ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ

October 24th, 11:20 am

ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

October 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.

ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

October 17th, 11:09 pm

ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು

October 17th, 08:00 pm

ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.

ಭಾರತ-ಯುಕೆ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 09th, 04:41 pm

ಭಾರತ-ಯುಕೆ ಸಿಇಒಗಳ ವೇದಿಕೆಯ ಇಂದಿನ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಮೊದಲನೆಯದಾಗಿ, ಪ್ರಧಾನ ಮಂತ್ರಿ ಸ್ಟಾರ್ಮರ್ ಅವರ ಅಮೂಲ್ಯ ಆಲೋಚನೆಗಳಿಗಾಗಿ ನಾನು ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.

ಭಾರತ-ಯುಕೆ ಜಂಟಿ ಹೇಳಿಕೆ

October 09th, 03:24 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಕಿಂಗ್ಡಮ್ನ ಗೌರವಾನ್ವಿತ ಪ್ರಧಾನಮಂತ್ರಿ, ಸರ್ ಕೀರ್ ಸ್ಟಾರ್ಮರ್, ಎಂಪಿ ಅವರು ಅಕ್ಟೋಬರ್ 08-09, 2025 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಸ್ಟಾರ್ಮರ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವು ಆಗಮಿಸಿದ್ದು, ಇದರಲ್ಲಿ ವ್ಯವಹಾರ ಮತ್ತು ವಾಣಿಜ್ಯ ಖಾತೆಯ ರಾಜ್ಯ ಕಾರ್ಯದರ್ಶಿ ಹಾಗೂ ಬೋರ್ಡ್ ಆಫ್ ಟ್ರೇಡ್ನ ಅಧ್ಯಕ್ಷರಾದ ಗೌರವಾನ್ವಿತ ಪೀಟರ್ ಕೈಲ್, ಸಂಸದರು, ಸ್ಕಾಟ್ಲೆಂಡ್ ನ ರಾಜ್ಯ ಕಾರ್ಯದರ್ಶಿ ಗೌರವಾನ್ವಿತ ಡೌಗ್ಲಾಸ್ ಅಲೆಕ್ಸಾಂಡರ್, ಸಂಸದರು, ಹೂಡಿಕೆ ಸಚಿವರಾದ ಶ್ರೀ ಜೇಸನ್ ಸ್ಟಾಕ್ ವುಡ್ ಹಾಗೂ 125 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉದ್ಯಮಿಗಳು, ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಸೇರಿದ್ದರು.

ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಶ್ರುತಿ

October 09th, 01:55 pm

ಭಾರತ-ಯುಕೆ ಸಂಪರ್ಕ ಮತ್ತು ನಾವಿನ್ಯತಾ ಕೇಂದ್ರದ ಸ್ಥಾಪನೆ.

ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

October 09th, 11:25 am

ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..

ಭಾರತಕ್ಕೆ ಚೊಚ್ಚಲ ಅಧಿಕೃತ ಭೇಟಿ ನೀಡುತ್ತಿರುವ ಬ್ರಿಟನ್ ಪ್ರಧಾನಮಂತ್ರಿ ಘನತೆವೆತ್ತ ಕೀರ್ ಸ್ಟಾರ್ಮರ್ ಅವರನ್ನು ಸ್ವಾಗತಿಸಿದ ಪ್ರಧಾನಮಂತ್ರಿ

October 08th, 12:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತಕ್ಕೆ ಐತಿಹಾಸಿಕ ಮೊದಲ ಭೇಟಿ ನೀಡುತ್ತಿರುವ ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಘನತೆವೆತ್ತ ಕೀರ್ ಸ್ಟಾರ್ಮರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.

ಪ್ರಧಾನಮಂತ್ರಿ ಅಕ್ಟೋಬರ್ 8-9ರಂದು ಮಹಾರಾಷ್ಟ್ರಕ್ಕೆ ಭೇಟಿ

October 07th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಕ್ಟೋಬರ್ 8-9 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ನವಿ ಮುಂಬೈ ತಲುಪಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊಸದಾಗಿ ನಿರ್ಮಿಸಲಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3:30 ರ ಸುಮಾರಿಗೆ ಪ್ರಧಾನ ಮಂತ್ರಿ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಮುಂಬೈನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಭಾರತದ ಪ್ರಧಾನಮಂತ್ರಿ ಮತ್ತು ಯುಕೆ ಪ್ರಧಾನಮಂತ್ರಿ ಅವರು ಭಾರತೀಯ ಮತ್ತು ಯುಕೆ ಉದ್ಯಮ ಪ್ರಮುಖರನ್ನು ಭೇಟಿಯಾದರು

