ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
December 25th, 01:00 pm
ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
December 25th, 12:30 pm
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್ ಸಮುದಾಯದ ಜನತೆಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.