ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 06th, 08:04 pm
ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.ಎಬಿಪಿ ನೆಟ್‌ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 06th, 08:00 pm
ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
December 25th, 01:00 pm
ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
December 25th, 12:30 pm
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್ ಸಮುದಾಯದ ಜನತೆಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
December 24th, 11:46 am
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.