ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
October 03rd, 03:54 pm
ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.ಕೌಶಲ್ ದೀಕ್ಷಾಂತ್ ಸಮಾರೋಹ್ ಕಾರ್ಯಕ್ರಮದಲ್ಲಿ ವಿಡಿಯೊ ಸಂದೇಶ ಮೂಲಕ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
October 12th, 01:00 pm
ಕೌಶಲ್ಯ ಅಭಿವೃದ್ಧಿಯ ಈ ಸಂಭ್ರಮಾಚರಣೆಯು ನಿಜವಾಗಿಯೂ ವಿಶಿಷ್ಟವಾಗಿದೆ. ದೇಶಾದ್ಯಂತದ ಸಂಸ್ಥೆಗಳ ಸಾಮೂಹಿಕ ಕೌಶಲ್ಯ ಪ್ರದರ್ಶನ, ಕೌಶಲ್ ದೀಕ್ಷಾಂತ್ ಸಮಾರೋಹ್, ಶ್ಲಾಘನೀಯ ಉಪಕ್ರಮವಾಗಿದೆ. ಇದು ಸಮಕಾಲೀನ ಭಾರತದ ಆದ್ಯತೆಗಳನ್ನು ಎತ್ತಿ ತೋರಿಸುತ್ತದೆ. ಇಂದು ಸಾವಿರಾರು ಯುವಕರು ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದಾರೆ. ಎಲ್ಲಾ ಯುವಕರಿಗೆ ಉತ್ತಮ ಭವಿಷ್ಯಕ್ಕಾಗಿ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.ʻಕೌಶಲ ಘಟಿಕೋತ್ಸವ-2023ʼ (ಕೌಶಲ ದೀಕ್ಷಂತ್ ಸಮರೋಹ್- 2023) ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿಯವರ ಭಾಷಣ
October 12th, 12:49 pm
ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕೌಶಲ್ಯ ಅಭಿವೃದ್ಧಿಯ ಈ ಉತ್ಸವವು ಸ್ವತಃ ವಿಶಿಷ್ಟವಾದದ್ದು ಮತ್ತು ಇಂದು ದೇಶಾದ್ಯಂತ ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳ ಜಂಟಿ ಘಟಿಕೋತ್ಸವದ ಕಾರ್ಯಕ್ರಮವು ಅತ್ಯಂತ ಶ್ಲಾಘನೀಯ ಉಪಕ್ರಮವಾಗಿದೆ ಎಂದರು. ಕೌಶಲ ಘಟಿಕೋತ್ಸವವು ಇಂದಿನ ಭಾರತದ ಆದ್ಯತೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. ತಂತ್ರಜ್ಞಾನದ ಮೂಲಕ ಸಾವಿರಾರು ಯುವಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿರುವುದನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಎಲ್ಲ ಯುವಕರಿಗೆ ಶುಭ ಕೋರಿದರು.