ರಾಷ್ಟ್ರೀಯ ಕ್ರೀಡಾ ದಿನದಂದು ಬಿಹಾರದ ರಾಜ್ ಗಿರ್‌ ನಲ್ಲಿ ಪುರುಷರ ಹಾಕಿ ಏಷ್ಯಾ ಕಪ್ 2025 ಆರಂಭ – ಪ್ರಧಾನಮಂತ್ರಿ ಅವರಿಂದ ಶುಭ ಹಾರೈಕೆ

August 28th, 09:33 pm

ಬಿಹಾರದ ಐತಿಹಾಸಿಕ ನಗರಿ ರಾಜ್‌ ಗಿರ್ ನಲ್ಲಿ ನಾಳೆ, ಆಗಸ್ಟ್ 29ರಂದು ಪುರುಷರ ಹಾಕಿ ಏಷ್ಯಾಕಪ್ 2025 ಪ್ರಾರಂಭವಾಗಲಿದ್ದು, ಏಷ್ಯಾದಾದ್ಯಂತ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ತಂಡಗಳು, ಆಟಗಾರರು, ಅಧಿಕಾರಿಗಳು ಮತ್ತು ಬೆಂಬಲಿಗರಿಗೆ ಕ್ರೀಡಾಕೂಟ ಆರಂಭವಾಗುವ ರಾಷ್ಟ್ರೀಯ ಕ್ರೀಡಾ ದಿನದ ಮುನ್ನಾ ದಿನವಾದ ಇಂದು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕವಾಗಿ ಶುಭ ಕೋರಿದ್ದಾರೆ. ಬಿಹಾರವು ಇತ್ತೀಚಿನ ದಿನಗಳಲ್ಲಿ ಖೇಲೋ ಇಂಡಿಯಾ ಯುವ ಕ್ರೀಡಾಕೂಟ 2025, ಏಷ್ಯಾ ರಗ್ಬಿ U20 ಸೆವೆನ್ಸ್ ಚಾಂಪಿಯನ್ಶಿಪ್ 2025, ISTAF ಸೆಪಕ್ ಟಕ್ರಾ ವಿಶ್ವಕಪ್ 2024 ಮತ್ತು ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ನಂತಹ ಪ್ರಮುಖ ಪಂದ್ಯಾವಳಿಗಳನ್ನು ಆಯೋಜಿಸುತ್ತಾ ರೋಮಾಂಚಕ ಕ್ರೀಡಾ ಕೇಂದ್ರವಾಗಿ ಗುರುತಿಸಿಕೊಂಡಿದೆ ಎಂದು ಶ್ರೀ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

7ನೇ ಖೇಲೋ ಇಂಡಿಯಾ ಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಭಾಷಣ

May 04th, 08:16 pm

ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನ್ಸುಖ್ ಭಾಯ್, ಸಹೋದರಿ ರಕ್ಷಾ ಖಾಡ್ಸೆ ಮತ್ತು ಶ್ರೀ ರಾಮ್ ನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಇಲ್ಲಿ ಹಾಜರಿರುವ ಗಣ್ಯ ಅತಿಥಿಗಳೆ, ಎಲ್ಲಾ ಆಟಗಾರರೆ, ತರಬೇತುದಾರರೆ, ಇತರೆ ಸಿಬ್ಬಂದಿ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ!

