ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 22nd, 05:15 pm
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ. ಆನಂದ್ ಬೋಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶಾಂತನು ಠಾಕೂರ್ ಜಿ, ರವನೀತ್ ಸಿಂಗ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಶುವೇಂದು ಅಧಿಕಾರಿ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಶೋಮಿಕ್ ಭಟ್ಟಾಚಾರ್ಯ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಂಕುಸ್ಥಾಪನೆ ಮತ್ತು ಉದ್ಘಾಟನೆ
August 22nd, 05:00 pm
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹5,200 ಕೋಟಿಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಮತ್ತೊಮ್ಮೆ ವೇಗ ನೀಡುವ ಅವಕಾಶ ದೊರೆತಿದೆ ಎಂದು ಹೇಳಿದರು. ನೋವಾಪಾರಾದಿಂದ ಜೈ ಹಿಂದ್ ವಿಮಾನ ನಿಲ್ದಾಣದವರೆಗಿನ ಕೋಲ್ಕತ್ತಾ ಮೆಟ್ರೋ ಪ್ರಯಾಣದ ತಮ್ಮ ಅನುಭವವನ್ನು ಹಂಚಿಕೊಂಡ ಶ್ರೀ ಮೋದಿ ಅವರು, ಈ ಭೇಟಿಯ ಸಮಯದಲ್ಲಿ ಅನೇಕ ಜನರೊಂದಿಗೆ ಸಂವಾದ ನಡೆಸಿದ್ದಾಗಿ ಮತ್ತು ಕೋಲ್ಕತ್ತಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಆಧುನೀಕರಣದ ಬಗ್ಗೆ ಪ್ರತಿಯೊಬ್ಬರೂ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಪ್ರಧಾನಮಂತ್ರಿ ಅವರು ಆರು-ಪಥಗಳ ಕಮರಿ ಕೋನಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆಯನ್ನು ಸಹ ನೆರವೇರಿಸಿದರು. ಈ ಬಹು-ಸಾವಿರ ಕೋಟಿ ರೂಪಾಯಿಗಳ ಯೋಜನೆಗಳಿಗಾಗಿ ಅವರು ಕೋಲ್ಕತ್ತಾದ ಜನರಿಗೆ ಮತ್ತು ಪಶ್ಚಿಮ ಬಂಗಾಳದ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.