ಪ್ರಧಾನಮಂತ್ರಿಗಳಿಂದ ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯ ಸಂತ್ರಸ್ತರಿಗೆ ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ

September 28th, 12:03 pm

ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘೋಷಿಸಿದ್ದಾರೆ.