Sri Guru Teg Bahadur Ji's life, sacrifice and character are a tremendous source of inspiration: PM Modi in Kurukshetra
November 25th, 04:40 pm
PM Modi addressed an event commemorating the 350th Shaheedi Diwas of Sri Guru Teg Bahadur Ji at Kurukshetra in Haryana. He remarked that Sri Guru Teg Bahadur Ji considered the defense of truth, justice, and faith as his dharma, and he upheld this dharma by sacrificing his life. On this historic occasion, the Government of India has had the privilege of dedicating a commemorative postage stamp and a special coin at the feet of Sri Guru Teg Bahadur Ji.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು
November 25th, 04:38 pm
ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.ಹೊಸದಿಲ್ಲಿಯಲ್ಲಿ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವಿಕೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 08th, 05:33 pm
ಸಿಜೆಐ ಶ್ರೀ ಬಿ ಆರ್ ಗವಾಯಿ ಜೀ, ನ್ಯಾಯಮೂರ್ತಿ ಸೂರ್ಯ ಕಾಂತ್ ಜೀ, ನ್ಯಾಯಮೂರ್ತಿ ವಿಕ್ರಮ್ ನಾಥ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅರ್ಜುನ್ ರಾಮ್ ಮೇಘವಾಲ್ ಜೀ, ಸುಪ್ರೀಂ ಕೋರ್ಟ್‌ನ ಇತರ ಗೌರವಾನ್ವಿತ ನ್ಯಾಯಮೂರ್ತಿಗಳು, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು, ಹಾಗು ಮಹಿಳೆಯರೇ ಮತ್ತು ಮಹನೀಯರೇ,"ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು" ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 08th, 05:00 pm
ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಈ ಮಹತ್ವದ ಸಂದರ್ಭದಲ್ಲಿ ನೆರೆದಿರುವ ನಿಮ್ಮೆಲ್ಲರ ನಡುವೆ ಇರುವುದು ನಿಜವಾಗಿಯೂ ವಿಶೇಷವಾದದ್ದು ಎಂದು ಹೇಳಿದರು. ಕಾನೂನು ನೆರವು ವಿತರಣಾ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಾನೂನು ಸೇವಾ ದಿನಕ್ಕೆ ಸಂಬಂಧಿಸಿದ ಕಾರ್ಯಕ್ರಮವು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 20ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರಧಾನಮಂತ್ರಿ ಅವರು ಎಲ್ಲರಿಗೂ ಶುಭ ಹಾರೈಸಿದರು. ಅಲ್ಲದೆ, ಉಪಸ್ಥಿತರಿದ್ದ ಗಣ್ಯರು, ನ್ಯಾಯಾಂಗದ ಸದಸ್ಯರು ಹಾಗೂ ಕಾನೂನು ಸೇವಾ ಪ್ರಾಧಿಕಾರಗಳ ಪ್ರತಿನಿಧಿಗಳಿಗೆ ಅವರು ಶುಭಾಶಯ ಕೋರಿದರು.ಶ್ರೀ ಗುರು ಗೋಬಿಂದ್ ಸಿಂಗ್ ಮತ್ತು ಮಾತಾ ಸಾಹಿಬ್ ಕೌರ್ ಅವರ ಅತ್ಯಂತ ಪುಣ್ಯಮಯ ಮತ್ತು ಅಮೂಲ್ಯವಾದ ಪವಿತ್ರ 'ಜೋರೆ ಸಾಹಿಬ್' ನ ಸುರಕ್ಷತೆ ಮತ್ತು ಸೂಕ್ತ ಪ್ರದರ್ಶನಕ್ಕೆ ಸಂಬಂಧಿಸಿದ ಶಿಫಾರಸ್ಸು ಸಲ್ಲಿಸಿರುವ ಸಿಖ್ ನಿಯೋಗದ ಗಣ್ಯರು ಮತ್ತು ಕೌಶಲ್ಯಯುತ ಸದಸ್ಯರಿಗೆ ಪ್ರಧಾನಮಂತ್ರಿ ಸ್ವಾಗತ