7ನೇ ಖೇಲೋ ಇಂಡಿಯಾ ಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 04th, 08:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 7ನೇ ಖೇಲೋ ಇಂಡಿಯಾ ಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಿಬ್ಬಂದಿ ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತದ ಕ್ರೀಡಾಪಟಗಳು ಇಲ್ಲಿ ನೆರೆದಿದ್ದು, ಅಸಾಧಾರಣ ಪ್ರತಿಭೆ ಮತ್ತು ದೃಢಸಂಕಲ್ಪವನ್ನು ಪ್ರದರ್ಶಿಸಲಿದ್ದಾರೆ, ಅವರು ತಮ್ಮ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ತೋರಿಸಲಿದ್ದಾರೆ. ರಾಷ್ಟ್ರದ ಕ್ರೀಡಾ ಮನೋಭಾವಕ್ಕೆ ಅವರ ಕೊಡುಗೆ ಶ್ಲಾಘಿಸಿದ ಪ್ರಧಾನಿ, ಕ್ರೀಡಾಪಟುಗಳ ಗಮನಾರ್ಹ ಕೌಶಲ್ಯ ಮತ್ತು ಬದ್ಧತೆ ಅತ್ಯಗತ್ಯ. ಅವರ ಕ್ರೀಡೆಯ ಮೇಲಿನ ಉತ್ಸಾಹ ಮತ್ತು ಶ್ರೇಷ್ಠತೆಯ ನಿರಂತರ ಅನ್ವೇಷಣೆ ರಾಷ್ಟ್ರಕ್ಕೆ ಹೆಮ್ಮೆ ತರುತ್ತದೆ ಎಂದರಲ್ಲದೆ, ಕ್ರೀಡಾಪಟುಗಳ ಭವಿಷ್ಯದ ಎಲ್ಲ ಪ್ರಯತ್ನಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.

The National Games are a celebration of India's incredible sporting talent: PM Modi in Dehradun

January 28th, 09:36 pm

PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು

January 28th, 09:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರಾಖಂಡ ಇಂದು ಯುವಜನರ ಶಕ್ತಿಯಿಂದ ಬೆಳಗುತ್ತಿದೆ ಎಂದರು. ಬಾಬಾ ಕೇದಾರನಾಥ, ಬದರೀನಾಥ ಮತ್ತು ಗಂಗಾ ಮಾತೆಯ ಆಶೀರ್ವಾದದಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟ ಇಂದು ಆರಂಭವಾಗುತ್ತಿದೆ ಎಂದರು. ಇದು ಉತ್ತರಾಖಂಡದ ರಚನೆಯ 25ನೇ ವರ್ಷವಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದಾದ್ಯಂತದ ಯುವಕರು ಈ ಯುವ ರಾಜ್ಯದಲ್ಲಿ ತಮ್ಮ ಸಾಮರ್ಥ್ಯ‌ವನ್ನು ಪ್ರದರ್ಶಿಸಲಿದ್ದಾರೆ ಎಂದರು. ಈ ಕಾರ್ಯಕ್ರಮವು ‘ಏಕ್‌ ಭಾರತ್‌, ಶ್ರೇಷ್ಠ ಭಾರತ್‌’ ನ ಸುಂದರವಾದ ಚಿತ್ರವನ್ನು ಪ್ರದರ್ಶಿಸಿತು ಎಂದು ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾಕೂಟದ ಈ ಆವೃತ್ತಿಯಲ್ಲಿಅನೇಕ ಸ್ಥಳೀಯ ಆಟಗಳನ್ನು ಸೇರಿಸಲಾಗಿದೆ ಮತ್ತು ಪರಿಸರ ಸ್ನೇಹಿ ವಸ್ತುಗಳ ಬಳಕೆ ಇರುವುದರಿಂದ ‘ಗ್ರೀನ್‌ ಗೇಮ್ಸ್’(ಹಸಿರು ಕ್ರೀಡಾಕೂಟ) ಘೋಷವಾಕ್ಯವಾಗಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ ಅವರು, ಟ್ರೋಫಿಗಳು ಮತ್ತು ಪದಕಗಳನ್ನು ಸಹ ಇ-ತ್ಯಾಜ್ಯದಿಂದ ತಯಾರಿಸಲಾಗಿದೆ ಮತ್ತು ಪ್ರತಿ ಪದಕ ವಿಜೇತರ ಹೆಸರಿನಲ್ಲಿಒಂದು ಮರವನ್ನು ನೆಡಲಾಗುವುದು, ಇದು ಉತ್ತಮ ಉಪಕ್ರಮವಾಗಿದೆ ಎಂದು ಅವರು ಹೇಳಿದರು. ಉತ್ತಮ ಪ್ರದರ್ಶನಕ್ಕಾಗಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇಂತಹ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರ ಮತ್ತು ಜನರನ್ನು ಅವರು ಅಭಿನಂದಿಸಿದರು.

ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ

January 28th, 11:30 am

ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.

ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 19th, 06:33 pm

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.

ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು

January 19th, 06:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.