Prime Minister Speaks with King of Jordan
March 19th, 07:16 pm
Prime Minister Shri Narendra Modi held a telephonic conversation with His Majesty King Abdullah II, the King of Jordan, to exchange festive greetings and discuss the evolving security situation in the region.Prime Minister speaks with the King of Jordan
March 02nd, 09:45 pm
PM Modi spoke with His Majesty King Abdullah II, the King of Jordan. During the discussions, the PM conveyed deep concern over the evolving situation in the region and reaffirmed his support for the people of Jordan. He also thanked His Majesty for taking care of the Indian community in Jordan.ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
December 16th, 12:24 pm
ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ
December 16th, 12:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.List of Outcomes Visit of Prime Minister to Jordan
December 15th, 11:52 pm
During the meeting between PM Modi and HM King Abdullah II of Jordan, several MoUs were signed. These include agreements on New and Renewable Energy, Water Resources Management & Development, Cultural Exchange and Digital Technology.ಜೋರ್ಡಾನ್‌ನ ಗೌರವಾನ್ವಿತ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
December 15th, 11:00 pm
140 ಕೋಟಿ ಭಾರತೀಯರ ಪರವಾಗಿ ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ನಿಮಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನೀವು ತುಂಬಾ ಸಕಾರಾತ್ಮಕ ಚಿಂತನೆಗಳನ್ನು ಮುಂದಿಟ್ಟಿದ್ದೀರಿ. ನಿಮ್ಮ ಸ್ನೇಹ ಮತ್ತು ಭಾರತಕ್ಕೆ ನಿಮ್ಮ ಆಳವಾದ ಬದ್ಧತೆಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ,ಜೋರ್ಡಾನ್ ದೊರೆ ಎರಡನೇ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
December 15th, 10:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋರ್ಡಾನ್ ನ ದೊರೆ ಎರಡನೇ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದರು. ಅಲ್ ಹುಸೇನಿಯಾ ಅರಮನೆಗೆ ಆಗಮಿಸಿದ ಕೂಡಲೇ ಪ್ರಧಾನಮಂತ್ರಿ ಅವರನ್ನು ದೊರೆ ಎರಡನೇ ಅಬ್ದುಲ್ಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು.ಜೋರ್ಡಾನ್ ನ ಅಮ್ಮನ್ ಗೆ ಆಗಮಿಸಿದ ಪ್ರಧಾನಮಂತ್ರಿ ಅವರಿಗೆ ಭವ್ಯ ಸ್ವಾಗತ
December 15th, 04:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋರ್ಡಾನ್ ರಾಜಧಾನಿ ಅಮ್ಮನ್ ನಗರಕ್ಕೆ ಆಗಮಿಸಿದರು. ಎರಡು ದೇಶಗಳ ನಡುವಿನ ಆಪ್ತ ಸಂಬಂಧಗಳನ್ನು ಪ್ರತಿಬಿಂಬಿಸುವ ವಿಶೇಷ ಗೌರವದ ಸೂಚಕವಾಗಿ, ಅಮ್ಮನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ಮೋದಿ ಅವರಿಗೆ ಜೋರ್ಡಾನ್ ಪ್ರಧಾನಮಂತ್ರಿ ಗೌರವಾನ್ವಿತ ಡಾ. ಜಾಫರ್ ಹಸನ್ ಅವರು ಹಾರ್ದಿಕವಾಗಿ ಬರಮಾಡಿಕೊಂಡು ಭವ್ಯ ಸ್ವಾಗತವನ್ನು ನೀಡಿದರು.ಜೋರ್ಡಾನ್, ಇಥಿಯೋಪಿಯಾ ಮತ್ತು ಓಮಾನ್ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
December 15th, 08:15 am
ಇಂದು, ನಾನು ಹಾಶೆಮೈಟ್ ಕಿಂಗ್ಡಂ ಆಫ್ ಜೋರ್ಡಾನ್ , ಫೆಡರಲ್ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಇಥಿಯೋಪಿಯಾ ಮತ್ತು ಒಮಾನ್ ಸುಲ್ತಾನೇಟ್ ಗೆ ಮೂರು ದೇಶಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ, ಈ ಮೂರು ದೇಶಗಳೊಂದಿಗೆ ಭಾರತವು ವ್ಯಾಪಕವಾದ ಸಮಕಾಲೀನ ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾಚೀನ ನಾಗರಿಕ ಸಂಬಂಧಗಳನ್ನು ಹೊಂದಿದೆ.ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್‌ಗೆ ಪ್ರಧಾನಮಂತ್ರಿ ಭೇಟಿ
December 11th, 08:43 pm
ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ಡಿಸೆಂಬರ್ 15ರಿಂದ 16ರ ವರೆಗೆ ಜೋರ್ಡಾನ್‌ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿ ಅವರು ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರನ್ನು ಭೇಟಿ ಮಾಡಿ ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಪರಿಶೀಲಿಸಲಿದ್ದಾರೆ, ಪ್ರಾದೇಶಿಕ ವಿಷಯಗಳ ಕುರಿತು ದೃಷ್ಟಿಕೋನಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವವನ್ನು ಗುರುತಿಸುವ ಈ ಭೇಟಿಯು, ಭಾರತ-ಜೋರ್ಡಾನ್ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು, ಪರಸ್ಪರ ಬೆಳವಣಿಗೆ ಮತ್ತು ಸಮೃದ್ಧಿಗಾಗಿ ಸಹಯೋಗದ ಹೊಸ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಪ್ರಾದೇಶಿಕ ಶಾಂತಿ, ಸಮೃದ್ಧಿ, ಭದ್ರತೆ ಮತ್ತು ಸ್ಥಿರತೆ ಉತ್ತೇಜಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಅವಕಾಶ ಒದಗಿಸುತ್ತದೆ.ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಆರಂಭಿಕ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳ ಅಗತ್ಯತೆ ಕುರಿತು ಹೆಚ್ಚಿನ ಒತ್ತು ನೀಡಿದರು
