ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.ಗುಜರಾತ್‌ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
September 20th, 11:00 am
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್‌ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು
September 20th, 10:30 am
ಗುಜರಾತ್‌ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಪಿಎಂ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ 31.12.2024ರ ನಂತರ ಸಾಲದ ಅವಧಿಯನ್ನು ಪುನರ್ ರಚಿಸಲು ಮತ್ತು ವಿಸ್ತರಿಸಲು ಸಂಪುಟದ ಅನುಮೋದನೆ
August 27th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಸಾಲದ ಅವಧಿಯನ್ನು 31.12.2024ರ ನಂತರವೂ ಪುನರ್ ರಚಿಸಲು ಮತ್ತು ವಿಸ್ತರಿಸಲು ತನ್ನ ಅನುಮೋದನೆ ನೀಡಿದೆ. ಸಾಲದ ಅವಧಿಯನ್ನು ಈಗ 2030 ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯ ಒಟ್ಟು ವೆಚ್ಚ 7,332 ಕೋಟಿ ರೂ. ಪುನರ್ ರಚಿಸಿದ ಯೋಜನೆಯು 50 ಲಕ್ಷ ಹೊಸ ಫಲಾನುಭವಿಗಳು ಸೇರಿದಂತೆ 1.15 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 03rd, 01:03 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳು-ಮನೋಹರ್ ಲಾಲ್ ಜೀ, ಧರ್ಮೇಂದ್ರ ಪ್ರಧಾನ ಜೀ, ತೋಖಾನ್ ಸಾಹು ಜೀ, ಡಾ. ಸುಕಾಂತ ಮಜುಂದಾರ್ ಜೀ, ಹರ್ಷ್ ಮಲ್ಹೋತ್ರಾ ಜೀ-ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಜೀ, ನನ್ನ ಎಲ್ಲಾ ಸಂಸದರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಲ್ಲಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು
January 03rd, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯಲ್ಲಿ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಇನ್ನು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಯೋಜನೆಯಾಗಿದ್ದ ಸಭೆಯಲ್ಲಿ ಬೃಹತ್ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು ಮತ್ತು 2025 ಭಾರತದ ಅಭಿವೃದ್ಧಿಗೆ ಅಪಾರ ಅವಕಾಶಗಳ ವರ್ಷವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು, ಇದು ರಾಷ್ಟ್ರವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿಯತ್ತ ಕೊಂಡೊಯ್ಯುತ್ತದೆ ಎಂದರು. ಇಂದು, ಭಾರತವು ರಾಜಕೀಯ ಮತ್ತು ಆರ್ಥಿಕ ಸ್ಥಿರತೆಯ ಜಾಗತಿಕ ಸಂಕೇತವಾಗಿ ನಿಂತಿದೆ ಎಂದು ಪ್ರಧಾನಿ ಹೇಳಿದರು. ಮುಂಬರುವ ವರ್ಷದಲ್ಲಿ ದೇಶದ ಈ ಚಿತ್ರಣವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಉತ್ಪಾದನಾ ಕೇಂದ್ರವಾಗಲು, ನವೋದ್ಯಮಗಳು ಮತ್ತು ಉದ್ಯಮಶೀಲತೆಗೆ ಯುವಜನರನ್ನು ಸಬಲೀಕರಣಗೊಳಿಸಲು, ಹೊಸ ಕೃಷಿ ದಾಖಲೆಗಳನ್ನು ಸ್ಥಾಪಿಸಲು, ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಜೀವನವನ್ನು ಸುಲಭಗೊಳಿಸುವತ್ತ ಗಮನ ಹರಿಸುವ ಮೂಲಕ ಪ್ರತಿಯೊಬ್ಬ ನಾಗರಿಕನ ಜೀವನದ ಗುಣಮಟ್ಟವನ್ನು ಸುಧಾರಿಸುವ ವರ್ಷವಾಗಿ 2025 ಮೂಡಿ ಬರುವ ಕುರಿತ ತಮ್ಮ ಚಿಂತನೆ/ದೃಷ್ಟಿಕೋನವನ್ನು ಶ್ರೀ ಮೋದಿ ವಿವರಿಸಿದರು.Cabinet approves PM-Vidyalaxmi scheme to provide financial support to meritorious students
November 06th, 03:14 pm
The Union Cabinet, chaired by PM Modi, has approved PM Vidyalaxmi—a new scheme offering collateral-free loans and interest subvention to meritorious students for higher education. Covering top-ranked institutions, it aims to ensure financial constraints don't hinder academic ambitions, supporting over 22 lakh students through a streamlined, digital system.