India and Russia are embarking on a new journey of co-innovation, co-production, & co-creation: PM Modi says during the India–Russia Business Forum
December 05th, 03:45 pm
In his address at the India–Russia Business Forum, PM Modi conveyed deep gratitude to his friend President Putin for joining the forum. He noted that discussions have commenced on a Free Trade Agreement between India and the Eurasian Economic Union. He remarked that meaningful discussions have taken place over the past two days and expressed his happiness that all areas of India–Russia cooperation were represented.Prime Minister Shri Narendra Modi addresses the India – Russia Business Forum with Russian President H.E. Mr. Vladimir Putin
December 05th, 03:30 pm
In his address at the India–Russia Business Forum, PM Modi conveyed deep gratitude to his friend President Putin for joining the forum. He noted that discussions have commenced on a Free Trade Agreement between India and the Eurasian Economic Union. He remarked that meaningful discussions have taken place over the past two days and expressed his happiness that all areas of India–Russia cooperation were represented.ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 29th, 04:09 pm
ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು
October 29th, 04:08 pm
ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್ ಅಪ್ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
October 24th, 11:20 am
ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
October 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸಗಢದ 18 ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಮಲ್ಟಿಟ್ರ್ಯಾಕಿಂಗ್ (ಬಹುಮಾರ್ಗ) ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 894 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
October 07th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ₹24,634 ಕೋಟಿ ಅಂದಾಜು ವೆಚ್ಚದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಆ ಯೋಜನೆಗಳು ಹೀಗಿವೆ:ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 10:22 am
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು
September 25th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 17th, 11:20 am
ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಮಧ್ಯಪ್ರದೇಶದ ಧಾರ್‌ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
September 17th, 11:19 am
ಮಧ್ಯಪ್ರದೇಶದ ಧಾರ್‌ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ
September 12th, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಭಾಗಲ್ಪುರ್ - ದುಮ್ಕಾ – ರಾಂಪುರ್ ಹಾತ್ ಏಕ ರೈಲು ಮಾರ್ಗದಲ್ಲಿ (177 ಕಿ.ಮೀ) ಒಟ್ಟು 3,169 ಕೋಟಿ ರೂ ವೆಚ್ಚದಲ್ಲಿ ಜೋಡಿ ಹಳಿ ಮಾರ್ಗಕ್ಕೆ ಸಂಪುಟ ಅನುಮೋದನೆ
