ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 27th, 11:45 am

ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.

ಸೆಪ್ಟೆಂಬರ್ 27 ರಂದು ಒಡಿಶಾಗೆ ಪ್ರಧಾನಮಂತ್ರಿ ಭೇಟಿ

September 26th, 09:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸೆಪ್ಟೆಂಬರ್ 27 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಈ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.