ಪ್ರಧಾನಮಂತ್ರಿ ಅವರು ಎಲ್‍ವಿಎಂ3-ಎಂ6 ಮೂಲಕ ಬ್ಲೂಬರ್ಡ್ ಬ್ಲಾಕ್-2 ಯಶಸ್ವಿ ಉಡಾವಣೆಗಾಗಿ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ

December 24th, 10:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್‍ವಿಎಂ3-ಎಂ6 ಉಡಾವಣಾ ವಾಹನದ ಮೂಲಕ 'ಬ್ಲೂಬರ್ಡ್ ಬ್ಲಾಕ್-2' (BlueBird Block-2) ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳನ್ನು ಅಭಿನಂದಿಸಿದ್ದಾರೆ. ಬ್ಲೂಬರ್ಡ್ ಬ್ಲಾಕ್-2 ಅಮೆರಿಕದ ಒಂದು ಬಾಹ್ಯಾಕಾಶ ನೌಕೆಯಾಗಿದ್ದು, ಇದು ಭಾರತದಿಂದ ಉದ್ದೇಶಿತ ಕಕ್ಷೆಗೆ ಉಡಾವಣೆಗೊಂಡ ಅತ್ಯಂತ ಭಾರವಾದ ಉಪಗ್ರಹವಾಗಿದೆ. ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಹೆಮ್ಮೆಯ ಮೈಲಿಗಲ್ಲಾಗಿದೆ ಮತ್ತು ಆತ್ಮನಿರ್ಭರ ಭಾರತದ ಕಡೆಗಿನ ನಮ್ಮ ಪ್ರಯತ್ನಗಳ ಪ್ರತಿಬಿಂಬವಾಗಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ

October 28th, 12:47 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

'ಕರ್ಮಯೋಗಿ ಸಪ್ತಾಹ' - ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ

October 19th, 06:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 'ಕರ್ಮಯೋಗಿ ಸಪ್ತಾಹ' – ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದರು.

ಇಸ್ರೊದಿಂದ ಎಸ್ ಎಸ್ ಎಲ್ ವಿ-ಡಿ3 ಯಶಸ್ವಿ ಉಡಾವಣೆ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

August 16th, 01:48 pm

ಹೊಸ ಉಪಗ್ರಹ ಉಡಾವಣಾ ವಾಹನ (SSLV)-ಡಿ3ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ವಿಜ್ಞಾನಿಗಳನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.