July 24th, 07:38 pm

'ಐತಿಹಾಸಿಕ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ'ಕ್ಕೆ (CETA) ಸಹಿ ಹಾಕಿದ ಬಳಿಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್‌ ನ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರು, ಇಂದು ಭಾರತ ಮತ್ತು ಯುಕೆಯ ಉದ್ಯಮ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಗ್ಯ, ಫಾರ್ಮಾಸ್ಯುಟಿಕಲ್ಸ್, ರತ್ನ ಮತ್ತು ಆಭರಣ, ಆಟೋಮೊಬೈಲ್, ಇಂಧನ, ಉತ್ಪಾದನೆ, ದೂರಸಂಪರ್ಕ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ (ಐ.ಟಿ.), ಲಾಜಿಸ್ಟಿಕ್ಸ್, ಜವಳಿ ಮತ್ತು ಹಣಕಾಸು ಸೇವೆಗಳ ವಲಯಗಳನ್ನು ಪ್ರತಿನಿಧಿಸುವ ಉಭಯ ದೇಶಗಳ ಪ್ರಮುಖ ಉದ್ಯಮ ದಿಗ್ಗಜರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವಲಯಗಳು ಎರಡೂ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಆರ್ಥಿಕ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ.

ಭಾರತ-ಯುಕೆ (ಯುನೈಟೆಡ್‌ ಕಿಂಗ್‌ಡಮ್‌) ವಿಷನ್‌ 2035

July 24th, 07:12 pm

ಭಾರತ ಮತ್ತು ಯುನೈಟೆಡ್‌ ಕಿಂಗ್‌ಡಮ್‌ನ ಪ್ರಧಾನ ಮಂತ್ರಿಗಳು 2025 ರ ಜುಲೈ 24ರಂದು ಲಂಡನ್‌ನಲ್ಲಿ ನಡೆದ ಸಭೆಯಲ್ಲಿ ಹೊಸ ಭಾರತ-ಯುಕೆ ವಿಷನ್‌ 2035 ಅನ್ನು ಅನುಮೋದಿಸಿದರು. ಇದು ಪುನರುಜ್ಜೀವನಗೊಂಡ ಪಾಲುದಾರಿಕೆಯ ಸಂಪೂರ್ಣ ಸಾಮರ್ಥ್ಯ‌ವನ್ನು ಮುಕ್ತಗೊಳಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ಮಹತ್ವಾಕಾಂಕ್ಷೆಯ ಮತ್ತು ಭವಿಷ್ಯದ ಕೇಂದ್ರಿತ ಒಪ್ಪಂದವು ಪರಸ್ಪರ ಬೆಳವಣಿಗೆ, ಸಮೃದ್ಧಿಗಾಗಿ ಮತ್ತು ತ್ವರಿತ ಜಾಗತಿಕ ಬದಲಾವಣೆಯ ಸಮಯದಲ್ಲಿಸಮೃದ್ಧ, ಸುರಕ್ಷಿತ ಮತ್ತು ಸುಸ್ಥಿರ ಜಗತ್ತನ್ನು ರೂಪಿಸಲು ಒಟ್ಟಾಗಿ ಕೆಲಸ ಮಾಡುವ ಉಭಯ ರಾಷ್ಟ್ರಗಳ ಸಂಕಲ್ಪವನ್ನು ಒತ್ತಿಹೇಳುತ್ತದೆ.

ಬ್ರಿಟನ್ ಪ್ರಧಾನಮಂತ್ರಿಯವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 24th, 04:20 pm

ಮೊದಲನೆಯದಾಗಿ, ಪ್ರಧಾನಿ ಸ್ಟಾರ್ಮರ್ ಅವರ ಆತ್ಮೀಯ ಸ್ವಾಗತ ಮತ್ತು ಸೌಹಾರ್ದಯುತ ಆತಿಥ್ಯಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇಂದು ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು. ಹಲವು ವರ್ಷಗಳ ಸಮರ್ಪಿತ ಪ್ರಯತ್ನಗಳ ನಂತರ, ಇಂದು ನಮ್ಮ ಎರಡೂ ದೇಶಗಳ ನಡುವೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ನನಗೆ ಸಂತೋಷವಾಗಿದೆ.

ಯುಕೆ ಪ್ರಧಾನಮಂತ್ರಿ ಭೇಟಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಹೇಳಿಕೆ

July 24th, 04:00 pm

ಈ ಆತ್ಮೀಯ ಸ್ವಾಗತ ಮತ್ತು ಅದ್ಧೂರಿ ಗೌರವಕ್ಕೆ ನಾನು ಕೃತಜ್ಞನಾಗಿದ್ದೇನೆ. ಇಂದು ಚೆಕರ್ಸ್‌ನಲ್ಲಿ, ನಾವು ಹೊಸ ಇತಿಹಾಸ ಸೃಷ್ಟಿಸಲಿದ್ದೇವೆ. ಭಾರತ ಮತ್ತು ಯುಕೆ ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಒಟ್ಟಾಗಿ ಬರುತ್ತಿವೆ.

ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿಯನ್ನು ಭೇಟಿಯಾದರು

July 24th, 03:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜುಲೈ 23-24, 2025 ರಂದು ಯುನೈಟೆಡ್ ಕಿಂಗ್ ಡಮ್ ಗೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾದರು. ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ ಯುಕೆ ಪ್ರಧಾನಮಂತ್ರಿಗಳ ನಿವಾಸವಾದ ಚೆಕರ್ಸ್‌ನಲ್ಲಿ ಪ್ರಧಾನಿ ಸ್ಟಾರ್ಮರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ನಂತರ ಇಬ್ಬರು ನಾಯಕರು ಮುಖಾಮುಖಿ ಸಭೆ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು.

PM Modi arrives in London, United Kingdom

July 24th, 12:15 pm

Prime Minister Narendra Modi arrived in United Kingdom a short while ago. In United Kingdom, PM Modi will hold discussions with UK PM Starmer on India-UK bilateral relations and will also review the progress of the Comprehensive Strategic Partnership.

ಬ್ರಿಟನ್ ಮತ್ತು ಮಾಲ್ಡೀವ್ಸ್ ಗೆ ಅಧಿಕೃತ ಭೇಟಿ ಮುನ್ನಾದಿನದಂದು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

July 23rd, 01:05 pm

ಭಾರತ ಮತ್ತು ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಹಂಚಿಕೊಂಡಿದ್ದು, ಇತ್ತೀಚಿನ ವರ್ಷಗಳಲ್ಲಿ ಅದು ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ. ನಮ್ಮ ಸಹಯೋಗವು ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಶಿಕ್ಷಣ, ಸಂಶೋಧನೆ, ಸುಸ್ಥಿರತೆ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳನ್ನು ವ್ಯಾಪಿಸಿದೆ. ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರೊಂದಿಗಿನ ನನ್ನ ಭೇಟಿಯ ವೇಳೆ, ಉಭಯ ದೇಶಗಳ ಸಮೃದ್ಧಿ, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ನಮ್ಮ ಆರ್ಥಿಕ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ನಮಗೆ ಅವಕಾಶ ಸಿಗಲಿದೆ. ಈ ಭೇಟಿಯ ವೇಳೆ ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ.

ಪ್ರಧಾನಿಯವರ ಯುನೈಟೆಡ್ ಕಿಂಗ್‌ಡಮ್ ಮತ್ತು ಮಾಲ್ಡೀವ್ಸ್ ಭೇಟಿ (ಜುಲೈ 23 - 26, 2025)

July 20th, 10:49 pm

ಪ್ರಧಾನಿ ಮೋದಿ ಜುಲೈ 23 - 26 ರವರೆಗೆ ಯುಕೆಗೆ ಅಧಿಕೃತ ಭೇಟಿ ಮತ್ತು ಮಾಲ್ಡೀವ್ಸ್‌ಗೆ ರಾಜ್ಯ ಭೇಟಿ ನೀಡಲಿದ್ದಾರೆ. ಅವರು ಪ್ರಧಾನಿ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಅವರು ಸಿಎಸ್‌ಪಿಯ ಪ್ರಗತಿಯನ್ನು ಸಹ ಪರಿಶೀಲಿಸಲಿದ್ದಾರೆ. ಜುಲೈ 26 ರಂದು ಮಾಲ್ಡೀವ್ಸ್‌ನ 60 ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಆಚರಣೆಯಲ್ಲಿ ಪ್ರಧಾನಿ ಮೋದಿ 'ಗೌರವ ಅತಿಥಿ'ಯಾಗಿರುತ್ತಾರೆ. ಅವರು ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಪರಸ್ಪರ ಆಸಕ್ತಿಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಜಿ 7 ಶೃಂಗಸಭೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮತ್ತು ಯುನೈಟೆಡ್ ಕಿಂಗ್‌ಡಂ ಪ್ರಧಾನಮಂತ್ರಿ ಸಂವಾದ

June 18th, 02:55 pm

ಕೆನಡಾದ ಕನನಾಸ್ಕಿಸ್‌ನಲ್ಲಿ 2025ರ ಜೂನ್ 17 ರಂದು ನಡೆದ 51ನೇ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಂನ ಪ್ರಧಾನಮಂತ್ರಿ ಮಾನ್ಯ ಶ್ರೀ ಕೀರ್ ಸ್ಟಾರ್ಮರ್ ಅವರೊಂದಿಗೆ ಸಂವಾದ ನಡೆಸಿದರು. ಭಾರತ ಮತ್ತು ಯುಕೆ ನಡುವಿನ ಬಾಂಧವ್ಯ ಬಲಗೊಳ್ಳುತ್ತಿವೆ ಎಂಬುದನ್ನು ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ವಾಸ್ತವಿಕತೆಯಯು ಪ್ರತಿಬಿಂಬಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಯುನೈಟೆಡ್ ಕಿಂಗ್‌ಡಮ್‌ನ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

June 07th, 07:39 pm

ಯುನೈಟೆಡ್ ಕಿಂಗ್‌ಡಮ್‌ನ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.