PM to visit Andhra Pradesh and Karnataka on 1 August
July 31st, 09:56 am
PM Modi will visit Andhra Pradesh and Karnataka on 1 August. In Andhra Pradesh, he will inaugurate the Alluri Sitarama Raju International Airport and launch development projects worth over ₹17,900 crore. He will also lay the foundation stone for Andhra Pradesh's first semiconductor manufacturing facility. During his visit to Karnataka, he will inaugurate the Swami Vivekananda Cultural Youth Centre - Viveka Smaraka in Mysuru.ಕರ್ನಾಟಕ ಮತ್ತು ಆಂಧ್ರಪ್ರದೇಶದಾದ್ಯಂತ ಮೂರು ಜಿಲ್ಲೆಗಳನ್ನು ಒಳಗೊಂಡಂತೆ ಒಂದು ಬಹು-ಟ್ರ್ಯಾಕಿಂಗ್ ಯೋಜನೆಗೆ ಸಂಪುಟ ಅನುಮೋದನೆ, ಭಾರತೀಯ ರೈಲ್ವೆಯ ಪ್ರಸ್ತುತ ಜಾಲ ಸುಮಾರು 46 ಕಿ.ಮೀ.ಗಳಷ್ಟು ವಿಸ್ತರಣೆ
July 24th, 04:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿರುವ ಬಳ್ಳಾರಿ - ಗುಂತಕಲ್ ವಿಭಾಗದ 3 ನೇ ಮತ್ತು 4 ನೇ ರೈಲು ಮಾರ್ಗಕ್ಕೆ ಸುಮಾರು ₹1,264 ಕೋಟಿ ಒಟ್ಟು ವೆಚ್ಚದಲ್ಲಿ ಅನುಮೋದನೆ ನೀಡಿದೆ.ಕರ್ನಾಟಕದ ಕಾರವಾರದಲ್ಲಿ ಸಂಭವಿಸಿದ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
July 09th, 02:17 pm
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 06:15 am
ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.Prime Minister addresses Australia-India CEOs Forum and Economic Roadmap Business event
July 09th, 06:00 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.ಬೆಂಗಳೂರಿನಲ್ಲಿ ನಡೆದ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
July 02nd, 04:32 pm
ಬೆಂಗಳೂರಿನ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಅವಘಡದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕರ್ನಾಟಕದ ಮುಖ್ಯಮಂತ್ರಿ
June 11th, 06:06 pm
ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 03rd, 06:42 pm
ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಅಧಿಕಾರಾವಧಿಗೆ ಶುಭ ಕೋರಿದ್ದಾರೆ.ಕರ್ನಾಟಕದ ಕಾರವಾರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
May 24th, 06:51 pm
ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.ಹೈದರಾಬಾದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
May 10th, 03:45 pm
ಸೈಬರಾಬಾದ್‌ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್‌ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 10th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್‌ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಕಾಂಗ್ರೆಸ್ ಅಧಿಕಾರದ ಪುಸ್ತಕದಲ್ಲಿ ಆಡಳಿತದ ಅಧ್ಯಾಯವಿಲ್ಲ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ
May 10th, 09:46 am
ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.ಕರ್ನಾಟಕದ ಬೆಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 10th, 09:45 am
ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.ಪ್ರಧಾನಮಂತ್ರಿ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ
May 09th, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನ ಮಂತ್ರಿ ಬೆಳಿಗ್ಗೆ ಸುಮಾರು 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಪ್ರಧಾನಮಂತ್ರಿ ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆಗೆ ಸುಮಾರು 9,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3:45 ರ ಸುಮಾರಿಗೆ ಪ್ರಧಾನಮಂತ್ರಿ ಹೈದರಾಬಾದ್‌ನಲ್ಲಿರುವ ಸಿಂಧು ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ; ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆ
May 05th, 07:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ರೈಲ್ವೆ ಸಚಿವಾಲಯದ ಸುಮಾರು 23,437 ಕೋಟಿ ರೂ.ಗಳ ಒಟ್ಟು ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
April 29th, 11:22 pm
ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರದೃಷ್ಟಕರ ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ
April 26th, 11:30 am
ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.ಪ್ರಧಾನಮಂತ್ರಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ್ದು, ಈ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
April 15th, 05:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದಿನ ತಮ್ಮ ಕರ್ನಾಟಕ ತಮ್ಮ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.ಕರ್ನಾಟಕದ ಮಂಡ್ಯದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
April 15th, 11:10 am
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ, ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಹೆಚ್.ಡಿ. ದೇವೇಗೌಡ ಅವರೇ, ರಾಜ್ಯದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರೇ, ಪರಮಪೂಜ್ಯ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರೇ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೇ, ಶೋಭಾ ಕರಂದ್ಲಾಜೆ ಅವರೇ, ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರೇ, ರಾಜ್ಯದ ಸಚಿವರಾದ ಎನ್. ಚಲುವರಾಯಸ್ವಾಮಿ ಅವರೇ, ಉಪಸ್ಥಿತರಿರುವ ಎಲ್ಲಾ ಪೂಜ್ಯ ಸಂತರುಗಳೇ, ಗಣ್ಯ ವ್ಯಕ್ತಿಗಳೇ ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ
April 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಗೆ ಸಾಕ್ಷಿಯಾಗಲು ಮತ್ತು ಉನ್ನತ ಶ್ರೇಣಿಯ ಸಂತರೊಂದಿಗೆ ಸಂವಾದ ನಡೆಸಲು ಸಿಕ್ಕ ಅವಕಾಶಕ್ಕಾಗಿ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆದದ್ದು ಮತ್ತು ಭಕ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದು ಪದಗಳಿಗೆ ನಿಲುಕದ ಪ್ರಬಲ ಭಾವನೆಗಳನ್ನು ಜಾಗೃತಗೊಳಿಸಿದೆ ಎಂದು ಅವರು ತಿಳಿಸಿದರು. ಈ ದೈವಿಕ ಅನುಭವಗಳು ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚೊತ್ತಿರುತ್ತವೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.