ಕೇರಳಂನ ಎರ್ನಾಕುಲಂನಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 11th, 02:00 pm
ಕೊಚ್ಚಿಗೆ ಬರುವುದು ಯಾವಾಗಲೂ ಅದ್ಭುತ ಅನುಭವ ನೀಡುತ್ತದೆ. ಇಂದು ಈ ರೋಮಾಂಚಕ ಕರಾವಳಿ ನಗರದಿಂದ, ಕೇರಳಂ ಅಭಿವೃದ್ಧಿಯನ್ನು ಮತ್ತಷ್ಟು ವೇಗಗೊಳಿಸಲು ನನಗೆ ಅವಕಾಶ ಸಿಕ್ಕಿದೆ. ಸ್ವಲ್ಪ ಸಮಯದ ಹಿಂದೆ, ಕೇರಳದ ಅಭಿವೃದ್ಧಿಗೆ ಸಂಬಂಧಿಸಿದ ಸುಮಾರು 11 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಾಯಿತು ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಎಲ್ಲಾ ಯೋಜನೆಗಳಿಗಾಗಿ ಕೇರಳದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳಂನ ಎರ್ನಾಕುಲಂನಲ್ಲಿ ಸುಮಾರು 11,000 ಕೋಟಿ ರೂ.ಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
March 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅತ್ಯಂತ ಚಟುವಟಿಕೆಯಿಂದ ಕೂಡಿದ ಕರಾವಳಿ ನಗರವಾದ ಕೊಚ್ಚಿಗೆ ಭೇಟಿ ನೀಡಿ, ಕೇರಳಂನ ಅಭಿವೃದ್ಧಿಗೆ ವೇಗ ನೀಡುವ ಅನೇಕ ಅಧಿಕ ಪರಿಣಾಮದ ಯೋಜನೆಗಳನ್ನು ಪ್ರಾರಂಭಿಸಿದರು. ಈ ವೇಳೆ, ಹೂಡಿಕೆಯ ಪ್ರಮಾಣವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಸುಮಾರು 11,000 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕೊಚ್ಚಿಗೆ ಬರುವುದು ಸದಾ ತಮ್ಮ ಪಾಲಿಗೆ ಅದ್ಭುತ ಅನುಭವ ಎಂದು ಹೇಳಿದರು. ಈ ಯೋಜನೆಗಳಿಗಾಗಿ ನಾನು ಕೇರಳಂ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಎಂದು ಪ್ರಧಾನಮಂತ್ರಿ ಹೇಳಿದರು.ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಪ್ರಧಾನಮಂತ್ರಿ ಭೇಟಿ
March 09th, 09:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ, ಪ್ರಧಾನ ಮಂತ್ರಿಗಳು ಕೇರಳದ ಎರ್ನಾಕುಲಂನಲ್ಲಿ ಸುಮಾರು ₹10,800 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸುತ್ತಾರೆ ಮತ್ತು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಸಂಜೆ 5:45ರ ಸುಮಾರಿಗೆ, ಪ್ರಧಾನಮಂತ್ರಿಗಳು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.