ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 12th, 04:54 pm
ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
September 12th, 04:45 pm
ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ರಿಪಬ್ಲಿಕ್ ಸರ್ವಸದಸ್ಯರ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 06th, 08:05 pm
ನೀವೆಲ್ಲರೂ ದಣಿದಿರಬೇಕು, ಅರ್ನಬ್ ಅವರ ಗಟ್ಟಿಯಾದ ಧ್ವನಿಯಿಂದ ನಿಮ್ಮ ಕಿವಿಗಳು ದಣಿದಿರಬೇಕು, ಅರ್ನಬ್ ಕುಳಿತುಕೊಳ್ಳಿ, ಇದು ಚುನಾವಣಾ ಸಮಯವಲ್ಲ. ಮೊದಲನೆಯದಾಗಿ, ಈ ನವೀನ ಪ್ರಯೋಗಕ್ಕಾಗಿ ನಾನು ರಿಪಬ್ಲಿಕ್ ಟಿವಿಯನ್ನು ಅಭಿನಂದಿಸುತ್ತೇನೆ. ನೀವು ಯುವಕರನ್ನು ತಳಮಟ್ಟದಲ್ಲಿ ತೊಡಗಿಸಿಕೊಳ್ಳುವ ಮೂಲಕ, ಇಷ್ಟು ದೊಡ್ಡ ಸ್ಪರ್ಧೆ ಆಯೋಜಿಸಿ ಇಲ್ಲಿಗೆ ಕರೆತಂದಿದ್ದೀರಿ. ದೇಶದ ಯುವಕರು ರಾಷ್ಟ್ರೀಯ ಚರ್ಚೆಯಲ್ಲಿ ತೊಡಗಿಸಿಕೊಂಡಾಗ, ಆಲೋಚನೆಗಳಲ್ಲಿ ಹೊಸತನ ಇರುತ್ತದೆ, ಅದು ಇಡೀ ಪರಿಸರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ, ಈ ಸಮಯದಲ್ಲಿ ನಾವು ಈ ಹೊಸ ಶಕ್ತಿಯನ್ನು ಅನುಭವಿಸುತ್ತಿದ್ದೇವೆ. ಒಂದು ರೀತಿಯಲ್ಲಿ, ಯುವಕರ ಒಳಗೊಳ್ಳುವಿಕೆಯಿಂದ, ನಾವು ಪ್ರತಿಯೊಂದು ಬಂಧವನ್ನು ಮುರಿಯಲು, ಮಿತಿಗಳನ್ನು ಮೀರಿ ಹೋಗಲು ಸಾಧ್ಯವಾಗುತ್ತದೆ, ಆದರೆ ಸಾಧಿಸಲಾಗದ ಗುರಿ ಇಲ್ಲ. ತಲುಪಲಾಗದ ಯಾವುದೇ ಗಮ್ಯಸ್ಥಾನವಿಲ್ಲ. ಈ ಸಮಾವೇಶ(ಶೃಂಗಸಭೆ)ಕ್ಕಾಗಿ ರಿಪಬ್ಲಿಕ್ ಟಿವಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದೆ. ಈ ಶೃಂಗಸಭೆಯ ಯಶಸ್ಸಿಗೆ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಸರಿ, ಇದರಲ್ಲಿ ನನ್ನದೂ ಸ್ವಲ್ಪ ಸ್ವಾರ್ಥವಿದೆ, ಒಂದು, ಕಳೆದ ಕೆಲವು ದಿನಗಳಿಂದ ನಾನು 1 ಲಕ್ಷ ಯುವಕರನ್ನು ರಾಜಕೀಯಕ್ಕೆ ತರಬೇಕು, 1 ಲಕ್ಷ ಜನರು ತಮ್ಮ ಕುಟುಂಬಗಳಲ್ಲಿ ಮೊದಲ ಬಾರಿಗೆ ರಾಜಕೀಯಕ್ಕೆ ಬರುವವರು ಎಂದು ಯೋಚಿಸುತ್ತಿದ್ದೇನೆ, ಆದ್ದರಿಂದ ಒಂದು ರೀತಿಯಲ್ಲಿ, ಇಂತಹ ಘಟನೆಗಳು ನನ್ನ ಈ ಗುರಿಗೆ ವೇದಿಕೆಯನ್ನು ಸಿದ್ಧಪಡಿಸುತ್ತಿವೆ. ಎರಡನೆಯದಾಗಿ, ನನ್ನ ವೈಯಕ್ತಿಕ ಲಾಭವಿದೆ, ವೈಯಕ್ತಿಕ ಲಾಭವೆಂದರೆ 2029ರಲ್ಲಿ ಮತ ಚಲಾಯಿಸಲು ಹೋಗುವವರಿಗೆ 2014ಕ್ಕಿಂತ ಮೊದಲು ಪತ್ರಿಕೆಗಳ ಮುಖ್ಯಾಂಶಗಳು ಏನೆಂದು ತಿಳಿದಿರುವುದಿಲ್ಲ, ಅವರಿಗೆ ತಿಳಿದಿಲ್ಲ, 10-10, 12-12 ಲಕ್ಷ ಕೋಟಿ ಹಗರಣಗಳು ಇದ್ದವು, ಅದು ಅವರಿಗೆ ತಿಳಿದಿಲ್ಲ. ಆದರೆ ಅವರು 2029ರಲ್ಲಿ ಮತ ಚಲಾಯಿಸಲು ಹೋಗುವಾಗ, ಹೋಲಿಕೆ ಮಾಡಲು ಅವರ ಮುಂದೆ ಏನೂ ಇರುವುದಿಲ್ಲ. ಆದ್ದರಿಂದ, ನಾನು ಆ ಪರೀಕ್ಷೆಯಲ್ಲಿ ಉತ್ತೀರ್ಣನಾಗಬೇಕು ಮತ್ತು ಈ ವೇದಿಕೆಯು ಆ ಕೆಲಸವನ್ನು ಬಲಪಡಿಸುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಸಮಗ್ರ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
