India – France Joint Statement
February 18th, 08:10 am
At the invitation of Hon’ble Prime Minister of India, Shri Narendra Modi, President of the French Republic H.E. Mr. Emmanuel Macron paid an official visit to India from 17 to 19 February 2026 and participated in the Artificial Intelligence Impact Summit 2026. During the visit, the two leaders held bilateral talks and jointly inaugurated the 2026 India-France Year of Innovation in Mumbai on 17 February. This is President Macron’s 4th visit to India and it follows Prime Minister Modi’s visit to France in February 2025.ಪ್ರಧಾನಮಂತ್ರಿ ಅವರಿಂದ ಶುಭಂ ದ್ವಿವೇದಿ ಅವರ ಕುಟುಂಬ ಸದಸ್ಯರ ಭೇಟಿ
May 30th, 09:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಶುಭಂ ದ್ವಿವೇದಿ ಅವರ ಕುಟುಂಬ ಸದಸ್ಯರನ್ನು ಕಾನ್ಪುರದಲ್ಲಿ ಇಂದು ಭೇಟಿಯಾದರು. ಭಯೋತ್ಪಾದನೆ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿದ್ದಕ್ಕಾಗಿ ದ್ವಿವೇದಿ ಕುಟುಂಬದವರು ನಮ್ಮ ಧೀರ ಸೇನೆಗೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಮೇ 29 ಮತ್ತು 30 ರಂದು ಪ್ರಧಾನಮಂತ್ರಿಗಳು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ
May 28th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಉನ್ನತೀಕರಣಕ್ಕೆ ರಾಷ್ಟ್ರೀಯ ಯೋಜನೆ ಮತ್ತು ಕೌಶಲ್ಯಕ್ಕಾಗಿ ಐದು ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ಸಂಪುಟದ ಅನುಮೋದನೆ
May 07th, 02:07 pm
2024-25 ಮತ್ತು 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿರುವ 60,000 ಕೋಟಿ ರೂ.ಗಳ (ಕೇಂದ್ರ ಪಾಲು: 30,000 ಕೋಟಿ ರೂ., ರಾಜ್ಯ ಪಾಲು 20,000 ಕೋಟಿ ರೂ. ಮತ್ತು ಕೈಗಾರಿಕಾ ಪಾಲು 10,000 ಕೋಟಿ ರೂ.ಗಳ) ವೆಚ್ಚದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.) ಮೇಲ್ದರ್ಜೆಗೆ ಏರಿಸುವ ಮತ್ತು ಕೌಶಲ್ಯಕ್ಕಾಗಿ ಐದು (5) ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನು (ಎನ್‌ಸಿಒಇ) ಸ್ಥಾಪಿಸುವ ಯೋಜನೆಯನ್ನು ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಜಾರಿಗೆ ತರಲಾಗುವುದು. ಇದರಲ್ಲಿ ಕೇಂದ್ರದ ಪಾಲನ್ನು 50% ವರೆಗೆ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಮತ್ತು ವಿಶ್ವಬ್ಯಾಂಕ್ ಗಳು ಸಮಾನವಾಗಿ ಭರಿಸಲಿವೆ.ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ
April 29th, 11:01 am
ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆಂಟ್ ಸಿಸ್ಟಮ್ಸ್, ಹಾಗೂ ಬಯೋಸೈನ್ಸಸ್, ಬಯೋಟೆಕ್ನಾಲಜಿ, ಆರೋಗ್ಯ ಮತ್ತು ವೈದ್ಯಕೀಯ ವಿಭಾಗಗಳಲ್ಲಿ ಸೂಪರ್ ಹಬ್ಗಳ ಆರಂಭಕ್ಕೆ ಚಾಲನೆ ದೊರೆತಿದೆ. ಇಂದು ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್ ನ ಉದ್ಘಾಟನೆಯೂ ಆಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸಲು ಪ್ರತಿಜ್ಞೆಯನ್ನು ಸಹ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮಕ್ಕಾಗಿ ವಾಧ್ವಾನಿ ಫೌಂಡೇಶನ್, ನಮ್ಮ ಐಐಟಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ, ನನ್ನ ಸ್ನೇಹಿತರಾದ ರೊಮೇಶ್ ವಾಧ್ವಾನಿ ಜಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಸಮರ್ಪಣೆ ಮತ್ತು ಪೂರ್ವಭಾವಿ ಪ್ರಯತ್ನಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಒಟ್ಟಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು
