ಶ್ರೀ ಕೋಟಾ ಶ್ರೀನಿವಾಸ್ ರಾವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
July 13th, 03:55 pm
ಶ್ರೀ ಕೋಟಾ ಶ್ರೀನಿವಾಸ ರಾವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಕೋಟಾ ಶ್ರೀನಿವಾಸ ರಾವ್ ತಮ್ಮ ಸಿನಿಮಾ ಶ್ರೇಷ್ಠತೆ ಮತ್ತು ಬಹುಮುಖ ಪ್ರತಿಭೆಯಿಂದ ಸದಾ ಜನಮಾನಸದಲ್ಲಿ ಉಳಿಯಲಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಅದ್ಭುತ ಪ್ರದರ್ಶನದ ಮೂಲಕ ಹಲವು ತಲೆಮಾರುಗಳ ಪ್ರೇಕ್ಷಕರನ್ನು ಮೋಡಿ ಮಾಡಿರುವ ಅವರು, ಸಾಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದ್ದರು ಹಾಗೂ ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಶ್ರಮಿಸಿದ್ದರು ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ.