ಗುಜರಾತ್‌ನ ಸನಂದ್‌ನಲ್ಲಿ ಕೇನ್ಸ್ ಸೆಮಿಕಾನ್ ಸ್ಥಾವರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

March 31st, 01:05 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಹರ್ಷ ಭಾಯಿ ಸಂಘವಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜೀ, ರಾಜ್ಯ ಸಚಿವ ಸಹೋದರ ಅರ್ಜುನ್ ಮೋಧ್ವಾಡಿಯಾ ಜೀ, ಕೇನ್ಸ್ ಮತ್ತು ಆಲ್ಫಾ ಒಮೆಗಾ ಸೆಮಿಕಂಡಕ್ಟರ್‌ಗಳ ಪ್ರತಿನಿಧಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗುಜರಾತಿನ ಸಾನಂದ್ ನಲ್ಲಿ ಕೇನ್ಸ್ ಸೆಮಿಕಾನ್ ಘಟಕ ಉದ್ಘಾಟನೆ

March 31st, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸಾನಂದ್ ನಲ್ಲಿ ಕೇನ್ಸ್ ಟೆಕ್ನಾಲಜಿ ಸೆಮಿಕಂಡಕ್ಟರ್ ಘಟಕವನ್ನು ಉದ್ಘಾಟಿಸುವ ಮೂಲಕ ಉತ್ಪಾದನಾ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಫೆಬ್ರವರಿ 28ರಂದು ಮೈಕ್ರಾನ್ ಘಟಕದ ಉತ್ಪಾದನಾ ಆರಂಭದ ವೇಳೆ ತಾವು ಸಾನಂದ್ ನಲ್ಲಿದ್ದುದ್ದನ್ನು ಸ್ಮರಿಸಿದ ಅವರು, ಸರಿಯಾಗಿ ಒಂದು ತಿಂಗಳ ನಂತರ ಕೇನ್ಸ್ ಸಂಸ್ಥೆಯ ಈ ಮೈಲಿಗಲ್ಲಿಗೆ ಸಾಕ್ಷಿಯಾಗಲು ಮರಳಿ ಬಂದಿರುವುದು ಭಾರತದ ಸೆಮಿಕಂಡಕ್ಟರ್ ಪಯಣದ ವೇಗಕ್ಕೆ ಹಿಡಿದ ಕನ್ನಡಿ ಎಂದು ಬಣ್ಣಿಸಿದರು. ಇದು ಕೇವಲ ಕಾಕತಾಳೀಯವಲ್ಲ; ಬದಲಾಗಿ ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯು ಎಂತಹ ಕ್ಷಿಪ್ರ ವೇಗದಲ್ಲಿ ವಿಕಸನಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ, ಎಂದು ಶ್ರೀ ಮೋದಿ ಅವರು ಹರ್ಷ ವ್ಯಕ್ತಪಡಿಸಿದರು.

ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 30th, 11:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಗಾಂಧಿನಗರದಲ್ಲಿ ʻಸಾಮ್ರಾಟ್ ಸಂಪ್ರತಿʼ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹಮದಾಬಾದ್‌ನ ಸನಂದ್‌ನಲ್ಲಿ ʻಕೇನ್ಸ್ ಸೆಮಿಕಾನ್ʼ ಘಟಕವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ವಾವ್-ಥರಾಡ್‌ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಸಂಜೆ 4 ಗಂಟೆಗೆ 20,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.