಅತಿಥಿಗಳು, ಗಣ್ಯರು, ಮಹಿಳೆಯರು ಮತ್ತು ಮಹನಿಯರೆ! ನಾನು ನಿಮಗೆಲ್ಲರಿಗೂ ಅಂತಾರಾಷ್ಟ್ರೀಯ ಮ್ಯೂಸಿಯಂ ದಿನದ ಶುಭಾಶಯಗಳನ್ನು ಕೋರುತ್ತೇನೆ. ಮ್ಯೂಸಿಯಂ ಲೋಕದ ದಿಗ್ಗಜರು ಇಂದು ಇಲ್ಲಿ ಸೇರಿದ್ದಾರೆ. ಇಂದಿನ ಸಂದರ್ಭವೂ ವಿಶೇಷವಾಗಿದೆ, ಏಕೆಂದರೆ ಭಾರತವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಅಮೃತ ಮಹೋತ್ಸವ ಆಚರಿಸುತ್ತಿದೆ.ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಉದ್ಘಾಟಿಸಿದ ಪ್ರಧಾನಮಂತ್ರಿ
May 18th, 10:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಅನ್ನು ಉದ್ಘಾಟಿಸಿದರು. ಉತ್ತರ ಮತ್ತು ದಕ್ಷಿಣ ಬ್ಲಾಕ್ ಗಳಲ್ಲಿ ಮುಂಬರುವ ರಾಷ್ಟ್ರೀಯ ವಸ್ತುಸಂಗ್ರಹಾಲಯದ ವರ್ಚುವಲ್ ವಾಕ್ ಥ್ರೋವನ್ನು ಅವರು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಟೆಕ್ನೋ ಮೇಳ, ಸಂರಕ್ಷಣಾ ಪ್ರಯೋಗಾಲಯ ಮತ್ತು ವಸ್ತುಪ್ರದರ್ಶನಗಳಲ್ಲಿ ವಾಕ್ ಥ್ರೂ ನಡೆಸಿದರು. 'ವಸ್ತುಸಂಗ್ರಹಾಲಯಗಳು, ಸುಸ್ಥಿರತೆ ಮತ್ತು ಯೋಗಕ್ಷೇಮ' ಎಂಬ ಈ ವರ್ಷದ ಧ್ಯೇಯವಾಕ್ಯದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ 47 ನೇ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನವನ್ನು ಆಚರಿಸಲು ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋವನ್ನು ಆಯೋಜಿಸಲಾಗಿದೆ.PM recalls sacrifices of all those martyred on this day in Jallianwala Bagh
April 13th, 09:42 am
The Prime Minister, Shri Narendra Modi has recalled the sacrifices of all those martyred on this day in Jallianwala Bagh.ಗುಜರಾತ್‌ನ ದಾಹೋದ್‌ನಲ್ಲಿಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿಪ್ರಧಾನ ಮಂತ್ರಿಯ ಅವರ ಭಾಷಣದ ಕನ್ನಡ ಅನುವಾದ
April 20th, 09:49 pm
ಮೊದಲನೆಯದಾಗಿ, ನಾನು ದಾಹೋದ್‌ನ ಜನರ ಕ್ಷ ಮೆಯಾಚಿಸಲು ಬಯಸುತ್ತೇನೆ. ಆರಂಭದಲ್ಲಿ, ನಾನು ಸ್ವಲ್ಪ ಸಮಯದವರೆಗೆ ಹಿಂದಿಯಲ್ಲಿ ಮಾತನಾಡುತ್ತೇನೆ ಮತ್ತು ಅದರ ನಂತರ ನಾನು ನನ್ನ ಮಾತೃಭಾಷೆಯಲ್ಲಿಮಾತನಾಡುತ್ತೇನೆ.ಪ್ರಧಾನ ಮಂತ್ರಿ ಮೋದಿಯವರು ಗುಜರಾತ್‌ನ ದಾಹೋದ್ ಮತ್ತು ಪಂಚಮಹಲ್‌ನಲ್ಲಿ 22000 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು
April 20th, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಹೋದ್‌ನಲ್ಲಿ ನಡೆದ ಆದಿಜಾತಿ ಮಹಾ ಸಮ್ಮೇಳನದಲ್ಲಿ ಭಾಗವಹಿಸಿದ್ದರು, ಅಲ್ಲಿ ಅವರು ಸುಮಾರು 22,000 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. 