2025-26ನೇ ಸಾಲಿನ ಹಿಂಗಾರು ಹಂಗಾಮಿಗೆ 'ಫಾಸ್ಪೆಟಿಕ್' ಮತ್ತು 'ಪೊಟ್ಯಾಸಿಕ್' ರಸಗೊಬ್ಬರಗಳ ಮೇಲಿನ 'ಪೋಷಕಾಂಶ ಆಧಾರಿತ ಸಬ್ಸಿಡಿ' ದರಗಳಿಗೆ ಸಂಪುಟ ಅನುಮೋದನೆ
October 28th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, 2025-26ನೇ ಸಾಲಿನ ಹಿಂಗಾರು ಹಂಗಾಮಿಗೆ (01.10.2025 ರಿಂದ 31.03.2026 ರವರೆಗೆ) 'ಫಾಸ್ಪೆಟಿಕ್' ಮತ್ತು 'ಪೊಟ್ಯಾಸಿಕ್'(ಪಿ ಮತ್ತು ಕೆ) ರಸಗೊಬ್ಬರಗಳ ಮೇಲೆ ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ(ಎನ್.ಬಿ.ಎಸ್) ದರಗಳನ್ನು ನಿಗದಿಪಡಿಸುವ ರಸಗೊಬ್ಬರ ಇಲಾಖೆಯ ಪ್ರಸ್ತಾವನೆಗೆ ಇಂದು ಅನುಮೋದನೆ ನೀಡಿದೆ. 2025-26ನೇ ಸಾಲಿನ ಹಿಂಗಾರು ಹಂಗಾಮಿಗೆ ಅಂದಾಜು ರೂ. 37,952.29 ಕೋಟಿ ಅನುದಾನದ ಅಗತ್ಯವಿರುತ್ತದೆ. ಇದು 2025ನೇ ಸಾಲಿನ ಮುಂಗಾರು ಋತುವಿನ ಬಜೆಟ್ ಅಗತ್ಯಕ್ಕಿಂತ ಅಂದಾಜು 736 ಕೋಟಿ ರೂ. ಹೆಚ್ಚಾಗಿದೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 07th, 09:20 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 07th, 09:00 am
ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.Cabinet approves the Prime Minister Dhan-Dhaanya Krishi Yojana
July 16th, 02:51 pm
The Union Cabinet chaired by PM Modi has approved the “Prime Minister Dhan-Dhaanya Krishi Yojana” for a period of six years, beginning with 2025-26 to cover 100 districts. The scheme will result in higher productivity, value addition in agriculture and allied sector, local livelihood creation and also increase domestic production thereby achieving self-reliance (Atmanirbhar Bharat).ಬಿಹಾರದ ಕರಕಟ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 30th, 11:29 am
ಬಿಹಾರದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ನಿತ್ಯಾನಂದ್ ರಾಯ್ ಜಿ, ಸತೀಶ್ ಚಂದ್ರ ದುಬೇ ಜಿ, ರಾಜಭೂಷಣ್ ಜಿ, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಜಿ, ವಿಜಯ್ ಕುಮಾರ್ ಸಿನ್ಹಾ ಜೀ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಚಿವರೆ, ಜನ ಪ್ರತಿನಿಧಿಗಳೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಕರಕಟ್‌ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 30th, 10:53 am
ಬಿಹಾರದ ಕರಕಟ್‌ನಲ್ಲಿ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪವಿತ್ರ ಭೂಮಿಯಲ್ಲಿ ಬಿಹಾರದ ಅಭಿವೃದ್ಧಿಯನ್ನು ವೇಗಗೊಳಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು ಹಾಗು ₹48,000 ಕೋಟಿಗೂ ಹೆಚ್ಚಿನ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಅವರು ಪ್ರಮುಖವಾಗಿ ಉಲ್ಲೇಖಿಸಿದರು. ತಮ್ಮನ್ನು ಆಶೀರ್ವದಿಸಲು ಬಂದಿದ್ದ ಬೃಹತ್ ಸಭೆಯನ್ನು ಪ್ರಧಾನಿ ಸ್ಮರಿಸಿದರು ಮತ್ತು ಬಿಹಾರದ ಮೇಲಿನ ಅವರ ವಾತ್ಸಲ್ಯ ಮತ್ತು ಪ್ರೀತಿಗೆ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು, ಅವರ ಬೆಂಬಲವನ್ನು ತಾವು ಸದಾ ಅತ್ಯುನ್ನತ ಗೌರವದಿಂದ ಕಾಣುವುದಾಗಿ ಒತ್ತಿ ಹೇಳಿದರು. ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ತಮ್ಮ ಭಾವನಾತ್ಮಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
May 29th, 06:45 pm
ಇಂದು, ಜಗನ್ನಾಥನ ಆಶೀರ್ವಾದದೊಂದಿಗೆ, ದೇಶದ ರೈತರಿಗಾಗಿ ಒಂದು ದೊಡ್ಡ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ. ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ’ವು (ಅಭಿವೃದ್ಧಿ ಹೊಂದಿದ ಕೃಷಿ ಸಂಕಲ್ಪ ಅಭಿಯಾನ) ತನ್ನದೇ ಆದ ವಿಶಿಷ್ಟ ಉಪಕ್ರಮವಾಗಿದೆ. ಮುಂಗಾರು ಸಮೀಪಿಸುತ್ತಿದೆ, ಖಾರಿಫ್ ಋತುವಿನ ಸಿದ್ಧತೆಗಳು ನಡೆಯುತ್ತಿವೆ, ಮತ್ತು ಮುಂದಿನ 12 ರಿಂದ 15 ದಿನಗಳಲ್ಲಿ, ವಿಜ್ಞಾನಿಗಳು, ತಜ್ಞರು, ಅಧಿಕಾರಿಗಳು ಮತ್ತು ಪ್ರಗತಿಪರ ರೈತರನ್ನು ಒಳಗೊಂಡ 2,000 ಕ್ಕೂ ಹೆಚ್ಚು ತಂಡಗಳು ದೇಶಾದ್ಯಂತ ಗ್ರಾಮಗಳಿಗೆ ಭೇಟಿ ನೀಡಲಿವೆ. ಈ ತಂಡಗಳು 700 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಲಕ್ಷಾಂತರ ರೈತರನ್ನು ತಲುಪಲಿವೆ. ಈ ಭವ್ಯವಾದ ಅಭಿಯಾನ, ಮಹತ್ವಾಕಾಂಕ್ಷಿ ಕಾರ್ಯಕ್ರಮ ಮತ್ತು ಭಾರತೀಯ ಕೃಷಿಯ ಉಜ್ವಲ ಭವಿಷ್ಯಕ್ಕಾಗಿ ದೇಶದ ಎಲ್ಲಾ ರೈತರಿಗೂ ಮತ್ತು ಈ ತಂಡಗಳ ಎಲ್ಲಾ ಸದಸ್ಯರಿಗೂ ನನ್ನ ಶುಭ ಹಾರೈಕೆಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಉದ್ದೇಶಿಸಿ ಭಾಷಣ ಮಾಡಿದರು
May 29th, 06:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ತಮ್ಮ ಹೇಳಿಕೆಗಳನ್ನು ನೀಡಿದ ಅವರು, ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಪ್ರಾರಂಭಿಸಿರುವುದು ರೈತರಿಗೆ ಮಹತ್ವದ ಉಪಕ್ರಮವಾಗಿದೆ ಮತ್ತು ಕೃಷಿ ಅಭಿವೃದ್ಧಿಗೆ ಬೆಂಬಲ ನೀಡುವ ವಿಶಿಷ್ಟ ಪ್ರಯತ್ನವಾಗಿದೆ ಎಂದು ಹೇಳಿದರು. ಮಾನ್ಸೂನ್ ಸಮೀಪಿಸುತ್ತಿದ್ದಂತೆ ಮತ್ತು ಮುಂಗಾರು ಋುತುವಿನ ಸಿದ್ಧತೆಗಳು ಪ್ರಾರಂಭವಾಗುತ್ತಿದ್ದಂತೆ, ಮುಂದಿನ 12 ರಿಂದ 15 ದಿನಗಳಲ್ಲಿ, ವಿಜ್ಞಾನಿಗಳು, ತಜ್ಞರು, ಅಧಿಕಾರಿಗಳು ಮತ್ತು ಪ್ರಗತಿಪರ ರೈತರನ್ನು ಒಳಗೊಂಡ 2000 ತಂಡಗಳು 700ಕ್ಕೂ ಜಿಲ್ಲೆಗಳಲ್ಲಿ ಪ್ರಯಾಣಿಸಲಿವೆ ಮತ್ತು ಹಳ್ಳಿಗಳಾದ್ಯಂತ ಲಕ್ಷಾಂತರ ರೈತರನ್ನು ತಲುಪಲಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಭಾರತದ ಕೃಷಿ ಕ್ಷೇತ್ರವನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿದ ಅವರು, ಈ ತಂಡಗಳಲ್ಲಿ ಭಾಗವಹಿಸುವ ಎಲ್ಲಾರೈತರಿಗೆ ಮತ್ತು ಭಾಗವಹಿಸುವವರಿಗೆ ಶುಭ ಕೋರಿದರು.2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
May 28th, 03:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ ಎಸ್ ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ.ಬಜೆಟ್ ನಂತರದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕುರಿತ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿಯವರ ಭಾಷಣ
March 01st, 01:00 pm
ಬಜೆಟ್ ನಂತರ, ಬಜೆಟ್-ಸಂಬಂಧಿತ ವೆಬಿನಾರ್ ನಲ್ಲಿ ನಿಮ್ಮೆಲ್ಲರ ಉಪಸ್ಥಿತಿ ಅತ್ಯಂತ ಮುಖ್ಯವಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು. ಈ ವರ್ಷದ ಆಯವ್ಯಯ ನಮ್ಮ ಸರ್ಕಾರದ ಮೂರನೇ ಅವಧಿಯ ಪ್ರಥಮ ಸಂಪೂರ್ಣ ಆಯವ್ಯಯವಾಗಿದೆ. ಈ ಆಯವ್ಯಯ ನಮ್ಮ ನೀತಿಗಳಲ್ಲಿನ ನಿರಂತರತೆಯನ್ನು ತೋರ್ಪಡಿಸುವುದಲ್ಲದೆ, ಅಭಿವೃದ್ಧಿ ಹೊಂದಿದ ಭಾರತದ ದೃಷ್ವಿಕೋನದಲ್ಲಿ ವಿನೂತನ ವಿಸ್ತರಣೆಯನ್ನು ಕೂಡಾ ತೋರಿಸುತ್ತದೆ. ಬಜೆಟ್ ಪೂರ್ವ ನಿಮ್ಮ ಎಲ್ಲ ಪಾಲುದಾರರು ನೀಡಿದ ಸಲಹೆ ಮತ್ತು ಸೂಚನೆಗಳು ಬಜೆಟ್ ಸಿದ್ಧಪಡಿಸುವಾಗ ತುಂಬಾ ಉಪಯುಕ್ತವಾದವು. ಈ ಆಯವ್ಯಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ, ಅಲ್ಲದೆ ಅತ್ಯುತ್ತಮ ಮತ್ತು ಶೀಘ್ರಗತಿಯ ಫಲಿತಾಂಶ ಪಡೆಯುವಲ್ಲಿ, ಎಲ್ಲಾ ನಿರ್ಧಾರಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಮತ್ತು ನೀತಿಗಳನ್ನು ಜಾರಿತರುವಲ್ಲಿ ನಿಮ್ಮ ಪಾತ್ರ ಮತ್ತಷ್ಟು ಮಹತ್ವ ಪಡೆದಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು
March 01st, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಬಜೆಟ್ ನಂತರದ ವೆಬಿನಾರ್ ನಲ್ಲಿ ಭಾಗವಹಿಸುವಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಪ್ರಧಾನಿಯವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಈ ವರ್ಷದ ಬಜೆಟ್ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಆಗಿದೆ, ಇದು ನೀತಿಗಳಲ್ಲಿ ನಿರಂತರತೆ ಮತ್ತು ವಿಕಸಿತ ಭಾರತದ ದೃಷ್ಟಿಯ ಹೊಸ ವಿಸ್ತರಣೆಯನ್ನು ಪ್ರತಿಬಿಂಬಿಸುತ್ತದೆ. ಬಜೆಟ್ ಗೆ ಮೊದಲು ಎಲ್ಲಾ ಭಾಗೀದಾರರಿಂದ ಪಡೆದ ಅಮೂಲ್ಯವಾದ ಒಳಹರಿವು ಮತ್ತು ಸಲಹೆಗಳನ್ನು ಅವರು ಶ್ಲಾಘಿಸಿದರು, ಅದು ತುಂಬಾ ಉಪಯುಕ್ತವಾಗಿದ್ದವು. ಈ ಬಜೆಟ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಲ್ಲಿ ಭಾಗೀದಾರರ ಪಾತ್ರವು ಹೆಚ್ಚು ಮಹತ್ವದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.2024-25ರ ಮಾರುಕಟ್ಟೆ ಹಂಗಾಮಿಗಾಗಿ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳಿಗೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
