ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

April 23rd, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:45 ಕ್ಕೆ ಅವರು ಮಧುಬನಿಗೆ ಪ್ರಯಾಣಿಸಲಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು 13,480 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಜತೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.