1400 ಕೋಟಿಗೂ ಅಧಿಕ ಮೊತ್ತದ ಯೋಜನೆಗಳನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಸುಮಾರು 840 ಕೋಟಿ ರೂಪಾಯಿ ವೆಚ್ಚದಲ್ಲಿ ನರ್ಮದಾ ನದಿಯ ಜಲಾನಯನ ಪ್ರದೇಶದಲ್ಲಿ ನಿರ್ಮಿಸಲಾದ ದಾಹೋದ್ ಜಿಲ್ಲಾ ದಕ್ಷಿಣ ಪ್ರದೇಶದ ಪ್ರಾದೇಶಿಕ ನೀರು ಸರಬರಾಜು ಯೋಜನೆಯನ್ನು ಅವರು ಉದ್ಘಾಟಿಸಿದರು. ಇದು ದಾಹೋದ್ ಜಿಲ್ಲೆ ಮತ್ತು ದೇವಗಢ್ ಬರಿಯಾ ನಗರದ ಸುಮಾರು 280 ಹಳ್ಳಿಗಳ ನೀರು ಸರಬರಾಜಿನ ಅಗತ್ಯಗಳನ್ನು ಪೂರೈಸುತ್ತದೆ. ಪ್ರಧಾನಮಂತ್ರಿಯವರು ಸುಮಾರು 335 ಕೋಟಿ ರೂಪಾಯಿ ಮೌಲ್ಯದ ದಾಹೋದ್ ಸ್ಮಾರ್ಟ್ ಸಿಟಿಯ ಐದು ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳಲ್ಲಿ ಇಂಟಿಗ್ರೇಟೆಡ್ ಕಮಾಂಡ್ & ಕಂಟ್ರೋಲ್ ಸೆಂಟರ್ (ಐಸಿಸಿಸಿ) ಕಟ್ಟಡ, ಪ್ರವಾಹ ನೀರಿನ ಒಳಚರಂಡಿ ವ್ಯವಸ್ಥೆ, ಒಳಚರಂಡಿ ಕಾಮಗಾರಿಗಳು, ಘನ ತ್ಯಾಜ್ಯ ನಿರ್ವಹಣೆ ವ್ಯವಸ್ಥೆ ಮತ್ತು ಮಳೆ ನೀರು ಕೊಯ್ಲು ವ್ಯವಸ್ಥೆ ಸೇರಿವೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ, ಪಂಚಮಹಲ್ ಮತ್ತು ದಾಹೋದ್ ಜಿಲ್ಲೆಗಳ 10,000 ಬುಡಕಟ್ಟು ಜನರಿಗೆ 120 ಕೋಟಿ ರೂಪಾಯಿಗಳ ಸೌಕರ್ಯಗಳನ್ನು ಒದಗಿಸಲಾಗಿದೆ. ಪ್ರಧಾನಮಂತ್ರಿಯವರು 66 ಕೆವಿ ಘೋಡಿಯಾ ಸಬ್ ಸ್ಟೇಷನ್, ಪಂಚಾಯತ್ ಮನೆಗಳು, ಅಂಗನವಾಡಿಗಳು ಮತ್ತು ಇತರವುಗಳನ್ನು ಉದ್ಘಾಟಿಸಿದರು.1919ರ ಇದೇ ದಿನ ಜಲಿಯನ್ ವಾಲಾಬಾಗ್ ನಲ್ಲಿ ಹುತಾತ್ಮರಾದವರಿಗೆ ನಮನ ಸಲ್ಲಿಸಿದ ಪ್ರಧಾನಿ
April 13th, 10:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 1919ರ ಇದೇ ದಿನ ಜಲಿಯನ್ ವಾಲಾಬಾಗ್ ನಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ನರೇಂದ್ರ ಮೋದಿ ಅವರು, ಕಳೆದ ವರ್ಷ ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕೃತ ಸಂಕೀರ್ಣ ಉದ್ಘಾಟನೆ ವೇಳೆ ಮಾಡಿದ್ದ ಭಾಷಣವನ್ನು ಹಂಚಿಕೊಂಡಿದ್ದಾರೆ.ಕೋಲ್ಕೋತ್ತಾದ ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 23rd, 06:05 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ ಧನ್ಕಾರ್ ಜೀ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ, ವಿಕ್ಟೋರಿಯಾ ಸ್ಮಾರಕ ಸಭಾಂಗಣಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೇ, ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೇ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ದಿಗ್ಗಜಗಳೇ, ಮಹಿಳೆಯರೇ ಮತ್ತು ಮಹನೀಯರೇ!.ʻಶಾಹೀದ್ ದಿವಸʼದಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲರಿʼ ಉದ್ಘಾಟಿಸಿದ ಪ್ರಧಾನಿ
March 23rd, 06:00 pm
ಶಹೀದ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲʼರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನಕರ್ ಮತ್ತು ಕೇಂದ್ರ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Today, the mantra of the country is – Ek Bharat, Shreshtha Bharat: PM Modi
December 25th, 03:05 pm