June 19th, 09:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2024-25ರ ಮಾರುಕಟ್ಟೆ ಹಂಗಾಮಿಗಾಗಿ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ ಎಸ್ ಪಿ) ಹೆಚ್ಚಿಸಲು ಅನುಮೋದಿಸಿತು.ಫಾಸ್ಫೇಟಿಕ್ ಮತ್ತು ಪೊಟ್ಯಾಸಿಯಮ್ (ಪಿ & ಕೆ) ರಸಗೊಬ್ಬರಗಳ ಮೇಲೆ ಖಾರಿಫ್ ಋತುವಿನಲ್ಲಿ, 2024 ಕ್ಕೆ (01.04.2024 ರಿಂದ 30.09.2024 ರವರೆಗೆ) ಪೋಷಕಾಂಶ ಆಧಾರಿತ ಸಬ್ಸಿಡಿ (ಎನ್‌ಬಿಎಸ್) ದರಗಳಿಗೆ ಸಂಪುಟದ ಅನುಮೋದನೆ ಮತ್ತು ಎನ್ಬಿಎಸ್ ಯೋಜನೆಯಡಿ 3 ಹೊಸ ರಸಗೊಬ್ಬರ ಶ್ರೇಣಿಗಳನ್ನು ಸೇರ್ಪಡೆಗೆ ಒಪ್ಪಿಗೆ
February 29th, 04:28 pm
ದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಬರಲಿರುವ ಮುಂಗಾರು ಋತುವಿಗೆ ಸೀಮಿತವಾಗಿ (01.04.2024 ರಿಂದ 30.09.2024 ರವರೆಗೆ) ಫಾಸ್ಫಟಿಕ್ ಮತ್ತು ಪೊಟ್ಯಾಸಿಯ ಗೊಬ್ಬರಗಳ ಮೇಲೆ ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ (NBS) ದರ ನಿಗದಿಪಡಿಸಲು ರಸಗೊಬ್ಬರ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿತು. ಇದರ ಜೊತೆಗೆ NBS ಯೋಜನೆಯಡಿಯಲ್ಲಿ ಮೂರು ಹೊಸ ರಸಗೊಬ್ಬರ ಶ್ರೇಣಿಗಳನ್ನು ಸೇರ್ಪಡೆ ಮಾಡಲು ಒಪ್ಪಿಗೆ ನೀಡಿತು.ಕನಿಷ್ಠ ಬೆಂಬಲ ಬೆಲೆಯ ಹೆಚ್ಚಳವನ್ನು ಸ್ವಾಗತಿಸಿದ ರೈತರು, ಅವರಿಗಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ
June 09th, 08:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರೈತರ ಸಂತೋಷವು ಹೊಸ ಹುರುಪಿನಿಂದ ಕೆಲಸ ಮಾಡಲು ಸರ್ಕಾರವನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.2023-24ರ ಮಾರ್ಕೆಟಿಂಗ್ ಸೀಸನ್ ಗಾಗಿ ಮುಂಗಾರು(ಖಾರಿಫ್) ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ.ಎಸ್.ಪಿ) ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ
June 07th, 05:35 pm
ರೈತರಿಗೆ(ಬೆಳೆಗಾರರಿಗೆ) ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಕೆಳಗಿನ ಕೋಷ್ಟಕದಲ್ಲಿ ಒದಗಿಸಿದಂತೆ ಬೆಳೆ ವೈವಿಧ್ಯತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು 2023-24 ರ ಮಾರುಕಟ್ಟೆಗಾಗಿ ಮುಂಗಾರು ಬೆಳೆಗಳ ಎಂ.ಎಸ್.ಪಿ. ಅನ್ನು ಹೆಚ್ಚಿಸಿದೆ:ಲಕ್ನೋದಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 10th, 11:01 am
ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜಿ ಮತ್ತು ಬ್ರಜೇಶ್ ಪಾಠಕ್ ಜಿ, ಕೇಂದ್ರ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜಿ, ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ ಭಾಗವಹಿಸಿರುವ ವಿವಿಧ ದೇಶಗಳ ಗಣ್ಯರು, ಉತ್ತರ ಪ್ರದೇಶದ ಎಲ್ಲಾ ಸಚಿವರು ಮತ್ತು ಉದ್ಯಮದ ಗೌರವಾನ್ವಿತ ಸದಸ್ಯರು, ಜಾಗತಿಕ ಹೂಡಿಕೆದಾರರು, ನೀತಿ ನಿರೂಪಕರು, ಕಾರ್ಪೊರೇಟ್ ವಲಯದ ದಿಗ್ಗಜರು, ಲಕ್ನೋ ಜನಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೆ!ಲಕ್ನೋದಲ್ಲಿ `ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ-2023ʼ ಉದ್ಘಾಟಿಸಿದ ಪ್ರಧಾನಿ
February 10th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ `ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ-2023ʼ ಅನ್ನು ಉದ್ಘಾಟಿಸಿದರು. ಇದೇ ಕಾರ್ಯಕ್ರಮದಲ್ಲಿ, ʻಜಾಗತಿಕ ವ್ಯಾಪಾರ ಮೇಳʼ ಮತ್ತು ʻಇನ್ವೆಸ್ಟ್ ಯುಪಿ-2.0ʼಗೆ ಸಹ ಅವರು ಚಾಲನೆ ನೀಡಿದರು. ʻಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ-2023ʼ ಉತ್ತರ ಪ್ರದೇಶ ಸರ್ಕಾರದ ಪ್ರಮುಖ ಹೂಡಿಕೆ ಶೃಂಗಸಭೆಯಾಗಿದ್ದು, ಇದು ವಿಶ್ವದ ನಾನಾ ಭಾಗಗಳ ನೀತಿ ನಿರೂಪಕರು, ಉದ್ಯಮ ನಾಯಕರು, ಶಿಕ್ಷಣ ತಜ್ಞರು, ಚಿಂತಕರು ಮತ್ತು ನಾಯಕರನ್ನು ಒಗ್ಗೂಡಿಸುತ್ತದೆ. ಪ್ರಧಾನಮಂತ್ರಿಯವರು ವಸ್ತುಪ್ರದರ್ಶನದ ಸಾಲುಗಳಲ್ಲೂ ಹೆಜ್ಜೆ ಹಾಕುವ ಮೂಲಕ ಅದರ ಸಂಕ್ಷಿಪ್ತ ನೋಟವನ್ನು ಪಡೆದುಕೊಂಡರು.CCEA approves Minimum Support Prices (MSP) for Kharif Crops for Marketing Season 2022-23
June 08th, 05:30 pm
CCEA chaired by PM Modi has approved increase in MSP for all mandated Kharif Crops for Marketing Season 2022-23. This has been done to ensure remunerative prices to the growers for their produce and to encourage crop persification.ವಿಜ್ಞಾನ, ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶ ಉತ್ತಮವಾಗಿರುತ್ತದೆ: ಪ್ರಧಾನಿ ಮೋದಿ
September 28th, 11:01 am
ಪಿಎಂ ನರೇಂದ್ರ ಮೋದಿ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕಳೆದ 6-7 ವರ್ಷಗಳಲ್ಲಿ ಕೃಷಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಆದ್ಯತೆಯ ಮೇಲೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
September 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಯ್ಪುರದ ರಾಷ್ಟ್ರೀಯ ಜೈವಿಕ ಒತ್ತಡ ನಿರ್ವಹಣಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಕೃಷಿ ವಿಶ್ವವಿದ್ಯಾಲಯಗಳಿಗೆ ಹಸಿರು ಕ್ಯಾಂಪಸ್ ಪ್ರಶಸ್ತಿಗಳನ್ನು ಪ್ರದಾನಮಾಡಿದರು. ಅವರು ನಾವೀನ್ಯಪೂರ್ಣ ವಿಧಾನಗಳೊಂದಿಗೆ ಕೃಷಿ ಮಾಡುತ್ತಿರುವ ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.