March 06th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಡಪಂನಲ್ಲಿ ನಡೆದ ರಿಪಬ್ಲಿಕ್ ಪ್ಲೀನರಿ ಶೃಂಗಸಭೆ 2025ರಲ್ಲಿ ಭಾಗವಹಿಸಿದ್ದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ತಳಮಟ್ಟದಲ್ಲಿ ಯುವಕರನ್ನು ತೊಡಗಿಸಿಕೊಳ್ಳುವ ಮತ್ತು ಮಹತ್ವದ ಹ್ಯಾಕಥಾನ್ ಸ್ಪರ್ಧೆಯನ್ನು ಆಯೋಜಿಸುವ ನವೀನ ವಿಧಾನಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅಭಿನಂದಿಸಿದರು. ರಾಷ್ಟ್ರದ ಯುವಕರು ರಾಷ್ಟ್ರೀಯ ಸಂವಾದದಲ್ಲಿ ತೊಡಗಿಸಿಕೊಂಡಾಗ, ಅದು ಆಲೋಚನೆಗಳಿಗೆ ಹೊಸತನವನ್ನು ತರುತ್ತದೆ ಮತ್ತು ಅವರ ಶಕ್ತಿಯಿಂದ ಇಡೀ ಪರಿಸರವನ್ನು ತುಂಬುತ್ತದೆ ಎಂದು ಅವರು ಹೇಳಿದರು. ಈ ಶಕ್ತಿಯನ್ನು ಶೃಂಗಸಭೆಯಲ್ಲಿ ಅನುಭವಿಸಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು. ಯುವಕರ ಪಾಲ್ಗೊಳ್ಳುವಿಕೆಯು ಎಲ್ಲಾ ಅಡೆತಡೆಗಳನ್ನು ಮುರಿಯಲು ಮತ್ತು ಗಡಿಗಳನ್ನು ಮೀರಿ ಹೋಗಲು ಸಹಾಯ ಮಾಡುತ್ತದೆ, ಪ್ರತಿ ಗುರಿಯನ್ನು ಸಾಧಿಸಬಹುದು ಮತ್ತು ಪ್ರತಿ ಗಮ್ಯಸ್ಥಾನವನ್ನು ತಲುಪಬಹುದು ಎಂದು ಅವರು ಹೇಳಿದರು. ಈ ಶೃಂಗಸಭೆಗಾಗಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದ್ದಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅವರು ಶ್ಲಾಘಿಸಿದರು ಮತ್ತು ಅದರ ಯಶಸ್ಸಿಗೆ ಶುಭ ಹಾರೈಸಿದರು. ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ಭಾರತದ ರಾಜಕೀಯಕ್ಕೆ ಕರೆತರುವ ತಮ್ಮ ಕಲ್ಪನೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.Politics is about winning people's hearts, says PM Modi in podcast with Nikhil Kamath
January 10th, 02:15 pm
Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು
January 10th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.ಕುವೈತ್ ಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ (ಡಿಸೆಂಬರ್ 21-22, 2024): ಜಂಟಿ ಹೇಳಿಕೆ
December 22nd, 07:46 pm
ಕುವೈತ್ ದೇಶದ ದೊರೆ (ಅಮೀರ್) ಘನತೆವೆತ್ತ ಶೇಖ್ ಮೆಶಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21-22 ಡಿಸೆಂಬರ್ 2024 ರಂದು ಕುವೈಟ್ ಗೆ ಅಧಿಕೃತ ಭೇಟಿ ನೀಡಿದರು. ಕುವೈತ್ ಗೆ ಅವರ ಮೊದಲ ಭೇಟಿಯಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21 ಡಿಸೆಂಬರ್ 2024 ರಂದು ಅಮೀರ್ ಶೇಖ್ ಮೆಶಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಗೌರವಾನ್ವಿತ ಅತಿಥಿಯಾಗಿ ಕುವೈತ್ ನಲ್ಲಿ ನಡೆದ 26ನೇ ಅರೇಬಿಯನ್ ಗಲ್ಫ್ ಕಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.ಕುವೈತ್ ನ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
December 22nd, 06:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್ ರಾಷ್ಟ್ರದ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರೊಂದಿಗೆ ಮಾತುಕತೆ ನಡೆಸಿದರು.ಪ್ರಧಾನಮಂತ್ರಿಯವರ ಕುವೈತ್ ಭೇಟಿಯ ಫಲಿತಾಂಶಗಳ ಪಟ್ಟಿ (ಡಿಸೆಂಬರ್ 21-22, 2024)