April 29th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ (YUGM Innovation Conclave) ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಸರ್ಕಾರಿ ಅಧಿಕಾರಿಗಳು, ಶೈಕ್ಷಣಿಕ ವಲಯದವರು ಹಾಗೂ ವಿಜ್ಞಾನ ಮತ್ತು ಸಂಶೋಧನಾ ವೃತ್ತಿಪರರ ಈ ಮಹತ್ವದ ಸಮಾಗಮವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಎಲ್ಲಾ ಪಾಲುದಾರರ ಈ ಸಂಗಮವೇ YUGM ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ವಿಕಸಿತ ಭಾರತಕ್ಕಾಗಿ ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುವ ಗುರಿ ಹೊಂದಿರುವ ಸಹಯೋಗವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೂಲಕ, ಭಾರತದ ನಾವೀನ್ಯತಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಡೀಪ್-ಟೆಕ್ನಲ್ಲಿ (Deep-tech) ಅದರ ಪಾತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು AI, ಇಂಟೆಲಿಜೆಂಟ್ ಸಿಸ್ಟಮ್ ಹಾಗೂ ಜೈವಿಕ ವಿಜ್ಞಾನ (Biosciences), ಜೈವಿಕ ತಂತ್ರಜ್ಞಾನ (Biotechnology), ಆರೋಗ್ಯ (Health) ಮತ್ತು ವೈದ್ಯಕೀಯ (Medicine) ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ ಸೂಪರ್ ಹಬ್ಗಳ (Super hubs) ಉದ್ಘಾಟನೆಯನ್ನು ಪ್ರಸ್ತಾಪಿಸಿದರು. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ (National Research Foundation) ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸುವ 'ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್' (Wadhwani Innovation Network) ನ ಪ್ರಾರಂಭದ ಬಗ್ಗೆಯೂ ಅವರು ಉಲ್ಲೇಖಿಸಿದರು. ಪ್ರಧಾನಿಯವರು ವಾಧ್ವಾನಿ ಫೌಂಡೇಶನ್, ಐಐಟಿಗಳು ಮತ್ತು ಈ ಉಪಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು. 1 ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಹಯೋಗದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರೀ ರೊಮೇಶ್ ವಾಧ್ವಾನಿಯವರ ಸಮರ್ಪಣೆ ಮತ್ತು ಸಕ್ರಿಯ ಪಾತ್ರಕ್ಕಾಗಿ ಅವರು ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಏಪ್ರಿಲ್ 29ರಂದು ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
April 28th, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 29ರಂದು ಬೆಳಗ್ಗೆ 11ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಕ್ಯಾಬಿನೆಟ್ 8 ರಾಷ್ಟ್ರೀಯ ಹೈಸ್ಪೀಡ್ ರೋಡ್ ಕಾರಿಡಾರ್ ಯೋಜನೆಗಳಿಗೆ ಒಟ್ಟು ಬಂಡವಾಳ ವೆಚ್ಚ ರೂ. 50,655 ಕೋಟಿ
August 02nd, 08:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 936 ಕಿಮೀ ಉದ್ದದ 8 ಪ್ರಮುಖ ರಾಷ್ಟ್ರೀಯ ಹೈಸ್ಪೀಡ್ ಕಾರಿಡಾರ್ ಯೋಜನೆಗಳ ಅಭಿವೃದ್ಧಿಗೆ ಅನುಮೋದನೆ ನೀಡಿದೆ. ದೇಶಾದ್ಯಂತ 50,655 ಕೋಟಿ ರೂ. ಈ 8 ಯೋಜನೆಗಳ ಅನುಷ್ಠಾನದಿಂದ ಅಂದಾಜು 4.42 ಕೋಟಿ ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ.ಬೃಹತ್ ರೋಡ್ ಶೋನಲ್ಲಿ ಪ್ರಧಾನಿ ಮೋದಿಗೆ ಬೆಂಬಲ ನೀಡಿದ ಕಾನ್ಪುರ!
May 04th, 08:32 pm
ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದರು. ಪ್ರಧಾನಿಯವರನ್ನು ಅಭಿನಂದಿಸಲು ಮತ್ತು ಭಾರತೀಯ ಜನತಾ ಪಕ್ಷವನ್ನು ಹುರಿದುಂಬಿಸಲು ನೂರಾರು ಜನರು ಜಮಾಯಿಸಿದರು. ಜನರು ಉತ್ಸಾಹದಿಂದ 'ಮೋದಿ ಮೋದಿ,' 'ಭಾರತ್ ಮಾತಾ ಕಿ ಜೈ' ಮತ್ತು 'ಫಿರ್ ಏಕ್ ಬಾರ್ ಮೋದಿ ಸರ್ಕಾರ್' ಎಂದು ಘೋಷಣೆ ಕೂಗಿದರು. ಪ್ರಧಾನಿಯವರ ಬೆಂಗಾವಲು ಪಡೆ ನಗರದ ಮೂಲಕ ಸಾಗುತ್ತಿದ್ದಂತೆ ಬೆಂಬಲಿಗರು ಹೂವಿನ ದಳಗಳನ್ನು ಸುರಿಸಿದಾಗ ವಾತಾವರಣವು ವಿದ್ಯುಕ್ತವಾಗಿತ್ತು.ಡಿಸೆಂಬರ್ 30 ರಂದು ಪ್ರಧಾನಿ ಅಯೋಧ್ಯೆಗೆ ಭೇಟಿ
December 28th, 05:33 pm
ಬೆಳಿಗ್ಗೆ 11.15ರ ಸುಮಾರಿಗೆ ಪ್ರಧಾನ ಮಂತ್ರಿ ಅವರು ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ, ಹೊಸ ಅಮೃತ್ ಭಾರತ್ ರೈಲುಗಳು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರುನಿಶಾನೆ ತೋರಲಿದ್ದಾರೆ. ಜತೆಗೆ ಅವರು ಇನ್ನೂ ಹಲವಾರು ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12.15ರ ಸುಮಾರಿಗೆ ಪ್ರಧಾನಿ ಅವರು ಹೊಸದಾಗಿ ನಿರ್ಮಿಸಲಾದ ಅಯೋಧ್ಯೆ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ರಧಾನಿ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 15,700 ಕೋಟಿ ರೂ.ಗಿಂತ ಹೆಚ್ಚಿನ ಬಹು ಅಭಿವೃದ್ಧಿ ಯೋಜನೆಗಳ ಅಲ್ಲಿ ಅವರು ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಇವುಗಳಲ್ಲಿ ಅಯೋಧ್ಯೆ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗಾಗಿ ಸುಮಾರು 11,100 ಕೋಟಿ ರೂಪಾಯಿ. ಮೊತ್ತದ ಯೋಜನೆಗಳು ಮತ್ತು ಉತ್ತರ ಪ್ರದೇಶದಾದ್ಯಂತ ಇತರ ಯೋಜನೆಗಳಿಗೆ ಸಂಬಂಧಿಸಿದ ಸುಮಾರು 4,600 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳು ಸೇರಿವೆ.ಕಾನ್ಪುರ ವಿಮಾನನಿಲ್ದಾಣದಲ್ಲಿ ನೂತನ ವಿಸ್ತರಣಾ ಕಾರ್ಯದ ಉದ್ಘಾಟನೆಗೆ ಪ್ರಧಾನ ಮಂತ್ರಿ ಅಭಿನಂದನೆ
May 26th, 09:36 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕನ್ಪುರ ವಿಮಾನ ನಿಲ್ದಾಣದ ನೂತನ ವಿಸ್ತರಣಾ ಕ್ರಮವು ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸುವ ಜತೆಗೆ ವಿಸ್ತರಣೆ ಅವಕಾಶಗಳನ್ನು ಒದಗಿಸುತ್ತದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿಯಂದು ಪ್ರಧಾನ ಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಅವತರಣಿಕೆ
July 25th, 04:31 pm
ದಿವಂಗತ ಹರ್ಮೋಹನ್ ಸಿಂಗ್ ಯಾದವ್ ಅವರ ಪುಣ್ಯತಿಥಿಯಂದು ಅವರಿಗೆ ನಾನು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಈ ಕಾರ್ಯಕ್ರಮಕ್ಕೆ ನನ್ನನ್ನು ತುಂಬಾ ಪ್ರೀತಿಯಿಂದ ಆಹ್ವಾನಿಸಿದ್ದಕ್ಕಾಗಿ ನಾನು ಸುಖರಾಮ್ ಜೀ ಅವರಿಗೆ ಆಭಾರಿಯಾಗಿದ್ದೇನೆ. ಇದಲ್ಲದೆ, ನಿಮ್ಮೆಲ್ಲರ ನಡುವೆ ಇರುವುದಕ್ಕಾಗಿ ಈ ಕಾರ್ಯಕ್ರಮಕ್ಕಾಗಿ ಕಾನ್ಪುರಕ್ಕೆ ಬರಬೇಕೆಂಬುದು ನನ್ನ ಬಯಕೆಯಾಗಿತ್ತು. ಆದರೆ ಇಂದು, ನಮ್ಮ ದೇಶದ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದ ಒಂದು ದೊಡ್ಡ ಕಾರ್ಯಕ್ರಮ ನಡೆಯುವ ಸಂದರ್ಭವಾಗಿದೆ. ಇಂದು ನಮ್ಮ ಹೊಸ ರಾಷ್ಟ್ರಪತಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮಾಜದ ಮಹಿಳಾ ರಾಷ್ಟ್ರಪತಿ ಅವರು ದೇಶದ ನಾಯಕತ್ವವನ್ನು