ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

ಕಾಶಿ ವಿಶ್ವನಾಥ ದೇವಸ್ಥಾನದ ಮಾಜಿ ಮಹಂತ್ ಡಾ ಕುಲಪತಿ ತಿವಾರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

June 26th, 08:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ದೇವಸ್ಥಾನದ ಮಾಜಿ ಮಹಾಂತ್ ಡಾ. ಕುಲಪತಿ ತಿವಾರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ರವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ತೀವ್ರ ಸಂತಾಪ ಸೂಚನೆ

June 22nd, 02:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭ ಮತ್ತು ಕಾಶಿ ವಿಶ್ವನಾಥ ಧಾಮದ ಸಮರ್ಪಣೆಯ ಭಾಗವಾಗಿದ್ದ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಕಾಶಿಯ ಡಾ. ಸಂಪೂರ್ಣಾನಂದ ಕ್ರೀಡಾಂಗಣದ ಪ್ರಗತಿ ಪರಿಶೀಲನೆ ನಡೆಸಿದ ಪ್ರಧಾನಮಂತ್ರಿ

June 18th, 11:20 pm

ಕಿಸಾನ್ ಸಮ್ಮಾನ್ ನಿಧಿ, ಗಂಗಾ ಆರತಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆಗಳನ್ನು ಸಲ್ಲಿಸುವ ಕಾರ್ಯಕ್ರಮ ಸೇರಿದಂತೆ ಕಾಶಿಯಲ್ಲಿ ದಿನದ ಕಾರ್ಯಕ್ರಮಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಡಾ.ಸಂಪೂರ್ಣಾನಂದ ಕ್ರೀಡಾ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕಾರ್ಯವನ್ನು ಪರಿಶೀಲಿಸಲು ಅನಿರೀಕ್ಷಿತ ಭೇಟಿ ನೀಡಿದರು.