ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 19th, 07:01 pm
ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
November 19th, 02:30 pm
ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 18th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.Bihar has defeated lies and upheld the truth: PM Modi from BJP HQ post NDA’s major victory
November 14th, 07:30 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.After NDA’s landslide Bihar victory, PM Modi takes the centre stage at BJP HQ
November 14th, 07:00 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.ಸಿರೋ-ಮಲಬಾರ್ ಚರ್ಚ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 04th, 09:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿರೋ-ಮಲಬಾರ್ ಚರ್ಚ್ ಮುಖ್ಯಸ್ಥರಾದ ಮೇಜರ್ ಆರ್ಚ್ ಬಿಷಪ್ ಘನತೆವೆತ್ತ ರೆವರೆಂಡ್ ಮಾರ್ ರಾಫೆಲ್ ತಟ್ಟಿಲ್, ಘನತೆವೆತ್ತ ಆರ್ಚ್ ಬಿಷಪ್ ಡಾ. ಕುರಿಯಾಕೋಸ್ ಭರಣಿಕುಲಂಗರ ಮತ್ತು ಇತರರೊಂದಿಗೆ ಅದ್ಭುತ ಸಂವಾದ ನಡೆಸಿದರು.ಕೇರಳ ಪಿರವಿಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯಗಳು
November 01st, 09:35 am
ಕೇರಳ ಪಿರವಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕೇರಳ ಮುಖ್ಯಮಂತ್ರಿ
October 10th, 12:45 pm
ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.ಗುಜರಾತ್ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
September 20th, 11:00 am
ಗುಜರಾತ್ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು
September 20th, 10:30 am
ಗುಜರಾತ್ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಓಣಂ ಸಂದರ್ಭದಲ್ಲಿ ಎಲ್ಲರಿಗೂ ಶುಭ ಹಾರೈಸಿದ ಪ್ರಧಾನಮಂತ್ರಿ
September 05th, 08:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಓಣಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ್ದಾರೆ. ಈ ಹಬ್ಬವು ಏಕತೆ, ಭರವಸೆ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿದೆ. ಈ ಹಬ್ಬವು ನಮ್ಮ ಸಮಾಜದಲ್ಲಿ ಸಾಮರಸ್ಯದ ಚೈತನ್ಯವನ್ನು ಬಲಪಡಿಸಿ ಪ್ರಕೃತಿಯೊಂದಿಗಿನ ನಮ್ಮ ಸಂಪರ್ಕವನ್ನು ಗಾಢಗೊಳಿಸಲಿ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
July 21st, 06:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಆಂಧ್ರಪ್ರದೇಶ (ತಿರುಪತಿ), ಛತ್ತೀಸಗಢ (ಭಿಲಾಯಿ), ಜಮ್ಮು ಮತ್ತು ಕಾಶ್ಮೀರ (ಜಮ್ಮು), ಕರ್ನಾಟಕ (ಧಾರವಾಡ) ಮತ್ತು ಕೇರಳ(ಪಾಲಕ್ಕಾಡ್)ಗಳಲ್ಲಿ ಸ್ಥಾಪಿಸಲಾದ ಐದು ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಸಂಪುಟದ ಅನುಮೋದನೆ
May 07th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಐದು ಹೊಸ ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ (ಹಂತ-‘ಬಿ’ನಿರ್ಮಾಣ) ಅನುಮೋದನೆ ನೀಡಿದೆ. ಈ ಐದು ಹೊಸ ಐಐಟಿಗಳನ್ನು ಆಂಧ್ರಪ್ರದೇಶ (ಐಐಟಿ ತಿರುಪತಿ), ಕೇರಳ (ಐಐಟಿ ಪಾಲಕ್ಕಾಡ್), ಛತ್ತೀಸಗಢ (ಐಐಟಿ ಭಿಲಾಯಿ), ಜಮ್ಮು ಮತ್ತು ಕಾಶ್ಮೀರ (ಐಐಟಿ ಜಮ್ಮು) ಮತ್ತು ಕರ್ನಾಟಕ (ಐಐಟಿ ಧಾರವಾಡ) ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿದೆ.ಕೇರಳದ ತಿರುವನಂತಪುರಂನಲ್ಲಿ ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 02:06 pm
ಕೇರಳದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಪಿ. ವಿಜಯನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಎಲ್ಲ ಗಣ್ಯರೆ ಮತ್ತು ಕೇರಳದ ನನ್ನ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ₹8,800 ಕೋಟಿ ರೂಪಾಯಿ ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
May 02nd, 01:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ 8,800 ಕೋಟಿ ರೂ. ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಬಹುಪಯೋಗಿ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭಗವಾನ್ ಆದಿ ಶಂಕರಾಚಾರ್ಯರ ಜಯಂತಿಯ ಶುಭ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಮೂರು ವರ್ಷಗಳ ಹಿಂದೆ ಸೆಪ್ಟೆಂಬರ್ ನಲ್ಲಿ ಆದಿ ಶಂಕರಾಚಾರ್ಯರ ಪವಿತ್ರ ಜನ್ಮಸ್ಥಳಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ಸಿಕ್ಕಿತ್ತು ಎಂದು ಹೇಳಿದರು. ತಮ್ಮ ಸಂಸದೀಯ ಕ್ಷೇತ್ರವಾದ ಕಾಶಿಯಲ್ಲಿರುವ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ಆದಿ ಶಂಕರಾಚಾರ್ಯರ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು. ಈ ಪ್ರತಿಮೆ ಆದಿ ಶಂಕರಾಚಾರ್ಯರ ಅಪಾರ ಆಧ್ಯಾತ್ಮಿಕ ಜ್ಞಾನ ಮತ್ತು ಬೋಧನೆಗಳಿಗೆ ಸಲ್ಲಿಸಿದ ಗೌರವವಾಗಿದೆ ಎಂದು ಅವರು ಒತ್ತಿ ಹೇಳಿದರು. ಉತ್ತರಾಖಂಡದ ಪವಿತ್ರ ಕೇದಾರನಾಥ ಧಾಮದಲ್ಲಿ ಆದಿ ಶಂಕರಾಚಾರ್ಯರ ದೈವಿಕ ಪ್ರತಿಮೆಯನ್ನು ಅನಾವರಣಗೊಳಿಸುವ ಗೌರವ ತಮಗೆ ಸಿಕ್ಕಿತು ಎಂದು ಅವರು ಹೇಳಿದರು. ಕೇದಾರನಾಥ ದೇವಾಲಯದ ಬಾಗಿಲುಗಳು ಭಕ್ತರಿಗಾಗಿ ತೆರೆದಿರುವುದು ಇಂದು ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದು ಪ್ರಧಾನಿ ಹೇಳಿದರು. ಕೇರಳದಿಂದ ಬಂದ ಆದಿ ಶಂಕರಾಚಾರ್ಯರು ದೇಶದ ವಿವಿಧ ಮೂಲೆಗಳಲ್ಲಿ ಮಠಗಳನ್ನು ಸ್ಥಾಪಿಸಿ ರಾಷ್ಟ್ರದ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಅವರ ಪ್ರಯತ್ನಗಳು ಏಕೀಕೃತ ಮತ್ತು ಆಧ್ಯಾತ್ಮಿಕವಾಗಿ ಪ್ರಬುದ್ಧವಾದ ಭಾರತಕ್ಕೆ ಅಡಿಪಾಯ ಹಾಕಿದವು ಎಂದು ಅವರು ಒತ್ತಿ ಹೇಳಿದರು.