Addressing Gurpurab celebrations of Guru Nanak Dev Ji at Gurudwara Lakhpat Sahib in Gujarat via video conferencing, PM Modi said that efforts were being made at every level for the message of Guru Nanak Dev Ji to reach the whole world. The countrymen had been wishing for easy access to Kartarpur Sahib. In 2019, our government completed the work of the Kartarpur Corridor, he added.PM addresses Gurpurab celebrations of Guru Nanak Dev Ji at Gurudwara Lakhpat Sahib, Gujarat
December 25th, 12:09 pm
Addressing Gurpurab celebrations of Guru Nanak Dev Ji at Gurudwara Lakhpat Sahib in Gujarat via video conferencing, PM Modi said that efforts were being made at every level for the message of Guru Nanak Dev Ji to reach the whole world. The countrymen had been wishing for easy access to Kartarpur Sahib. In 2019, our government completed the work of the Kartarpur Corridor, he added.ನವೀಕರಿಸಿದ ಜಲಿಯನ್ ವಾಲಾಬಾಗ್ ಸ್ಮಾರಕದಿಂದ ಒಂದು ನೋಟ
August 27th, 07:38 am
ಜಲಿಯನ್ ವಾಲಾ ಬಾಗ್ ಸ್ಮಾರಕ್‌ನ ನವೀಕರಿಸಿದ ಸಂಕೀರ್ಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 28, ಶನಿವಾರದಂದು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಿದ ಮ್ಯೂಸಿಯಂ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಈ ಸಂಕೀರ್ಣವು ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಕೈಗೊಂಡ ಬಹು ಅಭಿವೃದ್ಧಿ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ.ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ಆಗಸ್ಟ್ 28ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಿಯವರು ಸ್ಮಾರಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ
August 26th, 06:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು 2021ರ ಆಗಸ್ಟ್ 28ರಂದು ಸಂಜೆ 6:25ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಲಾದ ವಸ್ತುಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮವು ಅನಾವರಣಗೊಳಿಸಲಿದೆ.ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಪ್ರಧಾನಿ ಗೌರವವಂದನೆ
April 13th, 09:25 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿದರು.ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ
March 12th, 03:21 pm
ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 12th, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.