September 19th, 04:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಖ್ ನಿಯೋಗದ ಗಣ್ಯರು ಮತ್ತು ಕೌಶಲ್ಯಯುತ ಸದಸ್ಯರನ್ನು ಬರಮಾಡಿಕೊಂಡರು. ಅವರು ಶ್ರೀ ಗುರು ಗೋವಿಂದ ಸಿಂಗ್ ಮತ್ತು ಮಾತಾ ಸಾಹಿಬ್ ಕೌರ್ ಅವರ ಅತ್ಯಂತ ಪುಣ್ಯ ಮತ್ತು ಅಮೂಲ್ಯವಾದ ಪವಿತ್ರ 'ಜೋರ್ ಸಾಹಿಬ್' ನ ಸುರಕ್ಷತೆ ಮತ್ತು ಸೂಕ್ತ ಪ್ರದರ್ಶನಕ್ಕೆ ಸಂಬಂಧಿಸಿದಂತೆ ತಮ್ಮ ಶಿಫಾರಸುಗಳನ್ನು ಸಲ್ಲಿಸಿದರು. ಸಿಖ್ ಇತಿಹಾಸದ ಭವ್ಯ ಭಾಗವಾಗಿರುವ 'ಜೋರ್ ಸಾಹಿಬ್' ಆಧ್ಯಾತ್ಮಿಕವಾಗಿ ಪ್ರಮುಖವಾಗಿರುವಷ್ಟೇ ನಮ್ಮ ರಾಷ್ಟ್ರದ ಸಾಂಸ್ಕೃತಿಕ ಚೈತನ್ಯದ ಅಂಗವಾಗಿರುವ ಪವಿತ್ರ ಅವಶೇಷಗಳು ಸಹ ಮಹತ್ವದ್ದಾಗಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಶ್ರೀ ಗುರು ಗೋವಿಂದ ಸಿಂಗ್ ಅವರು ತೋರಿದ ಶೌರ್ಯ, ಸದಾಚಾರ, ನ್ಯಾಯ ಮತ್ತು ಸಾಮಾಜಿಕ ಸಾಮರಸ್ಯದ ಮಾರ್ಗವನ್ನು ಅನುಸರಿಸಲು ಪವಿತ್ರ ಅವಶೇಷಗಳು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತವೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 25th, 06:42 pm
ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!ಗುಜರಾತಿನ ಅಹಮದಾಬಾದ್ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು
August 25th, 06:15 pm
ಗುಜರಾತಿನ ಅಹಮದಾಬಾದ್ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 08:14 pm
ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.Prime Minister addresses the Namibian Parliament
July 09th, 08:00 pm
PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿಯ ಕುರಿತು ಜಂಟಿ ಹೇಳಿಕೆ
July 05th, 09:02 am
ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಕಮಲಾ ಪರ್ಸಾದ್-ಬಿಸೆಸ್ಸಾರ್ ಅವರ ಆಹ್ವಾನದ ಮೇರೆಗೆ, ಜುಲೈ 3 ರಿಂದ 4, 2025 ರವರೆಗೆ ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ʻಪ್ರಗತಿʼ ಸಭೆ
May 28th, 09:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆಯಾದ ʻಪ್ರಗತಿʼ (ಪಿ.ಆರ್.ಎ.ಜಿ.ಎ.ಟಿ.ಐ.) ಸಭೆಯ ಅಧ್ಯಕ್ಷತೆ ವಹಿಸಿದ್ದರು.ತಿರುವಳ್ಳುವರ್ ದಿನದಂದು, ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಧೀಮಂತ ತಿರುವಳ್ಳುವರ್ ಅವರನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ
January 15th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವಳ್ಳುವರ್ ದಿನದಂದು ತಮಿಳಿನ ಮಹಾನ್ ತತ್ವಜ್ಞಾನಿ, ಕವಿ ಮತ್ತು ಚಿಂತಕರಾದ ತಿರುವಳ್ಳುವರ್ ಅವರನ್ನು ಸ್ಮರಿಸಿದ್ದಾರೆ. ಧೀಮಂತ ತಿರುವಳ್ಳವರ್ ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 06th, 08:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ರಕ್ಷಣೆಯ ಮೌಲ್ಯಗಳಿಗಾಗಿ ಶ್ರೀ ಗುರು ತೇಜ್ ಬಹದ್ದೂರ್ ಜೀ ಅವರ ಸಾಟಿಯಿಲ್ಲದ ಧೈರ್ಯ ಮತ್ತು ತ್ಯಾಗವನ್ನು ಸ್ಮರಿಸಿದರು.ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಚಂಡೀಗಢದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ ಮೋದಿ
December 02nd, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ಪರಿವರ್ತಕ ಹೊಸ ಕ್ರಿಮಿನಲ್ ಕಾನೂನುಗಳಾದ - ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳ ಯಶಸ್ವಿ ಅನುಷ್ಠಾನವನ್ನು 2024ರ ಡಿಸೆಂಬರ್ 3 ರಂದು ಮಧ್ಯಾಹ್ನ 12 ಗಂಟೆಗೆ ಚಂಡೀಗಢದಲ್ಲಿ ದೇಶಕ್ಕೆ ಸಮರ್ಪಿಸಲಿದ್ದಾರೆ.ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
August 31st, 10:30 am
ಈ ಸಮಾರಂಭವು ತುಂಬಾ ಗಂಭೀರವಾಗಿದೆ ಎಂದು ನನಗೆ ಅನಿಸುತ್ತದೆ. ಕೆಲ ದಿನಗಳ ಹಿಂದೆಯಷ್ಟೇ ರಾಜಸ್ಥಾನ ಹೈಕೋರ್ಟ್‌ನ ಪ್ಲಾಟಿನಂ ಜ್ಯೂಬಿಲಿ ಸಮಾರಂಭದಲ್ಲಿ ಭಾಗವಹಿಸಿದ್ದೆ ಮತ್ತು ಇಂದು ಸುಪ್ರೀಂ ಕೋರ್ಟ್‌ನ ಯಾತ್ರೆಯ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ನ 75 ವರ್ಷಗಳು ಕೇವಲ ಸಂಸ್ಥೆಯ ಪ್ರಯಾಣವಲ್ಲ; ಇದು ಭಾರತೀಯ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳ ಪಯಣ! ಇದು ಪ್ರಜಾಪ್ರಭುತ್ವವಾಗಿ ಪಕ್ವಗೊಳ್ಳುತ್ತಿರುವ ಭಾರತದ ಪಯಣ! ಮತ್ತು ನಮ್ಮ ಸಂವಿಧಾನ ರಚನೆಕಾರರು ಮತ್ತು ನ್ಯಾಯಾಂಗದ ಅನೇಕ ಗಣ್ಯ ವ್ಯಕ್ತಿಗಳ ಕೊಡುಗೆಗಳು ಈ ಪ್ರಯಾಣದಲ್ಲಿ ಬಹಳ ಮಹತ್ವದ್ದಾಗಿದೆ. ಈ ಪ್ರಯಾಣವು ಲಕ್ಷಾಂತರ ನಾಗರಿಕರ ಕೊಡುಗೆಯನ್ನು ಒಳಗೊಂಡಿದೆ, ಅವರು ಪ್ರತಿ ಸಂದರ್ಭದಲ್ಲೂ ನ್ಯಾಯಾಂಗದಲ್ಲಿ ತಮ್ಮ ನಂಬಿಕೆಯನ್ನು ಅಚಲವಾಗಿ ಇಟ್ಟುಕೊಂಡಿದ್ದಾರೆ. ಭಾರತದ ಜನರು ಸುಪ್ರೀಂ ಕೋರ್ಟ್ ಅಥವಾ ನಮ್ಮ ನ್ಯಾಯಾಂಗವನ್ನು ಎಂದಿಗೂ ಅನುಮಾನಿಸಲಿಲ್ಲ. ಆದ್ದರಿಂದ, ಸುಪ್ರೀಂ ಕೋರ್ಟ್‌ನ ಈ 75 ವರ್ಷಗಳು ಪ್ರಜಾಪ್ರಭುತ್ವದ ತಾಯಿ ಎಂಬ ಭಾರತದ ಹೆಮ್ಮೆಯನ್ನು ಇನ್ನಷ್ಟು ಹೆಚ್ಚಿಸುತ್ತವೆ. ಸತ್ಯಮೇವ ಜಯತೇ, ನನೃತಂ (ಸತ್ಯವೇ ಜಯಿಸುತ್ತದೆ, ಸುಳ್ಳಲ್ಲ) ಎಂದು ಹೇಳುವ ನಮ್ಮ ಸಾಂಸ್ಕೃತಿಕ ಘೋಷಣೆಯನ್ನು ಇದು ಬಲಪಡಿಸುತ್ತದೆ. ರಾಷ್ಟ್ರವು 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವಾಗ, ಇದು ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲಿದೆ. ಆದ್ದರಿಂದ, ಈ ಕ್ಷಣದಲ್ಲಿ ಹೆಮ್ಮೆ, ವೈಭವ ಮತ್ತು ಸ್ಫೂರ್ತಿ ಇದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ನ್ಯಾಯಶಾಸ್ತ್ರಜ್ಞರಿಗೆ ಮತ್ತು ಇಡೀ ರಾಷ್ಟ್ರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಸಮಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜಿಲ್ಲಾ ನ್ಯಾಯಾಂಗ ಸಮ್ಮೇಳನಕ್ಕೂ ನನ್ನ ಶುಭ ಹಾರೈಕೆಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು
August 31st, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯ 75ನೇ ವರ್ಷಾಚರಣೆಯ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು. ಭಾರತದ ಸರ್ವೋಚ್ಚ ನ್ಯಾಯಾಲಯವು ಆಯೋಜಿಸಿರುವ ಎರಡು ದಿನಗಳ ಸಮ್ಮೇಳನವು ಜಿಲ್ಲಾ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಾದ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ, ಎಲ್ಲರಿಗೂ ಅಂತರ್ಗತ ನ್ಯಾಯಾಲಯಗಳು, ನ್ಯಾಯಾಂಗ ಭದ್ರತೆ ಮತ್ತು ನ್ಯಾಯಾಂಗ ಸ್ವಾಸ್ಥ್ಯ, ಪ್ರಕರಣ ನಿರ್ವಹಣೆ ಮತ್ತು ನ್ಯಾಯಾಂಗ ತರಬೇತಿಯಂತಹ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಚರ್ಚಿಸಲು ಐದು ಕೆಲಸದ ಅಧಿವೇಶನಗಳನ್ನು ಆಯೋಜಿಸುತ್ತದೆ.ಖ್ಯಾತ ವಕೀಲ ಫಾಲಿ ನಾರಿಮನ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ
February 21st, 11:12 am
ಖ್ಯಾತ ವಕೀಲರಾದ ಶ್ರೀ ಫಾಲಿ ನಾರಿಮನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದರು.ಸೆಪ್ಟೆಂಬರ್ 23 ರಂದು ನವದೆಹಲಿಯಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಲಿರುವ ಪ್ರಧಾನಮಂತ್ರಿ
September 22nd, 02:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ' ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.