ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.
September 28th, 11:00 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
July 27th, 11:30 am
‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 11:23 am
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
April 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಭಾರತ್ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ
February 16th, 04:15 pm
ಭಾರತ್ ಮಂಟಪ್ ಇಂದು 2ನೇ ಆವೃತ್ತಿಯ ಭಾರತ್ ಟೆಕ್ಸ್ ಗೆ ಆತಿಥ್ಯವಹಿಸುತ್ತಿದೆ. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಸಂಭ್ರಮಾಚರಣೆ ಮಾತ್ರವಲ್ಲ, ವಿಕಸಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ)ದ ವಿಪುಲ ಸಾದ್ಯತೆಗಳನ್ನು ಪ್ರತಿಬಿಂಬಿಸುತ್ತದೆ. ನಾವು ನೆಟ್ಟ ಬೀಜವು ಈಗ ವೇಗವಾಗಿ ಬೃಹತ್ ಆಲದ ಮರವಾಗಿ ಬೆಳೆಯುತ್ತಿರುವುದು ರಾಷ್ಟ್ರಕ್ಕೆ ಅಪಾರ ಸಂತೋಷದ ವಿಷಯ. ಭಾರತ್ ಟೆಕ್ಸ್ ಪ್ರಮುಖ ಜಾಗತಿಕ ಜವಳಿ ಕಾರ್ಯಕ್ರಮವಾಗಿ ವಿಕಸನಗೊಳ್ಳುತ್ತಿದೆ. ಈ ಬಾರಿ, ಮೌಲ್ಯ ಚಿತ್ರಪಟಲವನ್ನು ಸಂಪೂರ್ಣವಾಗಿ ಪ್ರತಿನಿಧಿಸಲಾಗುತ್ತದೆ, ಇದರಲ್ಲಿ 12 ಸಂಬಂಧಿತ ಗುಂಪುಗಳು ಒಟ್ಟಾಗಿ ಭಾಗವಹಿಸುತ್ತವೆ. ಹೆಚ್ಚುವರಿಯಾಗಿ, ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮ ನಾಯಕರ ನಡುವಿನ ಒಳಗೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಭಾರತ್ ಟೆಕ್ಸ್ ಒಂದು ಪ್ರಬಲ ವೇದಿಕೆಯಾಗಿ ಹೊರಹೊಮ್ಮುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ಪಾಲುದಾರರ ಬದ್ಧತೆಯ ಪ್ರಯತ್ನಗಳು ನಿಜಕ್ಕೂ ಶ್ಲಾಘನೀಯ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆಭಾರತ್ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
February 16th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಭಾರತ್ ಮಂಟಪದಲ್ಲಿ ಭಾರತ್ ಟೆಕ್ಸ್ 2025 ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಮಳಿಗೆಗಳನ್ನು ವೀಕ್ಷಿಸಿದರು. ನಂತರ ನೆರದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರನ್ನೂ ಭಾರತ್ ಟೆಕ್ಸ್ 2025ಗೆ ಸ್ವಾಗತಿಸಿದರು ಮತ್ತು ಭಾರತ್ ಮಂಟಪ್ 2ನೇ ಆವೃತ್ತಿಯ ಭಾರತ್ ಟೆಕ್ಸ್ ಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಬಗ್ಗೆ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದ್ದ ವಿಕಸಿತ ಭಾರತದ ಭವಿಷ್ಯದ ಬಗ್ಗೆ ಒಂದು ಒಳನೋಟವನ್ನು ನೀಡಿತು ಎಂದು ಅವರು ಹೇಳಿದರು. ಭಾರತ್ ಟೆಕ್ಸ್ ಈಗ ಬೃಹತ್ ಜಾಗತಿಕ ಜವಳಿ ಕಾರ್ಯಕ್ರಮವಾಗುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಮೌಲ್ಯ ಸರಣಿಯ ಚಿತ್ರಪಟಲಕ್ಕೆ ಸಂಬಂಧಿಸಿದ ಎಲ್ಲಾ ಹನ್ನೆರಡು ಸಮುದಾಯಗಳು ಈ ಬಾರಿ ಕಾರ್ಯಕ್ರಮದ ಭಾಗವಾಗಿವೆ ಎಂದು ಅವರು ಹೇಳಿದರು. ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳ ಪ್ರದರ್ಶನಗಳು ಸಹ ಇದ್ದವು ಎಂದು ಅವರು ಹೇಳಿದರು. ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮದ ನಾಯಕರಿಗೆ ಭಾರತ್ ಟೆಕ್ಸ್ ತೊಡಗಿಸಿಕೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಬಲವಾದ ವೇದಿಕೆಯಾಗುತ್ತಿದೆ ಎಂದು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.ರೋಜ್ ಗಾರ್ ಮೇಳದ ಅಡಿಯಲ್ಲಿ 51,000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 29th, 11:00 am
ದೇಶದ ವಿವಿಧ ಭಾಗಗಳಿಂದ ನಮ್ಮ ಜೊತೆಗೆ ಸೇರಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಸಂಸತ್ ಸದಸ್ಯರು, ವಿಧಾನಸಭೆಗಳ ಸದಸ್ಯರು, ರಾಷ್ಟ್ರದ ಯುವ ಸ್ನೇಹಿತರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
October 29th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಉದ್ಯೋಗ ಮೇಳ ಬಿಂಬಿಸುತ್ತದೆ. ಇದು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಬಲಗೊಳಿಸುತ್ತದೆ.ಖಾದಿ ಮಾರಾಟದ ಹೊಸ ದಾಖಲೆಯನ್ನು ಉತ್ತೇಜನಕಾರಿ ಸಾಧನೆ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ
October 05th, 04:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಖಾದಿ ಮಾರಾಟದ ಹೊಸ ದಾಖಲೆಯನ್ನು ಉತ್ತೇಜನಕಾರಿ ಸಾಧನೆ ಎಂದು ಶ್ಲಾಘಿಸಿದ್ದಾರೆ. ದೇಶವಾಸಿಗಳಲ್ಲಿ ಸ್ವದೇಶಿ ಪ್ರವೃತ್ತಿ ವೇಗವಾಗಿ ಬೆಳೆಯುತ್ತಿದೆ ಎಂದು ಅವರು ಹೇಳಿದರು.ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
July 28th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!ಚುನಾಯಿತರಾದರೆ 5 ವರ್ಷಗಳಲ್ಲಿ ಐವರು ಪ್ರಧಾನಿಗಳನ್ನು ಹೊಂದಲು ಭಾರತ-ಅಗಾಧಿ ಯೋಜನೆ: ಸೋಲಾಪುರದಲ್ಲಿ ಪ್ರಧಾನಿ ಮೋದಿ