December 22nd, 06:03 pm
ಈ ತಿಳುವಳಿಕೆ ಒಪ್ಪಂದವು ರಕ್ಷಣಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರವನ್ನು ಸಾಂಸ್ಥಿಕಗೊಳಿಸುತ್ತದೆ. ಸಹಕಾರದ ಪ್ರಮುಖ ಕ್ಷೇತ್ರಗಳು ತರಬೇತಿ, ಸಿಬ್ಬಂದಿ ಮತ್ತು ತಜ್ಞರ ವಿನಿಮಯ, ಜಂಟಿ ಅಭ್ಯಾಸಗಳು, ರಕ್ಷಣಾ ಉದ್ಯಮದಲ್ಲಿ ಸಹಕಾರ, ರಕ್ಷಣಾ ಸಾಧನಗಳ ಪೂರೈಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಸಹಯೋಗವನ್ನು ಒಳಗೊಂಡಿವೆ.ಕುವೈತ್ ರಾಜಕುಮಾರನನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
December 22nd, 05:32 pm
ಕುವೈತ್ ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳಿಗೆ ಭಾರತ ಅತ್ಯಂತ ಮಹತ್ವ ನೀಡುವುದಾಗಿ ಪ್ರಧಾನಿಯವರು ತಿಳಿಸಿದರು. ದ್ವಿಪಕ್ಷೀಯ ಸಂಬಂಧಗಳು ಉತ್ತಮವಾಗಿ ಪ್ರಗತಿ ಸಾಧಿಸುತ್ತಿವೆ ಎಂದು ಉಭಯ ನಾಯಕರು ಒಪ್ಪಿಕೊಂಡು, ವ್ಯೂಹಾತ್ಮಕ ಪಾಲುದಾರಿಕೆಗೆ ಉಭಯ ದೇಶಗಳ ಉನ್ನತಿಯನ್ನು ಸ್ವಾಗತಿಸಿದರು. ವಿಶ್ವಸಂಸ್ಥೆ ಮತ್ತು ಇತರ ಬಹುಪಕ್ಷೀಯ ವೇದಿಕೆಗಳಲ್ಲಿ ಎರಡೂ ದೇಶಗಳ ನಡುವೆ ನಿಕಟ ಸಮನ್ವಯಕ್ಕೆ ಅವರು ಒತ್ತು ನೀಡಿದರು. ಕುವೈತ್ ಅಧ್ಯಕ್ಷತೆಯ ಅಡಿಯಲ್ಲಿ ಭಾರತ-ಜಿಸಿಸಿ ಸಂಬಂಧಗಳು ಮತ್ತಷ್ಟು ಬಲಗೊಳ್ಳಲಿವೆ ಎಂಬ ವಿಶ್ವಾಸವನ್ನು ಪ್ರಧಾನಿಯವರು ವ್ಯಕ್ತಪಡಿಸಿದರು.ಪ್ರಧಾನಮಂತ್ರಿಗಳಿಂದ ಕುವೈತ್‌ನ ಅಮೀರ್ ಅವರ ಭೇಟಿ
December 22nd, 05:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು.ಪ್ರಧಾನಮಂತ್ರಿ ಅವರಿಗೆ ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
December 22nd, 04:37 pm
ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರು ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಮುಬಾರಕ್ ಅಲ್-ಕಬೀರ್ ಆರ್ಡರ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಕುವೈತ್ ಪ್ರಧಾನಿ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಕುವೈತ್ ನ ಅಮೀರ್ ಅವರ ಗೌರವಾನ್ವಿತ ಅತಿಥಿಯಾಗಿ ಅರೇಬಿಯನ್ ಗಲ್ಫ್ ಕಪ್ ನಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
December 21st, 10:24 pm
ಕುವೈತ್ ನ ದೊರೆ (ಅಮೀರ್) ಘನತೆವೆತ್ತ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ನಲ್ಲಿ ನಡೆದ 26ನೇ ಅರೇಬಿಯನ್ ಗಲ್ಫ್ ಕಪ್ ನ ಉದ್ಘಾಟನಾ ಸಮಾರಂಭದಲ್ಲಿ ‘ಗೌರವ ಅತಿಥಿ’ಯಾಗಿ ಭಾಗವಹಿಸಿದರು. ಘನತೆವೆತ್ತ ಕುವೈತ್ ದೊರೆ (ಅಮೀರ್), ಘನತೆವೆತ್ತ ಕುವೈತ್ ಯುವರಾಜ, ಮತ್ತು ಘನತೆವೆತ್ತ ಕುವೈತ್ ಪ್ರಧಾನಮಂತ್ರಿಯವರೊಂದಿಗೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು, ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಪಾಲ್ಗೊಂಡರು. ಕುವೈತ್ ನ ಉನ್ನತ ನಾಯಕತ್ವದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಅನೌಪಚಾರಿಕ ಸಂವಾದಕ್ಕೆ ಕೂಡಾ ಈ ಕಾರ್ಯಕ್ರಮವು ಅವಕಾಶವನ್ನು ಒದಗಿಸಿಕೊಟ್ಟಿತು.ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಭಾಷಾಂತರಗಳಿಗಾಗಿ ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನಸೀಫ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
December 21st, 07:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಮಾಯಣ ಮತ್ತು ಮಹಾಭಾರತ ಮಹಾಗ್ರಂಥಗಳ ಅರೇಬಿಕ್ ಅನುವಾದ ಭಾಷಾಂತರ ಮತ್ತು ಪ್ರಕಟಿಸುವ ಪ್ರಯತ್ನಕ್ಕಾಗಿ ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನಸೀಫ್ ಅವರನ್ನು ಅಭಿನಂದಿಸಿದ್ದಾರೆ.ಕುವೈತ್ ನ ಕಾರ್ಮಿಕ ಶಿಬಿರಕ್ಕೆ ಪ್ರಧಾನಮಂತ್ರಿಯವರ ಭೇಟಿ
December 21st, 07:00 pm
ಕುವೈತ್ ಭೇಟಿಯ ಮೊದಲ ಕಾರ್ಯಕ್ರಮವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕುವೈತ್ ನ ಮಿನಾ ಅಬ್ದುಲ್ಲಾ ಪ್ರದೇಶದಲ್ಲಿರುವ ಸುಮಾರು 1500 ಭಾರತೀಯ ಪ್ರಜೆಗಳ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿಯವರು ಭಾರತದ ವಿವಿಧ ರಾಜ್ಯಗಳ ಅನೇಕ ವರ್ಗದ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರ ಯೋಗಕ್ಷೇಮವನ್ನು ವಿಚಾರಿಸಿದರು.ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕುವೈತ್ ನಲ್ಲಿ ಭಾರತೀಯ ಸಮುದಾಯದಿಂದ ಹೃದಯಸ್ಪರ್ಶಿ ಸ್ವಾಗತಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
December 21st, 06:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕುವೈತ್ ನಲ್ಲಿ ಭಾರತೀಯ ಸಮುದಾಯದಿಂದ ಹೃದಯಸ್ಪರ್ಶಿ ಸ್ವಾಗತ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದೊಂದಿಗಿನ ಅವರ ಶಕ್ತಿ, ಪ್ರೀತಿ ಮತ್ತು ಅಚಲ ಸಂಪರ್ಕ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಶ್ರೀ ಮೋದಿಯವರು ಹೇಳಿದ್ದಾರೆ.ಕುವೈತ್‌ಗೆ ಆಗಮಿಸಿದ ಪ್ರಧಾನಿ ಮೋದಿ
December 21st, 03:39 pm
ಕುವೈತ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. 43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರ ಮೊದಲ ಭೇಟಿ ಇದಾಗಿದೆ. ತಮ್ಮ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಅಮೀರ್, ಕ್ರೌನ್ ಪ್ರಿನ್ಸ್ ಮತ್ತು ಕುವೈತ್ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದಾರೆ. ಅವರು ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಅರೇಬಿಯನ್ ಗಲ್ಫ್ ಕಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
December 21st, 09:21 am
ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ.