Our government is making the vision of women-led development the axis of development: PM Modi in Bhopal, Madhya Pradesh

May 31st, 11:00 am

PM Modi participated in the Devi Ahilyabai Mahila Sashaktikaran Mahasammelan and launched multiple projects in Bhopal, Madhya Pradesh. Quoting Devi Ahilyabai, he reiterated that true governance means serving the people and improving their lives. Emphasising the government’s commitment to increasing women's participation in policymaking, the PM highlighted the progressive steps taken over the past decade.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು

May 31st, 10:27 am

ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನವನ್ನುದ್ದೇಶಿಸಿ ಭಾಷಣ ಮಾಡಿದರು. ಅವರು ಭೋಪಾಲ್ ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 'ಮಾ ಭಾರತಿ'ಗೆ ಗೌರವ ಸಲ್ಲಿಸುವ ಮೂಲಕ ಮತ್ತು ಭಾರತದ ಮಹಿಳೆಯರ ಶಕ್ತಿಯನ್ನು ಅಂಗೀಕರಿಸುವ ಮೂಲಕ ಪ್ರಾರಂಭಿಸಿದರು. ಈ ಕಾರ್ಯಕ್ರಮವನ್ನು ಆಶೀರ್ವದಿಸಲು ಬಂದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ದೊಡ್ಡ ಗುಂಪಿಗೆ ಅವರು ಕೃತಜ್ಞತೆ ಸಲ್ಲಿಸಿದರು, ಅವರ ಉಪಸ್ಥಿತಿಯಿಂದ ತಮಗೆ ಗೌರವವಿದೆ ಎಂದು ಹೇಳಿದರು. ಇಂದು ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ, ಇದು 140 ಕೋಟಿ ಭಾರತೀಯರಿಗೆ ಸ್ಫೂರ್ತಿಯ ಸಂದರ್ಭ ಮತ್ತು ರಾಷ್ಟ್ರ ನಿರ್ಮಾಣದ ಸ್ಮರಣೀಯ ಪ್ರಯತ್ನಗಳಿಗೆ ಕೊಡುಗೆ ನೀಡುವ ಕ್ಷಣವಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇವಿ ಅಹಲ್ಯಾಬಾಯಿ ಅವರನ್ನು ಉಲ್ಲೇಖಿಸಿದ ಅವರು, ನಿಜವಾದ ಆಡಳಿತ ಎಂದರೆ ಜನರ ಸೇವೆ ಮತ್ತು ಅವರ ಜೀವನವನ್ನು ಸುಧಾರಿಸುವುದು ಎಂದು ಪುನರುಚ್ಚರಿಸಿದರು. ಇಂದಿನ ಕಾರ್ಯಕ್ರಮವು ಅವರ ದೃಷ್ಟಿಕೋನವನ್ನು ಸಾಕಾರಗೊಳಿಸುತ್ತದೆ ಮತ್ತು ಅವರ ಆದರ್ಶಗಳನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಹೇಳಿದರು. ಇಂದೋರ್ ಮೆಟ್ರೋಗೆ ಚಾಲನೆ ನೀಡಿರುವುದನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ದಾತಿಯಾ ಮತ್ತು ಸತ್ನಾಕ್ಕೆ ವಾಯು ಸಂಪರ್ಕವನ್ನು ಸೇರಿಸಲಾಯಿತು. ಈ ಯೋಜನೆಗಳು ಮಧ್ಯಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸುತ್ತವೆ, ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಹಾಜರಿದ್ದ ಎಲ್ಲರಿಗೂ ಅವರು ಅಭಿನಂದನೆ ಸಲ್ಲಿಸಿದರು.

ಮೇ 31ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

May 30th, 11:15 am

ಲೋಕಮಾತಾ ದೇವಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 31ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಗ್ಗೆ 11:15ರ ಸುಮಾರಿಗೆ ಭೋಪಾಲ್ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತಿಕರಣ ಮಹಾಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಭೋಪಾಲ್ ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.