ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ
March 07th, 03:00 pm
ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.ಜನೌಷಧಿ ದಿನ ಸಂದರ್ಭದಲ್ಲಿ ಜನತೆಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಬದ್ಧತೆ ಪುನರುಚ್ಛರಿಸಿದ ಪ್ರಧಾನಮಂತ್ರಿ
March 07th, 12:20 pm
ಇಂದು ಜನೌಷಧಿ ದಿವಸ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಎಲ್ಲಾ ನಾಗರಿಕರಿಗೆ ಉತ್ತಮ ಗುಣಮಟ್ಟದ, ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ, ಆರೋಗ್ಯಕರ ಮತ್ತು ಸದೃಢ ಭಾರತವನ್ನು ಕಟ್ಟುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.