ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 13th, 03:00 pm
ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್‌ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಅಸ್ಸಾಂನ ಕೊಕ್ರಝಾರ್‌ನಲ್ಲಿ ₹4,570 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 13th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿಕೂಲ ಹವಾಮಾನದಿಂದಾಗಿ ಕೊಕ್ರಝಾರ್‌ಗೆ ಭೇಟಿ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ನೆರೆದಿದ್ದ ನಾಗರಿಕರಿಗೆ ಕ್ಷಮೆಯಾಚಿಸಿದರು. ಗುವಾಹಟಿಯಿಂದ ಮಾತನಾಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಬೋಡೋಫಾ ಉಪೇಂದ್ರನಾಥ ಬ್ರಹ್ಮ ಮತ್ತು ರೂಪನಾಥ್ ಬ್ರಹ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ನಾನು ನಮಿಸುತ್ತೇನೆ ಎಂದು ಶ್ರೀ ಮೋದಿ ತಿಳಿಸಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನನ್ನ ಮೇಲಿನ ಋಣವಾಗಿದೆ, ಅದನ್ನು ಸಮರ್ಪಿತ ಸೇವೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಮೂಲಕ ಮರುಪಾವತಿಸುತ್ತೇನೆ ಎಂದು ಹೇಳಿದರು. ನಿಮಗೆ ಸೇವೆ ಸಲ್ಲಿಸುವ ಮೂಲಕ ಮತ್ತು ಈ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಈ ಋಣವನ್ನು ತೀರಿಸುವುದು ನನ್ನ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ದೃಢಪಡಿಸಿದರು.ಮಾರ್ಚ್ 13-14 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ
March 12th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 13-14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಕೊಕ್ರಝಾರ್, ಗುವಾಹಟಿ ಮತ್ತು ಸಿಲ್ಚಾರ್‌ನಲ್ಲಿ ₹47,800 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಾರೆ, ರಾಷ್ಟ್ರಕ್ಕೆ ಸಮರ್ಪಿಸುತ್ತಾರೆ, ಶಿಲಾನ್ಯಾಸ ಮಾಡುತ್ತಾರೆ, ಹಾಗು ಭೂಮಿ ಪೂಜೆ ಮಾಡುತ್ತಾರೆ ಮತ್ತು ಹಸಿರು ನಿಶಾನೆ ತೋರಲಿದ್ದಾರೆ. .ಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 17th, 06:30 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
January 17th, 06:00 pm
ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ಕೇಂದ್ರ ಮತ್ತು ಅಸ್ಸಾಂನ ಎನ್.ಡಿ.ಎ. ಸರ್ಕಾರಗಳು ಬೋಡೋ ಸಮುದಾಯವನ್ನು ಸಬಲೀಕರಣಗೊಳಿಸಲು ಮತ್ತು ಬೋಡೋ ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸಲು ಅವಿರತವಾಗಿ ಶ್ರಮಿಸುತ್ತಿವೆ, ಈ ಕಾರ್ಯಗಳು ಇನ್ನೂ ಹೆಚ್ಚಿನ ಹುರುಪಿನೊಂದಿಗೆ ಮುಂದುವರಿಯುತ್ತವೆ: ಪ್ರಧಾನಮಂತ್ರಿ
February 15th, 04:08 pm
ಫೆಬ್ರವರಿ 17, 2025 ರಂದು ಕೊಕ್ರಜಾರ್ ನಲ್ಲಿ ನಡೆಯಲಿರುವ ಐತಿಹಾಸಿಕ ಒಂದು ದಿನದ ವಿಶೇಷ ಅಸೆಂಬ್ಲಿ ಅಧಿವೇಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.Track all updates from PM Modi's programmes in Kokrajhar, Assam
February 07th, 10:16 am
In Kokrajhar, Assam, PM Narendra Modi will address a gathering to hail the historic Bodo Agreement signed in January this year.PM strongly condemns attack in Kokrajhar
August 05th, 06:15 pm
PM Narendra Modi strongly condemned the attack in Kokrajhar, Assam. The PM said he was saddened by the attack and extended his condolences to the families of the deceased. He also said that Home Ministry was in constant touch with State Govt to monitor the situation.Our focus is all-round development of India & North east cannot stay behind in this journey: PM Modi
January 19th, 01:49 pm
Prime Minister Modi addresses public meetings in Kokrajhar and Guwahati
January 19th, 01:48 pm