ಎಲ್ಲರಿಗೂ ಸಂತೋಷದ ಕ್ರಿಸ್‌ಮಸ್ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

December 25th, 09:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷದ ಕ್ರಿಸ್‌ಮಸ್ ಎಲ್ಲರಿಗೂ ಶಾಂತಿ, ಕರುಣೆ ಮತ್ತು ಭರವಸೆಯನ್ನು ಮೂಡಿಸಲಿ ಎಂದು ಹಾರೈಸಿದ್ದಾರೆ. ”ಯೇಸುಕ್ರಿಸ್ತನ ಬೋಧನೆಗಳು ನಮ್ಮ ಸಮಾಜದಲ್ಲಿ ಸಾಮರಸ್ಯವನ್ನು ಬಲವರ್ಧನೆಗೊಳಿಸಲಿ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಶುಭ ಶುಕ್ರವಾರದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರಿಂದ ದಯೆ ಮತ್ತು ಸಹಾನುಭೂತಿಯ ಮೌಲ್ಯಗಳ ಬಗ್ಗೆ ಪ್ರಸ್ತಾಪ

April 18th, 09:42 am

ಶುಭ ಶುಕ್ರವಾರದ ಸಂಭ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೇಸು ಕ್ರಿಸ್ತನ ಮಹತ್ತರ ತ್ಯಾಗವನ್ನು ಸ್ಮರಿಸಿದ್ದಾರೆ. ನಮ್ಮ ಜೀವನದಲ್ಲಿ ದಯೆ, ಸಹಾನುಭೂತಿ ಮತ್ತು ಔದಾರ್ಯವನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಈ ದಿನ ನೆನಪಿಸುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.