ವಹಿಸುತ್ತಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವದ ಶಕ್ತಿ ಮತ್ತು ಒಳಗೊಳ್ಳುವಿಕೆಯ ಜೀವಂತ ಉದಾಹರಣೆಯಾಗಿದೆ. ಈ ಸಂದರ್ಭದಲ್ಲಿ ಇಂದು ದಿಲ್ಲಿಯಲ್ಲಿ ವಿವಿಧ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾಂವಿಧಾನಿಕ ಬಾಧ್ಯತೆಗಳಿಗಾಗಿ ನಾನು ದೆಹಲಿಯಲ್ಲಿ ಇರುವುದು ಅನಿವಾರ್ಯ ಮತ್ತು ಅಗತ್ಯವೂ ಆಗಿದೆ. ಆದ್ದರಿಂದ, ನಾನು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಿಮ್ಮೊಂದಿಗೆ ಸೇರುತ್ತಿದ್ದೇನೆ.ದಿವಂಗತ ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
July 25th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಸಂಸದ, ವಿಧಾನ ಪರಿಷತ್ ಸದಸ್ಯ, ಶಾಸಕಮತ್ತು ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಹಾಗೂ ಯಾದವ ಸಮುದಾಯದ ಅತ್ಯಂತ ಪ್ರಭಾವೀ ವ್ಯಕ್ತಿ ಮತ್ತು ನಾಯಕರಾದ ದಿವಂಗತ ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು.ಪ್ರಧಾನಮಂತ್ರಿಯವರು ಜೂನ್ 3 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ
June 02nd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೂನ್ 3, 2022 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು 11 ಗಂಟೆಗೆ, ಪ್ರಧಾನಮಂತ್ರಿಯವರು ಲಕ್ನೋದ ಇಂದಿರಾಗಾಂಧಿ ಪ್ರತಿಷ್ಠಾನವನ್ನು ತಲುಪಲಿದ್ದಾರೆ, ಅಲ್ಲಿ ಅವರು ಯುಪಿ ಹೂಡಿಕೆದಾರರ ಶೃಂಗಸಭೆಯ ಗುದ್ದಲಿ ಪೂಜೆಯ ಸಮಾರಂಭ @3.0 ಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ಕಾನ್ಪುರದ ಪರೌಂಕ್ ಗ್ರಾಮವನ್ನು ತಲುಪುತ್ತಾರೆ, ಅಲ್ಲಿ ಅವರು ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರೊಂದಿಗೆ ಪಾತ್ರಿ ಮಾತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ ಅವರು ಡಾ. ಬಿ ಆರ್ ಅಂಬೇಡ್ಕರ್ ಭವನಕ್ಕೆ, ನಂತರ ಮಧ್ಯಾಹ್ನ 2:15 ಕ್ಕೆ ಮಿಲನ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಕೇಂದ್ರವು ಗೌರವಾನ್ವಿತ ರಾಷ್ಟ್ರಪತಿಯವರ ಪೂರ್ವಜರ ಮನೆಯಾಗಿದೆ, ಇದನ್ನು ಸಾರ್ವಜನಿಕ ಬಳಕೆಗಾಗಿ ದಾನ ಮಾಡಲಾಗಿದೆ ಮತ್ತು ಸಮುದಾಯ ಕೇಂದ್ರವಾಗಿ (ಮಿಲನ್ ಕೇಂದ್ರ) ಪರಿವರ್ತಿಸಲಾಗಿದೆ. ನಂತರ, ಅವರು ಮಧ್ಯಾಹ್ನ 2:30 ಕ್ಕೆ ಪರೌಂಖ್ ಗ್ರಾಮದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ.ಉತ್ತರ ಪ್ರದೇಶದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಪ್ರಧಾನಿ ಮೋದಿ
February 14th, 12:10 pm
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಕಾನ್ಪುರ್ ದೇಹತ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಜನರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ, “ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಗೋವಾದಲ್ಲಿ ಇಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಎಲ್ಲಾ ಮತದಾರರು, ವಿಶೇಷವಾಗಿ ಮೊದಲ ಬಾರಿಗೆ ಮತದಾರರು ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸಲು ಬರುವಂತೆ ನಾನು ಒತ್ತಾಯಿಸುತ್ತೇನೆ.ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 14th, 12:05 pm