October 23rd, 07:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್‌ನ ಗೌರವಾನ್ವಿತ ರಾಜ II ನೇ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಪಶ್ಚಿಮ ಏಷ್ಯಾ ಪ್ರದೇಶದ ಅಭಿವೃದ್ಧಿ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಕಳವಳವನ್ನು ಕೂಡಾ ಶ್ರೀ ಮೋದಿಯವರು ವ್ಯಕ್ತಪಡಿಸಿದರು ಮತ್ತು ಭದ್ರತೆ ಹಾಗೂ ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳ ಅಗತ್ಯತೆ ಬಗ್ಗೆ ಒತ್ತಿ ಹೇಳಿದರು.ಜೋರ್ಡಾನ್ ಸಾಮ್ರಾಜ್ಯ ಸಂಸ್ಥಾಪನೆಯ 100ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಘನತೆವೆತ್ತ ದೊರೆ ಎರಡನೇ ಅಬ್ದುಲ್ಲಾ ಮತ್ತು ಜೋರ್ಡಾನ್ ನ ಹಶೆಮಿತ್ ಸಾಮ್ರಾಜ್ಯದ ಜನರನ್ನು ಅಭಿನಂದಿಸಿದ ಪ್ರಧಾನಿ
April 14th, 08:58 am
ಜೋರ್ಡಾನ್ ರಾಜ್ಯ ಸ್ಥಾಪನೆಯಾದ 100 ನೇ ವರ್ಷಾಚರಣೆಯ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಘನತೆವೆತ್ತ ದೊರೆ ಎರಡನೇ ಅಬ್ದುಲ್ಲಾ ಮತ್ತು ಜೋರ್ಡಾನ್ ಹಶೆಮಿತ್ ಸಾಮ್ರಾಜ್ಯದ ಜನರನ್ನು ಅಭಿನಂದಿಸಿದರು.ಜೋರ್ಡಾನ್ ಸಾಮ್ರಾಜ್ಯದ 100ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿಯವರ ಮಾತುಗಳು
April 14th, 08:53 am
ಜೋರ್ಡಾನ್ ಸಾಮ್ರಾಜ್ಯದ 100ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲು ಬಯಸುತ್ತೇನೆ.Telephone Conversation between PM and King of Hashemite Kingdom of Jordan
April 16th, 07:54 pm
Prime Minister Shri Narendra Modi had a telephone conversation today with His Majesty King Abdullah II of the Hashemite Kingdom of Jordan.ರಿಯಾದ್‌ನಲ್ಲಿ ಪ್ರಧಾನಿ ಮತ್ತು ಜೋರ್ಡಾನ್ ದೊರೆ ಭೇಟಿ
October 29th, 02:18 pm
ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಭವಿಷ್ಯದ ಹೂಡಿಕೆ ಉಪಕ್ರಮದ (ಎಫ್‌ಐಐ) ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್‌ನ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ಅ ವರನ್ನು ಭೇಟಿಯಾದರು. ಫೆಬ್ರವರಿ 27ರಿಂದ ಮಾರ್ಚ್ 01, 2018 ರವರೆಗೆ ದೊರೆಯ ಭಾರತ ಭೇಟಿಯ ಸಮಯದಲ್ಲಿ ಸಹಿ ಮಾಡಿದ ಒಪ್ಪಂದಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಅವರು ಮಧ್ಯಪ್ರಾಚ್ಯ ಶಾಂತಿ ಪ್ರಕ್ರಿಯೆ ಮತ್ತು ಇತರ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಉಭಯ ನಾಯಕರು ಭಯೋತ್ಪಾದನೆ ನಿಗ್ರಹದಲ್ಲಿ ಸಹಕಾರದ ಬಗ್ಗೆಯೂ ಚರ್ಚಿಸಿದರು.List of MoUs/Agreements signed during the Visit of the King of Jordan to India (March 01, 2018)
March 01st, 05:07 pm
Twelve key agreements including in the field of defence, cultural exchange, health and medicine were inked between India and Jordan.Every Indian is proud of the rich diversity the country has: PM Modi
March 01st, 11:56 am
Addressing the conference on Islamic Heritage, PM Narendra Modi said that religions across the world flourished in India and every Indian was proud of the rich persity of the country. He said that India believed in the philosophy of ‘Vasudhaiva Kutumbakam’ –the entire world is one family. Also, highlighting the mantra of ‘Sabka Saath, Sabka Vikas’, he added that India believed in taking everyone together in the journey towards development.ಜೋರ್ಡಾನ್ ನ ರಾಜ ಅಬ್ದುಲ್ಲಾ II ಅವರನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು
February 09th, 08:58 pm
ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್ ನ ರಾಜ ಅಬ್ದುಲ್ಲಾ II ರೊಂದಿಗೆ ಮಾತುಕತೆ ನಡೆಸಿದರು.ಪ್ರಧಾನಿ ಮೋದಿ ಜೋರ್ಡಾನ್ ನ ಅಮ್ಮನ್ ಗೆ ಆಗಮಿಸಿದರು
February 09th, 06:50 pm
ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್ ನ ಅಮ್ಮನ್ ಗೆ ಆಗಮಿಸಿದರು. ಪ್ರಧಾನಮಂತ್ರಿಯವರು ಜೋರ್ಡಾನ್ ನ ರಾಜ ಅಬ್ದುಲ್ಲಾ II ರೊಂದಿಗೆ ಭೇಟಿಯಾಗಲಿದ್ದಾರೆ.