April 29th, 08:57 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ರೋಮಾಂಚಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹೆಚ್ಚಿನ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಚುನಾವಣೆಯಲ್ಲಿ ಮುಂದಿನ 5 ವರ್ಷಗಳ ಅಭಿವೃದ್ಧಿಯ ಭರವಸೆಯನ್ನು ನೀವು ಆಯ್ಕೆ ಮಾಡುತ್ತೀರಿ. ಮತ್ತೊಂದೆಡೆ, 2014ಕ್ಕಿಂತ ಮೊದಲು ದೇಶವನ್ನು ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ದುರಾಡಳಿತದ ಪ್ರಪಾತಕ್ಕೆ ತಳ್ಳಿದವರೂ ಇದ್ದಾರೆ, ಅವರ ಕಳಂಕಿತ ಇತಿಹಾಸದ ಹೊರತಾಗಿಯೂ, ಕಾಂಗ್ರೆಸ್ ಮತ್ತೊಮ್ಮೆ ದೇಶದಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ.ಪ್ರಧಾನಿ ಮೋದಿಯವರ ವಿದ್ಯುನ್ಮಾನ ಪ್ರಚಾರದ ಹಾದಿಗಳು ಮಹಾರಾಷ್ಟ್ರದ ಸೋಲಾಪುರ, ಸತಾರಾ ಮತ್ತು ಪುಣೆಯನ್ನು ತಲುಪುತ್ತವೆ
April 29th, 02:05 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಸೋಲಾಪುರ, ಸತಾರಾ ಮತ್ತು ಪುಣೆಯಲ್ಲಿ ರೋಮಾಂಚಕ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹೆಚ್ಚಿನ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಚುನಾವಣೆಯಲ್ಲಿ ಮುಂದಿನ 5 ವರ್ಷಗಳ ಅಭಿವೃದ್ಧಿಯ ಭರವಸೆಯನ್ನು ನೀವು ಆಯ್ಕೆ ಮಾಡುತ್ತೀರಿ. ಮತ್ತೊಂದೆಡೆ, 2014ಕ್ಕಿಂತ ಮೊದಲು ದೇಶವನ್ನು ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ದುರಾಡಳಿತದ ಪ್ರಪಾತಕ್ಕೆ ತಳ್ಳಿದವರೂ ಇದ್ದಾರೆ, ಅವರ ಕಳಂಕಿತ ಇತಿಹಾಸದ ಹೊರತಾಗಿಯೂ, ಕಾಂಗ್ರೆಸ್ ಮತ್ತೊಮ್ಮೆ ದೇಶದಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ.ಗುಜರಾತ್ ನಲ್ಲಿ ಕೊಚ್ರಾಬ್ ಆಶ್ರಮದ ಉದ್ಘಾಟನೆ ಮತ್ತು ಸಬರಮತಿ ಆಶ್ರಮ ಯೋಜನೆಯ ಮಾಸ್ಟರ್ ಪ್ಲಾನ್ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
March 12th, 10:45 am
ಪೂಜ್ಯ ಬಾಪು ಅವರ ಸಬರಮತಿ ಆಶ್ರಮವು ನಿರಂತರವಾಗಿ ಸಾಟಿಯಿಲ್ಲದ ಶಕ್ತಿಯನ್ನು ಹೊರಸೂಸುತ್ತಿದೆ, ರೋಮಾಂಚಕ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಇತರ ಅನೇಕರಂತೆ, ನಮಗೆ ಭೇಟಿ ನೀಡುವ ಸುಯೋಗ ಸಿಕ್ಕಾಗಲೆಲ್ಲಾ, ಬಾಪು ಅವರ ಶಾಶ್ವತ ಸ್ಫೂರ್ತಿಯನ್ನು ನಾವು ತೀವ್ರವಾಗಿ ಅನುಭವಿಸುತ್ತೇವೆ. ಸತ್ಯ, ಅಹಿಂಸೆ, ರಾಷ್ಟ್ರಭಕ್ತಿ ಮತ್ತು ದೀನದಲಿತರ ಸೇವೆಯ ಮನೋಭಾವವನ್ನು ಬಾಪೂ ಅವರು ಪೋಷಿಸಿದ ಮೌಲ್ಯಗಳನ್ನು ಸಬರಮತಿ ಆಶ್ರಮವು ಇನ್ನೂ ಎತ್ತಿಹಿಡಿದಿದೆ. ಇಂದು ನಾನು ಸಬರಮತಿ ಆಶ್ರಮದ ಪುನರಾಭಿವೃದ್ಧಿ ಮತ್ತು ವಿಸ್ತರಣೆಗೆ ಶಂಕುಸ್ಥಾಪನೆ ನೆರವೇರಿಸಿರುವುದು ನಿಜಕ್ಕೂ ಶುಭಕರವಾಗಿದೆ. ಇದಲ್ಲದೆ, ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಂತರ ಬಾಪು ಅವರು ಆರಂಭದಲ್ಲಿ ವಾಸಿಸುತ್ತಿದ್ದ ಕೊಚ್ರಾಬ್ ಆಶ್ರಮವನ್ನು ಸಹ ನವೀಕರಿಸಲಾಗಿದೆ ಮತ್ತು ಇಂದು ಅದರ ಉದ್ಘಾಟನೆಯನ್ನು ಘೋಷಿಸಲು ನನಗೆ ಸಂತೋಷವಾಗಿದೆ. ಗಾಂಧೀಜಿಯವರು ಮೊಟ್ಟಮೊದಲ ಬಾರಿಗೆ ಚರಕವನ್ನು ನೇಯುವಲ್ಲಿ ತೊಡಗಿಸಿಕೊಂಡರು ಮತ್ತು ಮರಗೆಲಸ ಕೆಲಸವನ್ನು ಕಲಿತದ್ದು ಕೊಚ್ರಾಬ್ ಆಶ್ರಮದಲ್ಲಿ. ಅಲ್ಲಿ ಎರಡು ವರ್ಷಗಳ ವಾಸ್ತವ್ಯದ ನಂತರ, ಗಾಂಧೀಜಿ ಸಬರಮತಿ ಆಶ್ರಮಕ್ಕೆ ತೆರಳಿದರು. ಇದರ ಪುನರ್ನಿರ್ಮಾಣದೊಂದಿಗೆ, ಗಾಂಧೀಜಿಯವರ ಆರಂಭಿಕ ದಿನಗಳ ನೆನಪುಗಳನ್ನು ಕೊಚ್ರಾಬ್ ಆಶ್ರಮದಲ್ಲಿ ಉತ್ತಮವಾಗಿ ಸಂರಕ್ಷಿಸಲಾಗುವುದು. ನಾನು ಪೂಜ್ಯ ಬಾಪೂ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಈ ಮಹತ್ವದ ಮತ್ತು ಸ್ಪೂರ್ತಿದಾಯಕ ಸ್ಥಳಗಳ ಅಭಿವೃದ್ಧಿಗಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ.ಗುಜರಾತ್ ನ ಸಬರಮತಿಯಲ್ಲಿ ಕೊಚ್ರಾಬ್ ಆಶ್ರಮ ಉದ್ಘಾಟಿಸಿದ ಪ್ರಧಾನಮಂತ್ರಿ
March 12th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ ಕೊಚ್ರಾಬ್ ಆಶ್ರಮವನ್ನು ಉದ್ಘಾಟಿಸಿದರು ಮತ್ತು ಗಾಂಧಿ ಆಶ್ರಮ ಸ್ಮಾರಕದ ಮಾಸ್ಟರ್ ಪ್ಲಾನ್ ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಮಹಾತ್ಮಾ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು ಮತ್ತು ಹೃದಯ್ ಕುಂಜ್ ಗೆ ಭೇಟಿ ನೀಡಿದರು. ಅವರು ವಸ್ತುಪ್ರದರ್ಶನದ ನಡಿಗೆಯನ್ನು ತೆಗೆದುಕೊಂಡು ಸಸಿಯನ್ನು ನೆಟ್ಟರು.ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 23rd, 02:45 pm
ವೇದಿಕೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮಹೇಂದ್ರ ನಾಥ್ ಪಾಂಡೆ ಜೀ, ಉಪ ಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜೀ, ಬನಾಸ್ ಡೈರಿ ಅಧ್ಯಕ್ಷ ಶಂಕರ್ ಭಾಯ್ ಚೌಧರಿ, ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ರಾಜ್ಯದ ಇತರ ಸಚಿವರು, ಪ್ರತಿನಿಧಿಗಳು, ಮತ್ತು ಕಾಶಿಯ ನನ್ನ ಸಹೋದರ ಸಹೋದರಿಯರೇ.