ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 03:30 pm
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಸಿ.ವಿ.ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೊವಾಲ್ ಜೀ, ಸುಕಾಂತ ಮಜುಂದಾರ್ ಜೀ, ಶಂತನು ಠಾಕೂರ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಸೌಮಿಕ್ ಭಟ್ಟಾಚಾರ್ಯ ಜೀ, ಸೌಮಿತ್ರಾ ಖಾನ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ!ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ, ಶಂಕುಸ್ಥಾಪನೆ ನೆರವೇರಿಸಿದ ಮತ್ತು ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 18th, 03:00 pm
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಹಲವು ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ನಿನ್ನೆ ತಾನು ಮಾಲ್ಡಾದಲ್ಲಿದ್ದೆ ಮತ್ತು ಇಂದು ಹೂಗ್ಲಿಯ ಜನರ ನಡುವೆ ಇರುವ ಭಾಗ್ಯ ನನಗೆ ಲಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಪೂರ್ವ ಭಾರತದ ಅಭಿವೃದ್ಧಿ ಅತ್ಯಗತ್ಯ ಎಂದು ಪ್ರತಿಪಾದಿಸಿದ ಅವರು, ಇದೇ ಗುರಿಯೊಂದಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಒತ್ತಿ ಹೇಳಿದರು. ನಿನ್ನೆಯ ಮತ್ತು ಇಂದಿನ ಕಾರ್ಯಕ್ರಮಗಳು ಈ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅವರು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವ ಮತ್ತು ಉದ್ಘಾಟಿಸುವ ಅವಕಾಶ ಈ ಅವಧಿಯಲ್ಲಿ ತಮಗೆ ದೊರೆತಿದೆ ಎಂದು ಪ್ರಧಾನಮಂತ್ರಿಯವರು ಇದೇ ವೇಳೆ ಉಲ್ಲೇಖಿಸಿದರು.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.Kolkata port represents industrial, spiritual and self-sufficiency aspirations of India: PM
January 12th, 11:18 am
At a programme to mark 150 years of the Kolkata Port Trust, PM Modi renamed it after Shyama Prasad Mookerjee. Mentioning that Haldia and Varanasi have now been connected through waterways, the PM spoke about how the country was greatly benefitting from inland waterways.ಕೋಲ್ಕತ್ತಾ ಬಂದರು ಟ್ರಸ್ಟ್ ನ 150ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ, ಕೋಲ್ಕತ್ತಾ ಬಂದರಿನ ಬಹು ಮಾದರಿ ಅಭಿವೃದ್ಧಿ ಯೋಜನೆಗೆ ಚಾಲನೆ
January 12th, 11:17 am
ಪ್ರಧಾನಮಂತ್ರಿ ಮೂಲ ಬಂದರು ಜಟ್ಟಿಯ ನೆಲೆಯಲ್ಲಿ ಕೋಲ್ಕತ್ತಾ ಬಂದರು ಟ್ರಸ್ಟ್ (ಕೆಓಪಿಟಿ)ಯ 150ನೇ ವರ್ಷದ ಸ್ಮರಣಾರ್ಥ ಫಲಕ ಅನಾವರಣ ಮಾಡಿದರು.