ಸುಸ್ಥಿರತೆ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ - ಕೊರಿಯಾ ಜಂಟಿ ಹೇಳಿಕೆ
April 20th, 10:55 pm
ಇನ್ನು ಮುಂದೆ ಎರಡೂ ಕಡೆಯವರು ಎಂದು ಕರೆಯಲ್ಪಡುವ ಭಾರತ ಮತ್ತು ಕೊರಿಯಾ ದೇಶಗಳು ಹವಾಮಾನ ಬದಲಾವಣೆ, ಸಮುದ್ರ ಮತ್ತು ಉತ್ತರ ಧ್ರುವ ಸುತ್ತಲಿನ ದೊಡ್ಡ ಮತ್ತು ಅತ್ಯಂತ ಶೀತ ಪ್ರದೇಶ(ಆರ್ಕ್ಟಿಕ್)ದ ಸುಧಾರಣೆ ವಿಷಯಗಳಲ್ಲಿ ಪ್ರಾಯೋಗಿಕ ಸಹಭಾಗಿತ್ವ ಹೊಂದುವ ಮೂಲಕ ಜಾಗತಿಕ ಸುಸ್ಥಿರತೆಯ ಸವಾಲುಗಳನ್ನು ಎದುರಿಸಲು ದ್ವಿಪಕ್ಷೀಯ ಸಹಕಾರ ಬಲಪಡಿಸಲು ಒಪ್ಪಿಕೊಂಡಿವೆ.ಭಾರತ-ಕೊರಿಯಾ ಗಣರಾಜ್ಯ (ಆರ್‌ಒಕೆ-ದಕ್ಷಿಣ ಕೊರಿಯಾ) ವಿಶೇಷ ಕಾರ್ಯತಂತ್ರ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರ ದೃಷ್ಟಿಕೋನ
April 20th, 10:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೊರಿಯಾ ಗಣರಾಜ್ಯದ(ದಕ್ಷಿಣ ಕೊರಿಯಾ-ಆರ್‌ಒಕೆ) ಅಧ್ಯಕ್ಷ ಗೌರವಾನ್ವಿತ ಲೀ ಜೇ ಮ್ಯುಂಗ್ ಅವರು 2026 ಏಪ್ರಿಲ್ 19ರಿಂದ 21ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಇದು ಕೊರಿಯಾದ ಅಧ್ಯಕ್ಷರೊಬ್ಬರು ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಚೊಚ್ಚಲ ಭೇಟಿಯಾಗಿದೆ. ಅಧ್ಯಕ್ಷ ಲೀ ಜೇ ಮ್ಯುಂಗ್ ಅವರೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು ಮತ್ತು ಕೊರಿಯಾ ಉದ್ಯಮ ರಂಗದ ಪ್ರಮುಖ ಸಿಇಒಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು.ಹಡಗು ನಿರ್ಮಾಣ, ಸಾಗಣೆ ಮತ್ತು ಕಡಲ ಲಾಜಿಸ್ಟಿಕ್ಸ್‌ನಲ್ಲಿ ಪಾಲುದಾರಿಕೆಗಾಗಿ ಭಾರತ-ಆರ್‌ಒಕೆ ಸಮಗ್ರ ಚೌಕಟ್ಟು
April 20th, 10:51 pm
ಏಪ್ರಿಲ್ 20, 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೊರಿಯಾ ಗಣರಾಜ್ಯದ (ROK) ಗೌರವಾನ್ವಿತ ಶ್ರೀ ಲೀ ಜೇ ಮ್ಯುಂಗ್ ಅವರ ನಡುವಿನ ಸಭೆಯಲ್ಲಿ, ಹಡಗು ನಿರ್ಮಾಣ, ಸಾಗಣೆ ಮತ್ತು ಕಡಲ ಲಾಜಿಸ್ಟಿಕ್ಸ್‌ನಲ್ಲಿ ಪಾಲುದಾರಿಕೆಗಾಗಿ ತಮ್ಮ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ನಡುವಿನ ಪರಸ್ಪರ ಪ್ರಯೋಜನಕಾರಿ ಸಹಕಾರದ ಕುರಿತು ಎರಡೂ ಕಡೆಯವರು ಫಲಪ್ರದ ಮತ್ತು ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.ಕೊರಿಯಾ ಗಣರಾಜ್ಯದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ.
April 20th, 01:05 pm
ಅಧ್ಯಕ್ಷ ಲೀ ಅವರನ್ನು ಭಾರತಕ್ಕೆ ಅವರ ಮೊದಲ ಭೇಟಿಯಲ್ಲಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಅವರ ಜೀವನವು ಅಭ್ಯುದಯ, ಸೇವೆ ಮತ್ತು ಸಮರ್ಪಣೆಯ ಸ್ಪೂರ್ತಿದಾಯಕ ಉದಾಹರಣೆಯಾಗಿ ನಿಂತಿದೆ. ಅವರು ಎದುರಿಸಿದ ಪ್ರತಿಯೊಂದು ಸವಾಲು ಜನರಿಗೆ ಸೇವೆ ಸಲ್ಲಿಸುವ ಅವರ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ. ಇದು ಭಾರತಕ್ಕೆ ಅವರ ಮೊದಲ ಭೇಟಿಯಾಗಿದ್ದರೂ, ನಮ್ಮ ಮೊದಲ ಭೇಟಿಯಿಂದಲೇ ಅವರ ದೇಶದ ಮೇಲಿನ ಪ್ರೀತಿ ಮತ್ತು ಬಾಂಧವ್ಯ ಸ್ಪಷ್ಟವಾಗಿದೆ.ಜಿ7 ಶೃಂಗಸಭೆಯ ಸಂದರ್ಭದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 18th, 03:17 pm
ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಲೀ ಜೇ-ಮ್ಯುಂಗ್ ಅವರನ್ನು ಭೇಟಿಯಾದರು. ವಾಣಿಜ್ಯ, ಹೂಡಿಕೆ, ತಂತ್ರಜ್ಞಾನ, ಹಸಿರು ಹೈಡ್ರೋಜನ್, ಹಡಗು ನಿರ್ಮಾಣ ಮತ್ತು ಇತರ ಕ್ಷೇತ್ರಗಳಲ್ಲಿ ಭಾರತ ಮತ್ತು ಕೊರಿಯಾ ಗಣರಾಜ್ಯ ಒಟ್ಟಾಗಿ ಕೆಲಸ ಮಾಡಲು ಬಯಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಲೀ ಜೇ-ಮ್ಯುಂಗ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 04th, 08:38 am
ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಲೀ ಜೇ-ಮ್ಯುಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.