ಪಶ್ಚಿಮ ಬಂಗಾಳ ದಿನಕ್ಕೆ ಶುಭಾಶಯ ಕೋರಿದ ಪ್ರಧಾನಮಂತ್ರಿ, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕೊಡುಗೆಯ ಸ್ಮರಣೆ
June 20th, 08:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ದಿನದ ಅಂಗವಾಗಿ ಪಶ್ಚಿಮ ಬಂಗಾಳದ ಜನರಿಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ.ಮಹಾರಾಷ್ಟ್ರ ದಿನದಂದು ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
May 01st, 09:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.ಉತ್ಕಲಾ ದಿನದ ಅಂಗವಾಗಿ ಶುಭಾಶಯ ಕೋರಿದ ಪ್ರಧಾನಮಂತ್ರಿ
April 01st, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ಕಲಾ ದಿನದ ವಿಶೇಷ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ಒಡಿಶಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಕಾಲಾತೀತ ಸಂಕೇತವಾಗಿ ಎತ್ತರಕ್ಕೆ ನಿಂತಿರುವ ರಾಜ್ಯವಾಗಿದೆ. ಒಡಿಯಾ ಸಂಗೀತ, ಕಲೆ ಮತ್ತು ಸಾಹಿತ್ಯವು ಭಾರತವನ್ನು ಲೆಕ್ಕವಿಲ್ಲದಷ್ಟು ರೀತಿಯಲ್ಲಿ ಶ್ರೀಮಂತಗೊಳಿಸಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ”ಒಡಿಶಾದ ಜನರು ತಮ್ಮ ದೃಢಸಂಕಲ್ಪ, ಸರಳತೆ ಮತ್ತು ಆತ್ಮೀಯತೆಗೆ ಹೆಸರುವಾಸಿಯಾಗಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಒಡಿಶಾ ಪ್ರಗತಿಯ ಹೊಸ ಎತ್ತರವನ್ನು ಏರಲಿ’’ ಎಂದು ಶ್ರೀ ನರೇಂದ್ರ ಮೋದಿ ಆಶಿಸಿದ್ದಾರೆ.ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 11:10 am
ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಶ್ರೀ ಮಣಿಶಂಕರ್ ಮುಖೋಪಾಧ್ಯಾಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
February 20th, 07:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಮಣಿಶಂಕರ್ ಮುಖೋಪಾಧ್ಯಾಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ತಿರು ಡಿ. ಜ್ಞಾನಸುಂದರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
January 26th, 09:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿ. ಜ್ಞಾನಸುಂದರಂ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.ಖ್ಯಾತ ಬರಹಗಾರ ವಿನೋದ್ ಕುಮಾರ್ ಶುಕ್ಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 23rd, 07:35 pm
ಖ್ಯಾತ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದ್ ಕುಮಾರ್ ಶುಕ್ಲಾಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಹಿಂದಿ ಸಾಹಿತ್ಯ ಜಗತ್ತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಾಗಿ ಅವರನ್ನು ಸದಾ ಸ್ಮರಿಸಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
November 01st, 02:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಸಾಹಿತಿ ಮತ್ತು ಶಿಕ್ಷಣತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಕನ್ನಡದ ಖ್ಯಾತ ಲೇಖಕ ಮತ್ತು ಚಿಂತಕ ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
September 24th, 04:29 pm
ಕನ್ನಡದ ಖ್ಯಾತ ಲೇಖಕ ಮತ್ತು ಚಿಂತಕ ಶ್ರೀ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರನ್ನು ರಾಷ್ಟ್ರದ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಧೀಮಂತ ವ್ಯಕ್ತಿ ಎಂದು ಬಣ್ಣಿಸಿದ್ದಾರೆ.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.ಫಲಿತಾಂಶಗಳ ಪಟ್ಟಿ: ಘಾನಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ
July 03rd, 04:01 am
ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ (ಸಿಇಪಿ): ಕಲೆ, ಸಂಗೀತ, ನೃತ್ಯ, ಸಾಹಿತ್ಯ ಮತ್ತು ಪರಂಪರೆಯಲ್ಲಿ ಹೆಚ್ಚಿನ ಸಾಂಸ್ಕೃತಿಕ ತಿಳುವಳಿಕೆ ಮತ್ತು ವಿನಿಮಯವನ್ನು ಉತ್ತೇಜಿಸುವುದು.ಗುರುದೇವ ರವೀಂದ್ರನಾಥ್ ಠಾಗೋರ್ ಜಯಂತಿ ಪ್ರಯುಕ್ತ ಪ್ರಧಾನಮಂತ್ರಿ ಗೌರವ ನಮನ
May 09th, 02:27 pm
ಗುರುದೇವ ರವೀಂದ್ರನಾಥ್ ಠಾಗೋರ್ ಅವರ ಜಯಂತಿ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ.ಶ್ರೀ ಎಂ.ಟಿ.ವಾಸುದೇವನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 26th, 10:16 am
ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾನವ ಭಾವನೆಗಳ ಆಳವಾದ ಅನ್ವೇಷಣೆಯೊಂದಿಗೆ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ಕೃತಿಗಳು ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.