ಉತ್ತರ ಪ್ರದೇಶದಲ್ಲಿ ಒಟ್ಟು ₹7,145.14 ಕೋಟಿ ಬಂಡವಾಳ ವೆಚ್ಚದಲ್ಲಿ, ಬಿಒಟಿ (ಟೋಲ್) ಮಾದರಿಯಲ್ಲಿ ಎನ್ ಎಚ್ -34 ರ 4 / 6 ಪಥಗಳ ನಿಯಂತ್ರಿತ ಪ್ರವೇಶದ ಕಾನ್ಪುರ-ಕಬ್ರಾಯ್ ವಿಭಾಗದ ನಿರ್ಮಾಣಕ್ಕೆ ಸಚಿವ ಸಂಪುಟದ ಅನುಮೋದನೆ

July 01st, 03:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ರಾಷ್ಟ್ರೀಯ ಹೆದ್ದಾರಿಗಳ (ಒ) ಕಾರ್ಯಕ್ರಮದ ಅಡಿಯಲ್ಲಿ ಭೂಪಾಲ್-ಕಾನ್ಪುರ ಆರ್ಥಿಕ ಕಾರಿಡಾರ್ನ ಪ್ರಮುಖ ಭಾಗವಾಗಿರುವ, 117.7 ಕಿ.ಮೀ ಉದ್ದದ ಕಾನ್ಪುರ-ಕಬ್ರಾಯ್ ನಿಯಂತ್ರಿತ ಪ್ರವೇಶದ ಗ್ರೀನ್ ಫೀಲ್ಡ್ ಹೆದ್ದಾರಿಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಇದು ನಾಲ್ಕು ಪಥಗಳ ನಿಯಂತ್ರಿತ ಪ್ರವೇಶದ ಕಾರಿಡಾರ್ ಆಗಿದ್ದು, ಭವಿಷ್ಯದಲ್ಲಿ ಆರು ಪಥಗಳಾಗಿ ವಿಸ್ತರಿಸಲು ಪೂರಕವಾದ ರಚನೆಗಳೊಂದಿಗೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟು ಬಂಡವಾಳ ಅಂದಾಜು ₹7,145.14 ಕೋಟಿ ವೆಚ್ಚದ ಈ ಯೋಜನೆಯನ್ನು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ ಎಚ್ ಎ ಐ) ಬಿಒಟಿ (ಟೋಲ್) ಮಾದರಿಯಲ್ಲಿ ಅನುಷ್ಠಾನಗೊಳಿಸಲಿದೆ. ಜೊತೆಗೆ ಎನ್ ಎಚ್-34 ರ ಅಸ್ತಿತ್ವದಲ್ಲಿರುವ ಕಾನ್ಪುರ-ಕಬ್ರಾಯ್ ವಿಭಾಗದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನೂ ಸಹ ಇದು ಒಳಗೊಂಡಿರುತ್ತದೆ.

ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

May 30th, 03:29 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ಶ್ರೀ ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವರೇ, ಸಂಸದರೇ, ಶಾಸಕರೇ, ಮತ್ತು ಕಾನ್ಪುರದಿಂದ ಇಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು 47,600 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ

May 30th, 03:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಸುಮಾರು 47,600 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ 2025ರ ಏಪ್ರಿಲ್ 24 ರಂದು ಆರಂಭದಲ್ಲಿ ನಿಗದಿಯಾಗಿದ್ದ ಕಾನ್ಪುರ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು ಎಂದು ತಿಳಿಸಿದರು. ಈ ಅನಾಗರಿಕ ಕೃತ್ಯಕ್ಕೆ ಬಲಿಯಾದ ಕಾನ್ಪುರದ ಪುತ್ರ ಶ್ರೀ ಶುಭಂ ದ್ವಿವೇದಿಗೆ ಅವರು ಗೌರವ ಸಲ್ಲಿಸಿದರು. ದೇಶಾದ್ಯಂತ ಸಹೋದರಿಯರು ಮತ್ತು ಹೆಣ್ಣುಮಕ್ಕಳ ನೋವು, ಸಂಕಟ, ಕೋಪ ಮತ್ತು ಸಾಮೂಹಿಕ ಯಾತನೆಯನ್ನು ತಾವು ಆಳವಾಗಿ ಅನುಭವಿಸಿರುವುದಾಗಿ ಪ್ರಧಾನಿ ಹೇಳಿದರು. ಆಪರೇಷನ್ ಸಿಂದೂರ್ ನಡೆದಾಗ ಈ ಸಾಮೂಹಿಕ ಕೋಪವು ವಿಶ್ವಾದ್ಯಂತ ಕಂಡುಬಂದಿತು ಎಂದು ಅವರು ಹೇಳಿದರು.