September 10th, 03:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾಗಲ್ಪುರ್ - ದುಮ್ಕಾ - ರಾಂಪುರ್ ಹಾತ್ ಏಕ ರೈಲು ಮಾರ್ಗವನ್ನು (177 ಕಿ.ಮೀ) ಒಟ್ಟು (ಅಂದಾಜು) ರೂ. 3,169 ಕೋಟಿ ವೆಚ್ಚದಲ್ಲಿ ಜೋಡಿ ಮಾರ್ಗ ನಿರ್ಮಾಣ ಮಾಡಲು ಅನುಮೋದನೆ ನೀಡಿದೆ.ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 29th, 11:20 am
ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
August 29th, 11:02 am
ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.ಕರ್ನಾಟಕ, ತೆಲಂಗಾಣ, ಬಿಹಾರ ಮತ್ತು ಅಸ್ಸಾಂಗಳಿಗೆ ಪ್ರಯೋಜನಕಾರಿಯಾದ 3 ಯೋಜನೆಗಳ ಮಲ್ಟಿ-ಟ್ರ್ಯಾಕಿಂಗ್ ವ್ಯವಸ್ಥೆಗೆ ಮತ್ತು ಗುಜರಾತ್ ರಾಜ್ಯದ ಕಚ್ ನ ದೂರದ ಪ್ರದೇಶಗಳನ್ನು ಸಂಪರ್ಕಿಸಲು ಒಂದು ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಂಪುಟ ಸಭೆಯು ಅನುಮೋದನೆ ನೀಡಿದೆ
August 27th, 04:50 pm
ಮೇಲಿನ ಯೋಜನೆಗಳು ಪ್ರಯಾಣಿಕರು ಮತ್ತು ಸರಕುಗಳ ಸುಗಮ ಮತ್ತು ವೇಗದ ಸಾಗಣೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಉಪಕ್ರಮಗಳು ಸಂಪರ್ಕವನ್ನು ಒದಗಿಸುತ್ತವೆ ಮತ್ತು ಪ್ರಯಾಣದ ಅನುಕೂಲತೆಯನ್ನು ಸುಧಾರಿಸುತ್ತವೆ, ಜೊತೆಗೆ ಲಾಜಿಸ್ಟಿಕ್ (ಸರಕುಗಳ ಸಾಗಣೆ) ವೆಚ್ಚವನ್ನು ಕಡಿಮೆ ಮಾಡುತ್ತವೆ ಮತ್ತು ತೈಲ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತವೆ. ಹೆಚ್ಚುವರಿಯಾಗಿ, ಯೋಜನೆಗಳು ಕಡಿಮೆ CO2 (ಇಂಗಾಲದ ಡೈಆಕ್ಸೈಡ್) ಹೊರಸೂಸುವಿಕೆಗೆ ಸಹಾಯಕವಾಗಿವೆ, ಇದರಿಂದಾಗಿ ಸುಸ್ಥಿರ ಮತ್ತು ಪರಿಣಾಮಕಾರಿ ರೈಲು ಕಾರ್ಯಾಚರಣೆಗಳನ್ನು ಬೆಂಬಲಿಸುತ್ತವೆ. ಯೋಜನೆಗಳು ಅದರ ನಿರ್ಮಾಣದ ಸಮಯದಲ್ಲಿ ಸುಮಾರು 251 (ಎರಡು ನೂರ ಐವತ್ತೊಂದು) ಲಕ್ಷ ಮಾನವ-ದಿನಗಳ ನೇರ ಉದ್ಯೋಗವನ್ನು ಸೃಷ್ಟಿಸುತ್ತವೆ.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಜುಲೈ 26-27ರಂದು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 25th, 10:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 26ರಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಟ್ಯುಟಿಕೋರಿನ್ ನಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ 4800 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಭಾರತದ ಪ್ರಧಾನಮಂತ್ರಿ ಮತ್ತು ಯುಕೆ ಪ್ರಧಾನಮಂತ್ರಿ ಅವರು ಭಾರತೀಯ ಮತ್ತು ಯುಕೆ ಉದ್ಯಮ ಪ್ರಮುಖರನ್ನು ಭೇಟಿಯಾದರು
July 24th, 07:38 pm
'ಐತಿಹಾಸಿಕ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ'ಕ್ಕೆ (CETA) ಸಹಿ ಹಾಕಿದ ಬಳಿಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್ ನ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರು, ಇಂದು ಭಾರತ ಮತ್ತು ಯುಕೆಯ ಉದ್ಯಮ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಗ್ಯ, ಫಾರ್ಮಾಸ್ಯುಟಿಕಲ್ಸ್, ರತ್ನ ಮತ್ತು ಆಭರಣ, ಆಟೋಮೊಬೈಲ್, ಇಂಧನ, ಉತ್ಪಾದನೆ, ದೂರಸಂಪರ್ಕ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ (ಐ.ಟಿ.), ಲಾಜಿಸ್ಟಿಕ್ಸ್, ಜವಳಿ ಮತ್ತು ಹಣಕಾಸು ಸೇವೆಗಳ ವಲಯಗಳನ್ನು ಪ್ರತಿನಿಧಿಸುವ ಉಭಯ ದೇಶಗಳ ಪ್ರಮುಖ ಉದ್ಯಮ ದಿಗ್ಗಜರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವಲಯಗಳು ಎರಡೂ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಆರ್ಥಿಕ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ.