PM Modi expresses gratitude to world leaders for birthday wishes
September 17th, 03:03 pm
The Prime Minister Shri Narendra Modi expressed his gratitude to the world leaders for greetings on his 75th birthday, today.ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿಯ ಕುರಿತು ಜಂಟಿ ಹೇಳಿಕೆ
July 05th, 09:02 am
ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಕಮಲಾ ಪರ್ಸಾದ್-ಬಿಸೆಸ್ಸಾರ್ ಅವರ ಆಹ್ವಾನದ ಮೇರೆಗೆ, ಜುಲೈ 3 ರಿಂದ 4, 2025 ರವರೆಗೆ ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.ಟ್ರಿನಿಡಾಡ್ ಮತ್ತು ಟೊಬೆಗೊ ಪ್ರಧಾನಮಂತ್ರಿಯೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
July 04th, 11:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೋರ್ಟ್ ಆಫ್ ಸ್ಪೇನ್‌ನ ರೆಡ್ ಹೌಸ್‌ನಲ್ಲಿ ಟ್ರಿನಿಡಾಡ್ ಮತ್ತು ಟೊಬೆಗೊ ಗಣರಾಜ್ಯದ [ಟಿ&ಟಿ] ಪ್ರಧಾನಮಂತ್ರಿ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರ ಜೊತೆ ಮಾತುಕತೆ ನಡೆಸಿದರು. ಇತ್ತೀಚಿನ ಚುನಾವಣೆಗಳಲ್ಲಿ ಜಯಗಳಿಸಿದ ನಂತರ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿ ಶುಭ ಕೋರಿದರು. ಸಾಂಪ್ರದಾಯಿಕವಾಗಿ ಸ್ವಾಗತ ಕೋರಿದ್ದಕ್ಕಾಗಿ ಟ್ರಿನಿಡಾಡ್ ಪ್ರಧಾನಿಗೆ ಧನ್ಯವಾದ ಅರ್ಪಿಸಿದರು.ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 04th, 09:30 pm
ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 09:00 pm
ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.PM Modi conferred with highest national award, the ‘Order of the Republic of Trinidad & Tobago
July 04th, 08:20 pm
PM Modi was conferred Trinidad & Tobago’s highest national honour — The Order of the Republic of Trinidad & Tobago — at a special ceremony in Port of Spain. He dedicated the award to the 1.4 billion Indians and the historic bonds of friendship between the two nations, rooted in shared heritage. PM Modi also reaffirmed his commitment to strengthening bilateral ties.ಟ್ರಿನಿಡಾಡ್ ಮತ್ತು ಟೊಬೆಗೊ ಪ್ರಧಾನಮಂತ್ರಿ ಗೌರವಾನ್ವಿತ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಆಯೋಜಿಸಿದ್ದ ಸಾಂಪ್ರದಾಯಿಕ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಭಾಗಿ
July 04th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬೆಗೊ ಪ್ರಧಾನಿ ಗೌರವಾನ್ವಿತ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಆಯೋಜಿಸಿದ್ದ ಸಾಂಪ್ರದಾಯಿಕ ಭೋಜನಕೂಟದಲ್ಲಿ ಭಾಗವಹಿಸಿದರು. ಟ್ರಿನಿಡಾಡ್ ಮತ್ತು ಟೊಬೆಗೊ ಆಯೋಜಿಸಿದ್ದ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೊಹರಿ ಎಲೆಯ ಮೇಲೆ ಆಹಾರವನ್ನು ಬಡಿಸಲಾಯಿತು, ಇದು ಟ್ರಿನಿಡಾಡ್ ಮತ್ತು ಟೊಬೆಗೊ ಜನರಿಗೆ, ವಿಶೇಷವಾಗಿ ಭಾರತೀಯ ಮೂಲ ಹೊಂದಿರುವವರಿಗೆ ಹೆಚ್ಚಿನ ಸಾಂಸ್ಕೃತಿಕ ಮಹತ್ವದ್ದಾಗಿದೆಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಮಂತ್ರಿಗೆ ರಾಮ ಮಂದಿರದ ಪ್ರತಿರೂಪ ಮತ್ತು ಪವಿತ್ರ ಜಲ ಉಡುಗೊರೆಯಾಗಿ ನೀಡಿದ ಪ್ರಧಾನಮಂತ್ರಿ
July 04th, 08:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಗೌರವಾರ್ಥವಾಗಿ ಆಯೋಜಿಸಲಾದ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಕಮಲ ಪ್ರಸಾದ್-ಬಿಸ್ಸೆಸ್ಸರ್ ಅವರಿಗೆ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ, ಅವರು ಸರಯು ನದಿಯಿಂದ ಮತ್ತು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದ ಪವಿತ್ರ ನೀರನ್ನು ಸಮರ್ಪಿಸಿದರು.ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ
July 04th, 05:56 am
ಈ ಸಂಜೆ ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಪ್ರಧಾನಮಂತ್ರಿ ಕಮಲಾ ಜೀ ಅವರ ಅದ್ಭುತ ಆತಿಥ್ಯ ಮತ್ತು ಕರುಣಾಮಯಿ ಮಾತುಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು
July 04th, 04:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು.ಟ್ರಿನಿಡಾಡ್ ಮತ್ತು ಟೊಬಾಗೊಗೆ ಅಧಿಕೃತ ಭೇಟಿಗಾಗಿ ಪ್ರಧಾನಮಂತ್ರಿ ಅವರು ಪೋರ್ಟ್ ಆಫ್ ಸ್ಪೇನ್ ಗೆ ಆಗಮಿಸಿದರು
July 04th, 02:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜುಲೈ 3-4ರವರೆಗೆ ಟ್ರಿನಿಡಾಡ್ ಮತ್ತು ಟೊಬ್ಯಾಗೊ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಲು ಇಂದು ಪೋರ್ಟ್ ಆಫ್ ಸ್ಪೇನ್ ಗೆ ಆಗಮಿಸಿದರು. 1999ರ ಬಳಿಕ ಭಾರತದ ಪ್ರಧಾನಿಯೊಬ್ಬರು ಟಿ ಮತ್ತು ಟಿಗೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಉಭಯ ದೇಶಗಳ ನಡುವಿನ ನಿಕಟ ಬಾಂಧವ್ಯದ ಸಂಕೇತವಾಗಿ, ಪೋರ್ಟ್ ಆಫ್ ಸ್ಪೇನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ಅವರನ್ನು ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್ ಮತ್ತು ಅವರ ಕ್ಯಾಬಿನೆಟ್ ಸದಸ್ಯರು ಮತ್ತು ಇತರ ಹಲವಾರು ಗಣ್ಯರು ಸ್ವಾಗತಿಸಿದರು. ಪ್ರಧಾನಮಂತ್ರಿಯವರಿಗೆ ಔಪಚಾರಿಕ ಗಾರ್ಡ್ ಆಫ್ ಹಾನರ್ ನೀಡಲಾಯಿತು ಮತ್ತು ವಿಶೇಷ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಸ್ವಾಗತಿಸಲಾಯಿತು.ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
July 02nd, 07:34 am
ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 02-09)
June 27th, 10:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜುಲೈ 02ರಿಂದ 3ರವರೆಗೆ ಘಾನಾಕ್ಕೆ ಭೇಟಿ ನೀಡಲಿದ್ದಾರೆ. ಇದು ಘಾನಾಕ್ಕೆ ಪ್ರಧಾನಮಂತ್ರಿ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತದಿಂದ ಘಾನಾಕ್ಕೆ ಪ್ರಧಾನಮಂತ್ರಿ ಅವರ ಈ ಭೇಟಿ ಮೂರು ದಶಕಗಳ ನಂತರ ನಡೆಯುತ್ತಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಘಾನಾ ಅಧ್ಯಕ್ಷರೊಂದಿಗೆ ಬಲವಾದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಪರಿಶೀಲಿಸಲು ಮತ್ತು ಆರ್ಥಿಕ, ಇಂಧನ ಮತ್ತು ರಕ್ಷಣಾ ಸಹಯೋಗ ಮತ್ತು ಅಭಿವೃದ್ಧಿ ಸಹಕಾರ ಪಾಲುದಾರಿಕೆಯ ಮೂಲಕ ಅದನ್ನು ಹೆಚ್ಚಿಸಲು ಹೆಚ್ಚಿನ ಮಾರ್ಗಗಳ ಬಗ್ಗೆ ಚರ್ಚಿಸಲು ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಆಳಗೊಳಿಸಲು ಮತ್ತು ಇಕೋವಾಸ್ (ಪಶ್ಚಿಮ ಆಫ್ರಿಕಾ ರಾಜ್ಯಗಳ ಆರ್ಥಿಕ ಸಮುದಾಯ) ಮತ್ತು ಆಫ್ರಿಕನ್ ಒಕ್ಕೂಟದೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸಲು ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಚುನಾವಣಾ ಗೆಲುವಿಗಾಗಿ ಶ್ರೀಮತಿ ಕಮಲಾ ಪೆರ್ಸಾದ್ - ಬಿಸ್ಸೆಸರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
April 29th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣಾ ಗೆಲುವಿಗಾಗಿ ಶ್ರೀಮತಿ ಕಮಲಾ ಪೆರ್ಸಾದ್ - ಬಿಸ್ಸೆಸ್ಸರ್ ಅವರನ್ನು ಅಭಿನಂದಿಸಿದ್ದಾರೆ. ಭಾರತ ಹಾಗೂ ಟ್ರಿನಿಡಾಡ್ ಮತ್ತು ಟೊಬಾಗೋ ನಡುವಿನ ಐತಿಹಾಸಿಕ ನಿಕಟ ಮತ್ತು ಕೌಟುಂಬಿಕ ಬಾಂಧವ್ಯಗಳ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.