ಮಾರ್ಚ್ 28 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 26th, 09:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 28ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಅವರು ಗೌತಮ್ ಬುದ್ಧ ನಗರದ ಜೇವಾರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದಲ್ಲಿ ನಡೆದಾಡಿ ಪರಿಶೀಲಿಸಲಿದ್ದಾರೆ. ನಂತರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿಯವರು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ ಪರಿಷ್ಕೃತ ವೆಚ್ಚದ ಅಂದಾಜಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

March 10th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ 3630.77 ಕೋಟಿ ರೂಪಾಯಿಗಳ ಪರಿಷ್ಕೃತ ಒಟ್ಟು ಬಂಡವಾಳ ವೆಚ್ಚಕ್ಕೆ ಅನುಮೋದನೆ ನೀಡಿದೆ.