ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಸಿ ಪಿ ರಾಧಾಕೃಷ್ಣನ್ ಅವರ ಸನ್ಮಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ
December 01st, 11:15 am
(ಸಂಸತ್ತಿನ) ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ, ಮತ್ತು ಇಂದು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ. ನಿಮ್ಮನ್ನು ಸ್ವಾಗತಿಸುತ್ತಾ, ನಿಮ್ಮ ಮಾರ್ಗದರ್ಶನದಲ್ಲಿ ಈ ಸದನದ ಮೂಲಕ ಪ್ರಮುಖ ವಿಷಯಗಳನ್ನು ಚರ್ಚಿಸಲು, ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ನಿಮ್ಮ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲು ನಮಗೆಲ್ಲರಿಗೂ ಇದು ಒಂದು ಉತ್ತಮ ಅವಕಾಶವಾಗಿದೆ. ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ನನ್ನ ಶುಭ ಹಾರೈಕೆಗಳನ್ನು ಅರ್ಪಿಸುತ್ತೇನೆ. ಈ ಸದನದಲ್ಲಿರುವ ಎಲ್ಲಾ ಗೌರವಾನ್ವಿತ ಸದಸ್ಯರು ಈ ಮೇಲ್ಮನೆಯ ಘನತೆಯನ್ನು ಸದಾ ಎತ್ತಿಹಿಡಿಯುತ್ತಾರೆ, ನಿಮ್ಮ ಘನತೆಯನ್ನು ಸದಾ ಗೌರವಿಸುತ್ತಾರೆ ಮತ್ತು ಎತ್ತಿಹಿಡಿಯುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ಭರವಸೆ.ರಾಜ್ಯಸಭಾ ಸಭಾಧ್ಯಕ್ಷರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಸನ್ಮಾನಿಸುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾತುಗಳು
December 01st, 11:00 am
ಇಂದು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಿದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು. ಈ ದಿನವು ರಾಜ್ಯಸಭೆಯ ಎಲ್ಲಾ ಗೌರವಾನ್ವಿತ ಸದಸ್ಯರ ಪಾಲಿಗೆ ಹೆಮ್ಮೆಯ ಕ್ಷಣ ಎಂದು ಪ್ರಧಾನಮಂತ್ರಿ ಬಣ್ಣಿಸಿದರು. ಸಭಾಧ್ಯಕ್ಷರಿಗೆ ಆತ್ಮೀಯ ಸ್ವಾಗತ ಕೋರಿದ ಶ್ರೀ ಮೋದಿ, ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ನನ್ನ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ಈ ಮೇಲ್ಮನೆಯ ಎಲ್ಲಾ ಗೌರವಾನ್ವಿತ ಸದಸ್ಯರು ಸದಾ ಈ ಗೌರವಾನ್ವಿತ ಸಂಸ್ಥೆಯ ಘನತೆಯನ್ನು ಉಲ್ಲೇಖಿಸುತ್ತಾರೆ ಮತ್ತು ನಿಮ್ಮ ಘನತೆಯನ್ನು ಕಾಪಾಡುವ ಬಗ್ಗೆಯೂ ಸದಾ ಎಚ್ಚರಿಕೆಯಿಂದ ಇರುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ದೃಢವಾದ ಭರವಸೆಯಾಗಿದೆ.ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ಜಾರ್ಖಂಡ್ ರಾಜ್ಯ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ
November 15th, 08:22 am
ಜಾರ್ಖಂಡ್ ರಾಜ್ಯದ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಎಲ್ಲಾ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಜಾರ್ಖಂಡ್ ಶ್ರೀಮಂತ ಬುಡಕಟ್ಟು ಸಂಸ್ಕೃತಿಯಿಂದ ಸಮೃದ್ಧವಾಗಿರುವ ಅದ್ಭುತ ಭೂಮಿಯಾಗಿದೆ ಎಂದು ಅವರು ಹೇಳಿದರು. ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ನೆನಪಿಸಿಕೊಳ್ಳುತ್ತಾ, ಈ ಪವಿತ್ರ ಭೂಮಿಯ ಇತಿಹಾಸವು ಧೈರ್ಯ, ಹೋರಾಟ ಮತ್ತು ಘನತೆಯ ಸ್ಪೂರ್ತಿದಾಯಕ ಕಥೆಗಳಿಂದ ತುಂಬಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಾರ್ಖಂಡ್ ರಾಜ್ಯಪಾಲರು
November 10th, 06:43 pm
ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.
