ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 14th, 11:00 am
ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದೇಶವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯ
August 16th, 08:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು.79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು
August 15th, 03:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 07:00 am
ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.India celebrates 79th Independence Day
August 15th, 06:45 am
PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
July 27th, 11:30 am
‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.ಜನ್ಮಾಷ್ಟಮಿ ಅಂಗವಾಗಿ ಸರ್ವರಿಗೂ ಪ್ರಧಾನ ಮಂತ್ರಿ ಶುಭಾಶಯ
August 26th, 08:16 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಸರ್ವರಿಗೂ ಶುಭಾಶಯ ಕೋರಿದ್ದಾರೆ.ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.ಜನ್ಮಾಷ್ಟಮಿಗೆ ಪ್ರಧಾನ ಮಂತ್ರಿ ಶುಭಾಶಯ
September 07th, 08:52 am
ಧರ್ಮನಿಷ್ಠೆ ಮತ್ತು ಭಕ್ತಿಯ ಈ ಪವಿತ್ರ ಸಂದರ್ಭವು ಜನರ ಜೀವನದಲ್ಲಿ ಹೊಸ ಸಂತೋಷ ಮತ್ತು ಶಕ್ತಿಯನ್ನು ತರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಗೋವಾದ ಪಣಜಿಯಲ್ಲಿ ಜರುಗಿದ ಹರ್ ಘರ್ ಜಲ ಉತ್ಸವದಲ್ಲಿ ಪ್ರಧಾನಮಂತ್ರಿಯವರ ವಿಡಿಯೊ ಸಂದೇಶದ ಕನ್ನಡ ಅವತರಣಿಕೆ
August 19th, 04:51 pm
ನಮಸ್ಕಾರ್, ಗೋವಾದ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಗೋವಾ ಸರ್ಕಾರದ ಇತರ ಸಚಿವರು, ಗಣ್ಯರು, ಘನತೆವೆತ್ತವರು, ಮಹಿಳೆಯರು ಮತ್ತು ಸಜ್ಜನ ಬಾಂಧವರೇ, ಇಂದು ಅತ್ಯಂತ ಮಹತ್ವದ ಮತ್ತು ಪವಿತ್ರ ದಿನವಾಗಿದೆ. ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಎಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದಾದ್ಯಂತ ಹರಡಿರುವ ಶ್ರೀ ಕೃಷ್ಣನ ಭಕ್ತರಿಗೆ ಅನೇಕ ಅಭಿನಂದನೆಗಳು. ಜೈ ಶ್ರೀ ಕೃಷ್ಣ!ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು
August 19th, 12:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಮಾತನಾಡಿದರು. ಪಣಜಿ ಗೋವಾದಲ್ಲಿ ಹರ್ ಘರ್ ಜಲ ಉತ್ಸವ ನಡೆದಿದೆ. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರಧಾನಮಂತ್ರಿಯವರು ಶ್ರೀ ಕೃಷ್ಣ ಭಕ್ತರಿಗೆ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.ಜನತೆಗೆ ಜನ್ಮಾಷ್ಟಮಿಯ ಶುಭ ಕೋರಿದ ಪ್ರಧಾನಮಂತ್ರಿ
August 19th, 10:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.ಜನ್ಮಾಷ್ಟಮಿ ಶುಭಾಶಯ ಕೋರಿದ ಲತಾ ಮಂಗೇಶ್ಕರ್ ಅವರಿಗೆ ಪ್ರಧಾನಿಯಿಂದ ಧನ್ಯವಾದ
August 30th, 09:53 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಗೆ ಜನ್ಮಾಷ್ಟಮಿ ಶುಭಾಶಯ ಕೋರಿದ ಲತಾ ಮಂಗೇಶ್ಕರ್ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ. ಖ್ಯಾತ ಗಾಯಕಿ ಪ್ರಧಾನಿ ಅವರಿಗೆ ಶುಭ ಹಾರೈಸಿದ್ದರು ಜೊತೆಗೆ ಶುಭ ಹಾರೈಕೆ ಟ್ವೀಟ್‌ನಲ್ಲಿ ತಮ್ಮ ಗುಜರಾತಿ ಭಜನೆಯೊಂದನ್ನು ಲಗತ್ತಿಸಿದ್ದರು.ಜನ್ಮಾಷ್ಟಮಿಯಂದು ಜನತೆಗೆ ಪ್ರಧಾನಿ ಶುಭಾಶಯ
August 30th, 11:00 am
ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.
August 29th, 11:30 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.ಜನ್ಮಾಷ್ಟಮಿ ಅಂಗವಾಗಿ ಜನತೆಗೆ ಪ್ರಧಾನಿ ಶಭಾಶಯ
August 11th, 08:14 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.ಜನ್ಮಾಷ್ಟಮಿಯ ಪ್ರಯುಕ್ತ ಪ್ರಧಾನಿಯವರಿಂದ ಜನತೆಗೆ ಶುಭಾಶಯ
August 24th, 07:50 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನ್ಮಾಷ್ಟಮಿಯ ಪ್ರಯುಕ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.