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಕಾನ್ಪುರ್ ದೇಹತ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಜನರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ, “ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಗೋವಾದಲ್ಲಿ ಇಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಎಲ್ಲಾ ಮತದಾರರು, ವಿಶೇಷವಾಗಿ ಮೊದಲ ಬಾರಿಗೆ ಮತದಾರರು ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸಲು ಬರುವಂತೆ ನಾನು ಒತ್ತಾಯಿಸುತ್ತೇನೆ.ಕಾನ್ಪುರ ಮೆಟ್ರೋ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು, ಮುಖ್ಯಮಂತ್ರಿ ಯೋಗಿ ಅವರೊಂದಿಗೆ ಸವಾರಿ ಮಾಡಿದರು
December 28th, 02:11 pm
ಕಾನ್ಪುರ ಮೆಟ್ರೋ ರೈಲು ಯೋಜನೆಯ ಪೂರ್ಣಗೊಂಡ ಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಹೊಸದಾಗಿ ಆರಂಭಿಸಲಾದ ಸೇವೆಯ ಉದ್ಘಾಟನೆ ಮತ್ತು ಪರಿಶೀಲನೆಯ ನಂತರ, ಪ್ರಧಾನಿ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮೆಟ್ರೋದಲ್ಲಿ ಸವಾರಿ ಮಾಡಿದರು.Double engine government knows how to set big goals and achieve them: PM Modi
December 28th, 01:49 pm
PM Narendra Modi inaugurated Kanpur Metro Rail Project and Bina-Panki Multiproduct Pipeline Project. Commenting on the work culture of adhering to deadlines, the Prime Minister said that double engine government works day and night to complete the initiatives for which the foundation stones have been laid.ಕಾನ್ಪುರ ಮೆಟ್ರೋ ರೈಲು ಯೋಜನೆ ಪ್ರಧಾನ ಮಂತ್ರಿ ಅವರಿಂದ ಉದ್ಘಾಟನೆ
December 28th, 01:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕಾನ್ಪುರ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು. ಅವರು ಕಾನ್ಪುರ ಮೆಟ್ರೋ ರೈಲ್ ಯೋಜನೆಯನ್ನು ಪರಿಶೀಲಿಸಿದರು ಮತ್ತು ಐ.ಐ.ಟಿ. ಮೆಟ್ರೋ ನಿಲ್ದಾಣದಿಂದ ಗೀತಾ ನಗರಕ್ಕೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಅವರು ಬಿನಾ-ಪಾನಕಿ ಬಹು ಉತ್ಪಾದನಾ ಕೊಳವೆ ಮಾರ್ಗ ಯೋಜನೆಯನ್ನೂ ಉದ್ಘಾಟಿಸಿದರು. ಈ ಕೊಳವೆ ಮಾರ್ಗ ಮಧ್ಯಪ್ರದೇಶದ ಬಿನಾ ತೈಲ ಶುದ್ದೀಕರಣಾಗಾರದಿಂದ ಕಾನ್ಪುರದ ಪಾನಕಿವರೆಗೆ ವಿಸ್ತರಿಸಲ್ಪಟ್ಟಿದೆ. ಮತ್ತು ಅದು ಈ ವಲಯಕ್ಕೆ ಬಿನಾ ತೈಲ ಶುದ್ದೀಕರಣಾಗಾರದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಪಡೆಯಲು ಸಹಾಯ ಮಾಡಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ, ಕೇಂದ್ರ ಸಚಿವರಾದ ಶ್ರೀ ಹರದೀಪ್ ಪುರಿ ಈ ಸಂದರ್ಭದಲ್ಲಿ ಹಾಜರಿದ್ದರು.Embrace challenges over comforts: PM Modi at IIT, Kanpur
December 28th, 11:02 am
Prime Minister Narendra Modi attended the 54th Convocation Ceremony of IIT Kanpur. The PM urged the students to become impatient for a self-reliant India. He said, Self-reliant India is the basic form of complete freedom, where we will not depend on anyone.