Seva Teerth and Kartavya Bhavan have been built to fulfil the aspirations of the people of India: PM Modi
February 13th, 06:55 pm
In his address while inaugurating Seva Teerth and Kartavya Bhavan-1 & 2, PM Modi remarked that the day has become a witness to a new beginning in India’s development journey. He highlighted that Seva Teerth and Kartavya Bhavan have been built to fulfill the aspirations of the people of India. The PM emphasized that every policy and decision made here must be inspired by the continuous spirit of service towards a developed India by 2047.PM Modi addresses the inaugural event of Seva Teerth and Kartavya Bhavan-1 & 2 in New Delhi
February 13th, 06:30 pm
In his address while inaugurating Seva Teerth and Kartavya Bhavan-1 & 2, PM Modi remarked that the day has become a witness to a new beginning in India’s development journey. He highlighted that Seva Teerth and Kartavya Bhavan have been built to fulfill the aspirations of the people of India. The PM emphasized that every policy and decision made here must be inspired by the continuous spirit of service towards a developed India by 2047.ರಾಷ್ಟ್ರ ಗರಿಮೆಯಿಂದ ಕೂಡಿದ ಉತ್ಸಾಹಭರಿತ ಗಣರಾಜ್ಯೋತ್ಸವ ಆಚರಣೆಗೆ ಪ್ರಧಾನಮಂತ್ರಿ ಮೆಚ್ಚುಗೆ
January 26th, 04:50 pm
ಕರ್ತವ್ಯ ಪಥದಲ್ಲಿ ನಡೆದ ಭವ್ಯ ಮೆರವಣಿಯು ಭಾರತದ ಪ್ರಜಾಪ್ರಭುತ್ವದ ಶಕ್ತಿ, ಪರಂಪರೆಯ ಶ್ರೀಮಂತಿಕೆ ಮತ್ತು ದೇಶವನ್ನು ಒಗ್ಗೂಡಿಸಿರುವ ಏಕತೆಯನ್ನು ಪ್ರದರ್ಶಿಸಿತು ಎಂದು ಅವರು ಒತ್ತಿ ಹೇಳಿದ್ದಾರೆ. ಕಾರ್ಯಕ್ರಮದ ನೋಟಗಳನ್ನು ಹಂಚಿಕೊಳ್ಳುತ್ತಾ ಅವರು, ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ತವ್ಯ ಪಥವು ರಾಷ್ಟ್ರೀಯ ಹೆಮ್ಮೆಯ ಶಕ್ತಿಶಾಲಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು ಎಂದಿದ್ದಾರೆ.ಚಿತ್ರಗಳಲ್ಲಿ: ನವದೆಹಲಿಯ ಕರ್ತವ್ಯ ಪಥದಲ್ಲಿ 77 ನೇ ಗಣರಾಜ್ಯೋತ್ಸವ
January 26th, 08:12 am
ಕರ್ತವ್ಯ ಪಥದಲ್ಲಿ ನಡೆದ 77 ನೇ ಗಣರಾಜ್ಯೋತ್ಸವ ಆಚರಣೆಯು ಭಾರತದ ಏಕತೆ, ಶಕ್ತಿ ಮತ್ತು ಪರಂಪರೆಯನ್ನು ಪ್ರದರ್ಶಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸಮರ್ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಮೂಲಕ ದಿನವನ್ನು ಪ್ರಾರಂಭಿಸಿದರು ಮತ್ತು ದೇಶದ ಧೈರ್ಯಶಾಲಿಗಳಿಗೆ ಕೃತಜ್ಞತೆಯನ್ನು ಪುನರುಚ್ಚರಿಸಿದರು.Ending TMC’s Maha Jungle Raj and bringing BJP’s good governance is essential: PM Modi in Singur, West Bengal
January 18th, 03:35 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”PM Modi addresses a massive public rally in Singur, Hooghly, West Bengal
January 18th, 03:32 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ನವದೆಹಲಿಯಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
August 11th, 11:00 am
ಶ್ರೀ ಓಂ ಬಿರ್ಲಾ ಜೀ, ಮನೋಹರ್ ಲಾಲ್ ಜೀ, ಕಿರಣ್ ರಿಜಿಜು ಜೀ, ಮಹೇಶ್ ಶರ್ಮಾ ಜೀ, ಎಲ್ಲಗೌರವಾನ್ವಿತ ಸಂಸತ್ ಸದಸ್ಯರು, ಲೋಕಸಭೆಯ ಪ್ರಧಾನ ಕಾರ್ಯದರ್ಶಿ, ಮಹಿಳೆಯರೇ ಮತ್ತು ಮಹನೀಯರೇ!ನವದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
August 11th, 10:30 am
ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ 184 ಟೈಪ್-VII ಬಹುಮಹಡಿ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕರ್ತವ್ಯ ಪಥದಲ್ಲಿರುವ ಕರ್ತವ್ಯ ಭವನ ಎಂದು ಕರೆಯಲಾಗುವ ಸಾಮಾನ್ಯ ಕೇಂದ್ರ ಸಚಿವಾಲಯವನ್ನು ಇತ್ತೀಚೆಗೆ ಉದ್ಘಾಟಿಸಿದೆ ಮತ್ತು ಇಂದು ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಉದ್ಘಾಟಿಸುವ ಅವಕಾಶ ದೊರೆತಿದೆ ಎಂದು ಹೇಳಿದರು. ಭಾರತದ ನಾಲ್ಕು ಮಹಾ ನದಿಗಳಾದ ಕೃಷ್ಣಾ, ಗೋದಾವರಿ, ಕೋಸಿ ಮತ್ತು ಹೂಗ್ಲಿ ಹೆಸರುಗಳನ್ನು ಸಮುಚ್ಚಯದ ನಾಲ್ಕು ಗೋಪುರಗಳಿಗೆ ಇಡಲಾಗಿದೆ. ಲಕ್ಷಾಂತರ ಜನರಿಗೆ ಬದುಕು ನೀಡುವ ಈ ನದಿಗಳು ಈಗ ಸಾರ್ವಜನಿಕ ಪ್ರತಿನಿಧಿಗಳ ಜೀವನದಲ್ಲಿ ಹೊಸ ಸಂತೋಷದ ಅಲೆಯನ್ನು ತರುತ್ತವೆ ಎಂದು ಅವರು ಹೇಳಿದರು. ನದಿಗಳಿಗೆ ಹೆಸರಿಡುವ ಸಂಪ್ರದಾಯವು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುತ್ತದೆ ಎಂದು ಅವರು ಹೇಳಿದರು. ಈ ಹೊಸ ಸಮುಚ್ಚಯವು ದೆಹಲಿಯಲ್ಲಿ ಸಂಸದರ ಜೀವನವನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ದೆಹಲಿಯಲ್ಲಿ ಸಂಸದರಿಗೆ ಸರ್ಕಾರಿ ವಸತಿ ಸೌಕರ್ಯಗಳು ಈಗ ಹೆಚ್ಚಾಗಲಿವೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಸಂಸದರನ್ನು ಅಭಿನಂದಿಸಿದರು ಮತ್ತು ವಸತಿ ಸಮುಚ್ಚಯ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರನ್ನು ಶ್ಲಾಘಿಸಿದರು. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಅವರು ಶ್ಲಾಘಿಸಿದರು.ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 06th, 07:00 pm
ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
August 06th, 06:30 pm
ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ
August 04th, 05:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಮಹಾರಾಷ್ಟ್ರದ ನಾಗಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರದ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 30th, 11:53 am
ಗುಡಿ ಪಾಡ್ವ ಮತ್ತು ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕವಾಗಿ ಶುಭಾಶಯಗಳನ್ನು ಕೋರುತ್ತೇನೆ! ಅತ್ಯಂತ ಗೌರವಾನ್ವಿತ ಸರ್ಸಂಘಚಾಲಕ್ ಜಿ, ಡಾ. ಮೋಹನ್ ಭಾಗವತ್ ಜಿ, ಸ್ವಾಮಿ ಗೋವಿಂದ್ ಗಿರಿ ಜಿ ಮಹಾರಾಜ್, ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಡಾ. ಅವಿನಾಶ್ ಚಂದ್ರ ಅಗ್ನಿಹೋತ್ರಿ ಜಿ, ಇತರ ಗಣ್ಯರೇ ಹಾಗು ಇಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಸಹೋದ್ಯೋಗಿಗಳೇ, ಇಂದು ರಾಷ್ಟ್ರ ಯಜ್ಞದ ಈ ಪವಿತ್ರ ಆಚರಣೆಯಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಇಂದು, ಚೈತ್ರ ಶುಕ್ಲ ಪ್ರತಿಪದದ ಈ ದಿನವು ತುಂಬಾ ವಿಶೇಷವಾಗಿದೆ. ನವರಾತ್ರಿಯ ಪವಿತ್ರ ಹಬ್ಬ ಇಂದಿನಿಂದ ಆರಂಭವಾಗುತ್ತಿದೆ. ಇಂದು ದೇಶದ ವಿವಿಧ ಭಾಗಗಳಲ್ಲಿ ಗುಡಿ-ಪಾಡ್ವ, ಯುಗಾದಿ ಮತ್ತು ನವರೆಹ್ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಇಂದು ಭಗವಾನ್ ಜುಲೇಲಾಲ್ ಜಿ ಮತ್ತು ಗುರು ಅಂಗದ್ ದೇವ್ ಜಿ ಅವರ ಜನ್ಮ ದಿನಾಚರಣೆಯೂ ಆಗಿದೆ. ಇದು ನಮ್ಮ ಸ್ಫೂರ್ತಿ, ಅತ್ಯಂತ ಗೌರವಾನ್ವಿತ ಡಾಕ್ಟರ್ ಸಾಹೇಬ್ ಅವರ ಜನ್ಮ ದಿನಾಚರಣೆಯೂ ಆಗಿದೆ. ಮತ್ತು ಈ ವರ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅದ್ಭುತ ಪ್ರಯಾಣದ 100 ವರ್ಷಗಳು ಪೂರ್ಣಗೊಂಡಿವೆ. ಇಂದು ಈ ಸಂದರ್ಭದಲ್ಲಿ, ಸ್ಮೃತಿ ಮಂದಿರಕ್ಕೆ ಭೇಟಿ ನೀಡುವ ಮತ್ತು ಗೌರವಾನ್ವಿತ ಡಾಕ್ಟರ್ ಸಾಹೇಬ್ ಮತ್ತು ಗೌರವಾನ್ವಿತ ಗುರೂಜಿ ಅವರಿಗೆ ಗೌರವ ಸಲ್ಲಿಸುವ ಸೌಭಾಗ್ಯ ನನಗೆ ಸಿಕ್ಕಿದೆ.ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು
March 30th, 11:52 am
ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಪ್ರಧಾನಮಂತ್ರಿಯವರು ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪವಿತ್ರ ನವರಾತ್ರಿ ಉತ್ಸವದ ಆರಂಭವನ್ನು ಸೂಚಿಸುವ ಚೈತ್ರ ಶುಕ್ಲ ಪ್ರತಿಪದದ ಮಹತ್ವದ ಬಗ್ಗೆ ತಿಳಿಸಿದರು. ದೇಶಾದ್ಯಂತ ಇಂದು ಗುಡಿ ಪಡ್ವಾ, ಯುಗಾದಿ ಮತ್ತು ನವರೇಹ್‌ನಂತಹ ಹಬ್ಬಗಳನ್ನು ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು. ಭಗವಾನ್ ಜುಲೇಲಾಲ್ ಮತ್ತು ಗುರು ಅಂಗದ್ ದೇವ್ ಅವರ ಜನ್ಮ ದಿನಾಚರಣೆಯೊಂದಿಗೆ ಈ ದಿನವು ಹೊಂದಿಕೆಯಾಗುವುದರಿಂದ ಈ ದಿನದ ಮಹತ್ವವನ್ನು ಅವರು ವಿವರಿಸಿದರು. ಈ ಸಂದರ್ಭವನ್ನು ಸ್ಪೂರ್ತಿದಾಯಕ ಡಾ. ಕೆ. ಬಿ. ಹೆಡ್ಗೆವಾರ್ ಅವರ ಜನ್ಮ ವಾರ್ಷಿಕೋತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶ್ರೇಷ್ಠ ಪ್ರಯಾಣದ ಶತಮಾನೋತ್ಸವ ವರ್ಷವೆಂದು ತಿಳಿಸಿದರು. ಈ ಮಹತ್ವದ ದಿನದಂದು ಡಾ. ಹೆಡ್ಗೆವಾರ್ ಮತ್ತು ಶ್ರೀ ಗೋಲ್ವಾಲ್ಕರ್ ಗುರೂಜಿ ಅವರಿಗೆ ಗೌರವ ಸಲ್ಲಿಸಲು ಸ್ಮೃತಿ ಮಂದಿರಕ್ಕೆ ಭೇಟಿ ನೀಡಿರುವುದು ನನಗೆ ಸಿಕ್ಕ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.AAP-da's sinking ship will drown in Yamuna Ji: PM Modi in Kartar Nagar, Delhi
January 29th, 01:16 pm
PM Modi today, addressed a massive crowd in Kartar Nagar, declared that Delhi had rejected excuses, fake promises, and deception. He asserted that the city demanded a double-engine BJP government focused on welfare and development, ensuring housing, modernization, piped water, and an end to the tanker mafia. Confident of victory, he proclaimed, On February 5th, AAP-da Jayegi, BJP Aayegi!”PM Modi’s power-packed rally in Kartar Nagar ignites BJP’s campaign
January 29th, 01:15 pm
PM Modi today, addressed a massive crowd in Kartar Nagar, declared that Delhi had rejected excuses, fake promises, and deception. He asserted that the city demanded a double-engine BJP government focused on welfare and development, ensuring housing, modernization, piped water, and an end to the tanker mafia. Confident of victory, he proclaimed, On February 5th, AAP-da Jayegi, BJP Aayegi!”