September 28th, 11:00 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.ಬಿಹಾರದಲ್ಲಿ ಒಟ್ಟು 2,192 ಕೋಟಿ ರೂಪಾಯಿ ವೆಚ್ಚದಲ್ಲಿ ʻಬಖ್ತಿಯಾರಪುರ್ – ರಾಜಗೀರ್ – ತಿಲೈಯʼ ಏಕ ಹಳಿ ರೈಲು ಮಾರ್ಗವನ್ನು (104 ಕಿ.ಮೀ.) ಜೋಡಿ ಮಾರ್ಗಕ್ಕೆ ವಿಸ್ತರಿಸಲು ಸಂಪುಟದ ಅನುಮೋದನೆ
September 24th, 03:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆಯು, ಬಿಹಾರದಲ್ಲಿ ಒಟ್ಟು 2,192 ಕೋಟಿ ರೂಪಾಯಿ (ಅಂದಾಜು) ವೆಚ್ಚದಲ್ಲಿ ಬಖ್ತಿಯಾರಪುರ್ – ರಾಜಗೀರ್ – ತಿಲೈಯ ನಡುವಿನ ಏಕ ಹಳಿ ರೈಲು ಮಾರ್ಗವನ್ನು (104 ಕಿ.ಮೀ.) ಜೋಡಿ ಮಾರ್ಗಕ್ಕೆ ವಿಸ್ತರಿಸಲು ಅನುಮೋದನೆ ನೀಡಿದೆ.ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಭಾಗಲ್ಪುರ್ - ದುಮ್ಕಾ – ರಾಂಪುರ್ ಹಾತ್ ಏಕ ರೈಲು ಮಾರ್ಗದಲ್ಲಿ (177 ಕಿ.ಮೀ) ಒಟ್ಟು 3,169 ಕೋಟಿ ರೂ ವೆಚ್ಚದಲ್ಲಿ ಜೋಡಿ ಹಳಿ ಮಾರ್ಗಕ್ಕೆ ಸಂಪುಟ ಅನುಮೋದನೆ
September 10th, 03:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾಗಲ್ಪುರ್ - ದುಮ್ಕಾ - ರಾಂಪುರ್ ಹಾತ್ ಏಕ ರೈಲು ಮಾರ್ಗವನ್ನು (177 ಕಿ.ಮೀ) ಒಟ್ಟು (ಅಂದಾಜು) ರೂ. 3,169 ಕೋಟಿ ವೆಚ್ಚದಲ್ಲಿ ಜೋಡಿ ಮಾರ್ಗ ನಿರ್ಮಾಣ ಮಾಡಲು ಅನುಮೋದನೆ ನೀಡಿದೆ.ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
August 20th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ.ಶ್ರೀ ಶಿಬೂ ಸೊರೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
August 04th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಶ್ರೀ ಶಿಬೂ ಸೊರೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ವನವಾಸಿ ಸಮುದಾಯ, ಬಡವರು ಹಾಗೂ ದೀನರ ಸಬಲೀಕರಣಕ್ಕಾಗಿ ಅವರ ಆಸಕ್ತಿಯನ್ನು ಶ್ರೀ ಮೋದಿ ಅವರು ಶ್ಲಾಘಿಸಿದರು.ಜಾರ್ಖಂಡ್ ನ ದೇವಘರ್ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ
July 29th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ನ ದೇವಘರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.Cabinet approves two multitracking projects across Indian Railways covering various states
June 11th, 03:05 pm
The Cabinet Committee on Economic Affairs, chaired by PM Modi, has approved Koderma – Barkakana Doubling and Ballari – Chikjajur Doubling projects of Ministry of Railways with total cost of Rs. 6,405 crore. These initiatives will improve travel convenience, reduce logistic cost, decrease oil imports and contribute to lower CO2 emissions, supporting sustainable and efficient rail operations and generate employment.17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ
April 21st, 11:30 am
ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
April 21st, 11:00 am
ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಜಾರ್ಖಂಡ್ ರಾಜ್ಯಪಾಲರು
March 18th, 12:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿಂದು ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಭೇಟಿಯಾದರು.PM Modi congratulates Shri Hemant Soren on taking oath as Jharkhand CM
November 28th, 07:27 pm
Prime Minister Shri Narendra Modi today congratulated Shri Hemant Soren on taking oath as Chief Minister of Jharkhand.Jharkhand Chief Minister calls on PM Modi
November 26th, 05:21 pm
The Chief Minister of Jharkhand Shri Hemant Soren and MLA-elect Smt Kalpana Soren called on Prime Minister Shri Narendra Modi today.Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.