2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
July 27th, 11:30 am
‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.ಪ್ರಧಾನಮಂತ್ರಿ ಅವರು ಲೋಕಮಾನ್ಯ ತಿಲಕ್ ಜಯಂತಿಯಂದು ಗೌರವ ನಮನ ಸಲ್ಲಿಸಿದರು
July 23rd, 09:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಮಾನ್ಯ ತಿಲಕ್ ಅವರ ಜಯಂತಿಯಂದು ಗೌರವ ನಮನ ಸಲ್ಲಿಸಿದರು. ಅವರು ಅಚಲ ಸಂಕಲ್ಪದಿಂದ ಭಾರತದ ಸ್ವಾತಂತ್ರ್ಯ ಚಳುವಳಿಯ ಕಿಚ್ಚನ್ನು ಹೊತ್ತಿಸಿದ ಪ್ರವರ್ತಕ ನಾಯಕರಾಗಿದ್ದರು ಎಂದು ಶ್ರೀ ಮೋದಿ ಹೇಳಿದ್ದಾರೆ.ನಮ್ಮ ಭಾಷೆ ನಮ್ಮ ಸಂಸ್ಕೃತಿಯ ವಾಹಕ: ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರಧಾನಿ ಮೋದಿ
February 21st, 05:00 pm
ಪ್ರಧಾನಿ ಮೋದಿ ನವದೆಹಲಿಯಲ್ಲಿ 98 ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ರಾಷ್ಟ್ರವು ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350 ನೇ ವಾರ್ಷಿಕೋತ್ಸವ, ಪುಣ್ಯಶ್ಲೋಕ್ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಯತ್ನಗಳಿಂದ ರಚಿಸಲಾದ ನಮ್ಮ ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ವೀಕ್ಷಿಸುತ್ತಿರುವ ಮಹತ್ವದ ಸಮಯದಲ್ಲಿ ಸಮ್ಮೇಳನ ನಡೆಯುತ್ತಿದೆ ಎಂದು ಶ್ರೀ ಮೋದಿ ಎತ್ತಿ ತೋರಿಸಿದರು.98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 04:30 pm
1878ರಲ್ಲಿ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೆ, ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವು 147 ವರ್ಷಗಳ ಭಾರತದ ಪ್ರಯಾಣಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ಮಹಾದೇವ್ ಗೋವಿಂದ ರಾನಡೆ, ಶ್ರೀ ಹರಿ ನಾರಾಯಣ್ ಆಪ್ಟೆ, ಶ್ರೀ ಮಾಧವ ಶ್ರೀಹರಿ ಆನೆ, ಶ್ರೀ ಶಿವರಾಮ ಪರಾಂಜಪೆ, ಶ್ರೀ ವೀರ ಸಾವರ್ಕರ್ ಅವರಂತಹ ಅನೇಕ ದಿಗ್ಗಜರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು ಎಂದು ಅವರು ಹೇಳಿದರು. ಈ ಹೆಮ್ಮೆಯ ಸಂಪ್ರದಾಯದ ಭಾಗವಾಗಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಶ್ರೀ ಶರದ್ ಪವಾರ್ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ದೇಶದ ಮತ್ತು ಪ್ರಪಂಚದಾದ್ಯಂತದ ಎಲ್ಲಾ ಮರಾಠಿ ಪ್ರೇಮಿಗಳನ್ನು ಅಭಿನಂದಿಸಿದರು.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 05th, 07:05 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 05th, 07:00 pm
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.We will leave no stone unturned in fulfilling people’s aspirations: PM Modi in Bhubaneswar, Odisha
September 17th, 12:26 pm
PM Modi launched Odisha's 'SUBHADRA' scheme for over 1 crore women and initiated significant development projects including railways and highways worth ₹3800 crore. He also highlighted the completion of 100 days of the BJP government, showcasing achievements in housing, women's empowerment, and infrastructure. The PM stressed the importance of unity and cautioned against pisive forces.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಅತಿದೊಡ್ಡ ಮಹಿಳಾ ಕೇಂದ್ರಿತ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು
September 17th, 12:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು. ಇದು ಅತಿದೊಡ್ಡ, ಏಕಾಂಗಿ ಮಹಿಳಾ ಕೇಂದ್ರಿತ ಯೋಜನೆಯಾಗಿದ್ದು, 1 ಕೋಟಿಗೂ ಹೆಚ್ಚು ಮಹಿಳೆಯರನ್ನು ಒಳಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ಅವರು 10 ಲಕ್ಷಕ್ಕೂ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಚಾಲನೆ ನೀಡಿದರು. ಶ್ರೀ ಮೋದಿ ಅವರು 2800 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು 1000 ಕೋಟಿ ರೂ.ಗೂ ಅಧಿಕ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿ ಅವರು ಸುಮಾರು 14 ರಾಜ್ಯಗಳ ಪಿಎಂಎವೈ-ಜಿ ಅಡಿಯಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ನೆರವನ್ನು ಬಿಡುಗಡೆ ಮಾಡಿದರು, ದೇಶಾದ್ಯಂತ ಪಿಎಂಎವೈ (ಗ್ರಾಮೀಣ ಮತ್ತು ನಗರ) 26 ಲಕ್ಷ ಫಲಾನುಭವಿಗಳಿಗೆ ಗೃಹ ಪ್ರವೇಶ ಆಚರಣೆಯಲ್ಲಿ ಭಾಗವಹಿಸಿದರು ಮತ್ತು ಪಿಎಂಎವೈ (ಗ್ರಾಮೀಣ ಮತ್ತು ನಗರ) ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು. ಇದಲ್ಲದೆ, ಪಿಎಂಎವೈ-ಜಿಗಾಗಿ ಹೆಚ್ಚುವರಿ ಮನೆಗಳ ಸಮೀಕ್ಷೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) 2.0 ರ ಕಾರ್ಯಾಚರಣೆ ಮಾರ್ಗಸೂಚಿಗಳಿಗಾಗಿ ಅವರು ಆವಾಸ್ + 2024 ಆ್ಯಪ್ ಅನ್ನು ಬಿಡುಗಡೆ ಮಾಡಿದರು.ಲೋಕಮಾನ್ಯ ತಿಲಕರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ
July 23rd, 09:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಮಾನ್ಯ ತಿಲಕರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವ ಗೌರವವನ್ನು ಹೊಂದಿದ್ದ ಪುಣೆಯಲ್ಲಿ ಕಳೆದ ವರ್ಷದ ಕಾರ್ಯಕ್ರಮದಲ್ಲಿ ಶ್ರೀ ಮೋದಿಯವರು ತಮ್ಮ ಭಾಷಣವನ್ನು ಹಂಚಿಕೊಂಡರು.ವಂಚಿತರಿಗೆ ಆದ್ಯತೆ ನೀಡುವುದೇ ಎನ್‌ಡಿಎ ಸರ್ಕಾರದ ಅಭಿವೃದ್ಧಿ ಮಾದರಿ: ಪ್ರಧಾನಿ ಮೋದಿ
July 13th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮುಂಬೈ ಮತ್ತು ಹತ್ತಿರದ ಪ್ರದೇಶಗಳ ನಡುವೆ ರಸ್ತೆ ಮತ್ತು ರೈಲು ಸಂಪರ್ಕವನ್ನು ಸುಧಾರಿಸಲು 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಸಮರ್ಪಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
July 13th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.ಹೊಸ ಸಂಸತ್ ಭವನದಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
September 19th, 01:50 pm
ಉದ್ಘಾಟನೆಯಾದ ನೂತನ ಸಂಸತ್ ಭವನದಲ್ಲಿ ನಡೆಯುತ್ತಿರುವ ಐತಿಹಾಸಿಕ ಲೋಕಸಭೆ ಅಧಿವೇಶನ ಇದಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮತ್ತು ದೇಶದ ಸಮಸ್ತ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಹೊಸ ಸಂಸತ್ ಭವನದಲ್ಲಿ ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಭಾಷಣ
September 19th, 01:18 pm
ಸದನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಹೊಸ ಸಂಸತ್ ಭವನದಲ್ಲಿ ಇಂದು ಐತಿಹಾಸಿಕ ಮೊದಲ ಅಧಿವೇಶನ ನಡೆಯುತ್ತಿದೆ, ಅದರ ಅಂಗವಾಗಿ ಎಲ್ಲರಿಗೂ ಶುಭಾಶಯಗಳನ್ನು ಕೋರುವುದಾಗಿ ಹೇಳಿದರು. ಹೊಸ ಸಂಸತ್ ಭವನದಲ್ಲಿ ಮೊದಲ ದಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಅವಕಾಶ ನೀಡಿದ್ದಕ್ಕಾಗಿ ಸ್ಪೀಕರ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ಪ್ರಧಾನಿ ಅವರು, ಎಲ್ಲ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದ ಪ್ರಾಮುಖ್ಯತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ, ಅಮೃತ ಕಾಲದ ಉದಯದಲ್ಲಿ ಭಾರತವು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮೂಲಕ ಭವಿಷ್ಯದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ ಎಂದರು. ದೇಶದ ಇತ್ತೀಚಿನ ಸಾಧನೆಗಳನ್ನು ಪ್ರಸ್ತಾಪಿಸಿದ ಪ್ರಧಾನಿ, ವಿಜ್ಞಾನ ವಲಯದಲ್ಲಿ ಚಂದ್ರಯಾನ-3 ರ ಯಶಸ್ಸು ಮತ್ತು ಜಿ-20 ಸಂಘಟನೆ ಮತ್ತು ಜಾಗತಿಕ ಮಟ್ಟದಲ್ಲಿ ಅದರ ಪರಿಣಾಮವನ್ನು ಪ್ರಸ್ತಾಪಿಸಿದರು. ಭಾರತಕ್ಕೆ ಒಂದು ಅಪೂರ್ವ ಅವಕಾಶ ಒದಗಿ ಬಂದಿದ್ದು, ಈ ಬೆಳಕಿನಲ್ಲಿ ರಾಷ್ಟ್ರದ ನೂತನ ಸಂಸತ್ ಭವನ ಇಂದು ಕಾರ್ಯಾರಂಭ ಮಾಡುತ್ತಿದೆ ಎಂದು ಹೇಳಿದರು .ಮಧ್ಯಪ್ರದೇಶದ ಬಿನಾದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 14th, 12:15 pm
ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶದ ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಕುಟುಂಬ ಸದಸ್ಯರೇ!ಮಧ್ಯಪ್ರದೇಶದ ಬೀನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
September 14th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬೀನಾದಲ್ಲಿ ಪೆಟ್ರೋ ಕೆಮಿಕಲ್ಸ್ ಸಂಸ್ಕರಣಾ ಘಟಕವನ್ನು [ಬಿಪಿಸಿಎಲ್]ವನ್ನು 49,000 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನರ್ಮದಾಪುರಂ ವಿದ್ಯುತ್ ಮತ್ತು ನವೀಕೃತ ಇಂಧನ ಉತ್ಪಾದನಾ ವಲಯ ಮತ್ತು ರಾತಲಂನಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ಗೆ ಶಿಲಾನ್ಯಾಸ ಇಂದೋರ್ ನಲ್ಲಿ ಎರಡು ಮಾಹಿತಿ ತಂತ್ರಜ್ಞಾನ ಪಾರ್ಕ್ ಮತ್ತು ರಾಜ್ಯದ ವಿವಿಧೆಡೆ ಆರು ಹೊಸ ಕೈಗಾರಿಕಾ ಪಾರ್ಕ್ ಗಳಿಗೆ ಪ್ರಧಾನಮಂತ್ರಿ ಅವರು ಶಂಕು ಸ್ಥಾಪನೆ ನೆರವೇರಿಸಿದರು.ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
August 01st, 02:00 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರೇ ಮತ್ತು ಅಜಿತ್ ಪವಾರ್ ಅವರೇ, ದಿಲೀಪ್ ಅವರೇ, ಇತರ ಸಚಿವರೇ, ಸಂಸದರೇ, ಶಾಸಕರು ಮತ್ತು ಸಹೋದರ -ಸಹೋದರಿಯರೇ!ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ.
August 01st, 01:41 pm
ಪುಣೆಯ ಮೆಟ್ರೋದಲ್ಲಿ ಪೂರ್ಣಗೊಂಡ ವಿಭಾಗಗಳಲ್ಲಿ ಮೆಟ್ರೋ ರೈಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು. ಪಿಂಪ್ರಿ ಚಿನ್ ಚನ್ ವಾಡ್ ನಗರ ಪಾಲಿಕೆ [ಪಿಸಿಎಂಸಿ] ವ್ಯಾಪ್ತಿಯಡಿ 1280 ಮನೆಗಳನ್ನು ಅವರು ಹಸ್ತಾಂತರಿಸಿದರು ಮತ್ತು ಪುಣೆ ನಗರ ಪಾಲಿಕೆಯಿಂದ ಪಿಎಂಎವೈ ಯೋಜನೆಯಡಿ 2650ಕ್ಕೂ ಹೆಚ್ಚು ಮನೆಗಳನ್ನು ಫಲಾನುಭವಿಗಳಿಗಾಗಿ ನಿರ್ಮಿಸಲಾಗಿದೆ. ಪಿಸಿಎಂಸಿಯಿಂದ ಸುಮಾರು 1190 ಪಿಎಂಎವೈ ಮನೆಗಳ ನಿರ್ಮಾಣಕ್ಕೆ ಅವರು ಶಿಲಾನ್ಯಾಸ ನೆರವೇರಿಸಿದರು. ಪುಣೆ ಮೆಟ್ರೋಪಾಲಿಟಿನ್ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ 6400ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಪಿಸಿಎಂಸಿ ಅಭಿವೃದ್ಧಿಯಿಂದ 300 ಕೋಟಿ ರೂಪಾಯಿ ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಘಟಕವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.