ಆಪರೇಷನ್ ಸಿಂದೂರ ಕುರಿತ ವಿಶೇಷ ಚರ್ಚೆಯಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 29th, 05:32 pm
ಈ ಅಧಿವೇಶನದ ಆರಂಭದಲ್ಲೇ ನಾನು ಮಾಧ್ಯಮ ಮಿತ್ರರೊಂದಿಗೆ ಮಾತನಾಡುವಾಗ, ಎಲ್ಲಾ ಸಂಸದರಿಗೂ ಒಂದು ಮನವಿ ಮಾಡಿದ್ದೆ. ಈ ಅಧಿವೇಶನವು ಭಾರತದ ವಿಜಯಗಳ ಆಚರಣೆಯಾಗಿದೆ ಎಂದು ನಾನು ಹೇಳಿದ್ದೆ. ಈ ಸಂಸತ್ತಿನ ಅಧಿವೇಶನವು ಭಾರತದ ಕೀರ್ತಿಯನ್ನು ಬಣ್ಣಿಸುವ ಅಧಿವೇಶನವಾಗಿದೆ.ʻಆಪರೇಷನ್ ಸಿಂದೂರʼ ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 29th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ದಿಟ್ಟ, ಯಶಸ್ವಿ ಮತ್ತು ನಿರ್ಣಾಯಕ ಕಾರ್ಯಾಚರಣೆ 'ಆಪರೇಷನ್ ಸಿಂದೂರ' ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳ ಜೊತೆಗಿನ ತಮ್ಮ ಸಂವಾದವನ್ನು ಸ್ಮರಿಸಿದರು, ಅಧಿವೇಶನವನ್ನು ಭಾರತದ ವಿಜಯಗಳ ಆಚರಣೆ ಮತ್ತು ಭಾರತದ ವೈಭವಕ್ಕೆ ಗೌರವ ಎಂದು ಪರಿಗಣಿಸುವಂತೆ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾಗಿ ಹೇಳಿದರು.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ
April 24th, 03:29 pm
ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.ಅಮೆರಿಕ ಉಪಾಧ್ಯಕ್ಷ ಮತ್ತು ಕುಟುಂಬಕ್ಕೆ ಪ್ರಧಾನಮಂತ್ರಿ ಆತಿಥ್ಯ
April 21st, 08:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕಾದ ಉಪಾಧ್ಯಕ್ಷರಾದ ಗೌರವಾನ್ವಿತ ಜೆ.ಡಿ. ವ್ಯಾನ್ಸ್ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಎರಡನೇ ಮಹಿಳೆ ಶ್ರೀಮತಿ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಯು.ಎಸ್. ಆಡಳಿತದ ಹಿರಿಯ ಸದಸ್ಯರು ಇದ್ದರು.ಪ್ರಧಾನಿ ಮೋದಿ ಅವರ ಫ್ರಾನ್ಸ್ ಭೇಟಿ: ಕಾರ್ಯತಂತ್ರದ ಪಾಲುದಾರಿಕೆಗಳನ್ನು ಬಲಪಡಿಸುವುದು ಮತ್ತು ಎಐ ಸಹಯೋಗವನ್ನು ಪ್ರವರ್ತಿಸುವುದು
February 13th, 03:06 pm
ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಫ್ರಾನ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್ ರಾಜತಾಂತ್ರಿಕ ಪ್ರವಾಸವು ಭಾರತದ ಜಾಗತಿಕ ಮೈತ್ರಿಗಳನ್ನು ಬಲಪಡಿಸುವಲ್ಲಿ ಗಮನಾರ್ಹ ಪರಿಣಾಮ ಬೀರಿತು, ಕೃತಕ ಬುದ್ಧಿಮತ್ತೆ (ಎಐ), ಆರ್ಥಿಕ ಸುಧಾರಣೆಗಳು ಮತ್ತು ಐತಿಹಾಸಿಕ ಸಂಬಂಧಗಳನ್ನು ಗೌರವಿಸುವ ಮೇಲೆ ಸ್ಪಷ್ಟ ಗಮನ ಹರಿಸಲಾಗಿದೆ. ಈ ಸಮಗ್ರ ಭೇಟಿಯು ಜವಾಬ್ದಾರಿಯುತ ಎಐ ಅಭಿವೃದ್ಧಿ, ಆರ್ಥಿಕ ಸಹಯೋಗ ಮತ್ತು ಕಾರ್ಯತಂತ್ರದ ಪಾಲುದಾರಿಕೆಗಳನ್ನು ಆಳಗೊಳಿಸುವ ಬಗ್ಗೆ ಭಾರತದ ಬದ್ಧತೆಯನ್ನು ಪ್ರದರ್ಶಿಸಿತು.ಪ್ಯಾರಿಸ್‌ನಲ್ಲಿ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ
February 12th, 12:19 am
ಪ್ಯಾರಿಸ್‌ನಲ್ಲಿ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ಅವರ ಕುಟುಂಬದೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಿದರು. ಅವರು ವಿವಿಧ ವಿಷಯಗಳ ಕುರಿತು ಅದ್ಭುತ ಸಂಭಾಷಣೆ ನಡೆಸಿದರು.