ಜಿ7 ಶೃಂಗಸಭೆಯ ಸಂದರ್ಭದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 18th, 03:17 pm

ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಲೀ ಜೇ-ಮ್ಯುಂಗ್ ಅವರನ್ನು ಭೇಟಿಯಾದರು. ವಾಣಿಜ್ಯ, ಹೂಡಿಕೆ, ತಂತ್ರಜ್ಞಾನ, ಹಸಿರು ಹೈಡ್ರೋಜನ್, ಹಡಗು ನಿರ್ಮಾಣ ಮತ್ತು ಇತರ ಕ್ಷೇತ್ರಗಳಲ್ಲಿ ಭಾರತ ಮತ್ತು ಕೊರಿಯಾ ಗಣರಾಜ್ಯ ಒಟ್ಟಾಗಿ ಕೆಲಸ ಮಾಡಲು ಬಯಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಲೀ ಜೇ-ಮ್ಯುಂಗ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

June 04th, 08:38 am

ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಲೀ ಜೇ-ಮ್ಯುಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಭಾರತ ಮತ್ತು ಕೊರಿಯಾ ಗಣರಾಜ್ಯದ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ವರ್ಷ ತುಂಬಿದ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

December 10th, 12:23 pm

ಭಾರತ ಮತ್ತು ಕೊರಿಯಾ ಗಣರಾಜ್ಯದ ನಡುವಿನ ರಾಜತಾಂತ್ರಿಕ ಬಾಂಧವ್ಯವನ್ನು ಸ್ಥಾಪಿಸಿ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷ ಶ್ರೀ ಯೂನ್ ಸುಕ್ ಯೆಯೋಲ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಪರಸ್ಪರ ಗೌರವ, ಹಂಚಿಕೆಯ ಮೌಲ್ಯಗಳು ಮತ್ತು ಬೆಳೆಯುತ್ತಿರುವ ಪಾಲುದಾರಿಕೆಗಳ ಸಯೋಗದ ಪ್ರಯಾಣವನ್ನು ಒತ್ತಿಹೇಳುತ್ತಾ, ವಿಶೇಷ ಕಾರ್ಯತಂತ್ರದ ಸಹಭಾಗಿತ್ವವನ್ನು ಆಳಗೊಳಿಸಲು ಮತ್ತು ವಿಸ್ತರಿಸಲು ಶ್ರೀ ಯೂನ್ ಸುಕ್ ಯೋಲ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಅವಕಾಶವನ್ನು ಪ್ರಧಾನಮಂತ್ರಿಯವರು ಎದುರು ನೋಡುತ್ತಿದ್ದಾರೆ.